ವರ್ಗಾವಣೆ ರದ್ದತಿಗೆ ಹೈಕೋರ್ಟ್ ಮೆಟ್ಟಿಲೇರಿದ ಐಜಿಪಿ ಅಮೃತ್ ಪೌಲ್
Team Udayavani, Jun 29, 2018, 6:40 AM IST
ಬೆಂಗಳೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಕೇಂದ್ರ ವಲಯ ಐಜಿಪಿ ಸ್ಥಾನದಿಂದ ತಮ್ಮನ್ನು ವರ್ಗಾವಣೆಗೊಳಿಸಿದ ಕೇಂದ್ರೀಯ ಆಡಳಿತಾತ್ಮಕ ಮಂಡಳಿ(ಸಿಎಟಿ) ಆದೇಶ ರದ್ದುಕೋರಿ ಆಡಳಿತ ವಿಭಾಗದ ಐಜಿಪಿ ಅಮೃತ್ಪೌಲ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಮೃತ್ಪೌಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾ.ಎಚ್.ಜಿ.ರಮೇಶ್ ಹಾಗೂ ನ್ಯಾ. ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ಪೀಠ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ರಾಜ್ಯಸರ್ಕಾರಕ್ಕೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಜುಲೈ 5ಕ್ಕೆ ಮುಂದೂಡಿತು.
ಈ ಹಿಂದೆ ನಡೆದ ಚುನಾವಣೆ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣದಿಂದ ವಿಚಾರಣೆ ಎದುರಿಸುತ್ತಿರುವ ಅಧಿಕಾರಿಗಳನ್ನು ಚುನಾವಣಾ ಕಾರ್ಯ ನಿರ್ವಹಿಸದಂತೆ ನೋಡಿಕೊಳ್ಳಬೇಕು ಎಂದು ಕಳೆದ ವಿಧಾನಸಭೆ ಚುನಾವಣೆ ವೇಳೆ ಚುನಾವಣಾ ಆಯೋಗ ಸರ್ಕಾರಕ್ಕೆ ಸೂಚಿಸಿತ್ತು. ಆಯೋಗ ನೀಡಿದ ಪಟ್ಟಿಯಲ್ಲಿ ಐಜಿಪಿ ಅಮೃತ್ಪೌಲ್ ಅವರ
ಹೆಸರೂ ಇತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕೇಂದ್ರ ವಲಯ ಐಜಿಪಿ ಹುದ್ದೆಯಿಂದ ಬೆಂಗಳೂರು ಆಡಳಿತ ವಿಭಾಗದ ಐಜಿಪಿ ಹುದ್ದೆಗೆ ವರ್ಗಾವಣೆಗೊಳಿಸಿ ರಾಜ್ಯಸರ್ಕಾರ ಮಾ. 9ರಂದು ಆದೇಶ ಹೊರಡಿಸಿತ್ತು.
ಇದನ್ನು ಪ್ರಶ್ನಿಸಿ ಅಮೃತ್ ಪೌಲ್ ಸಿಎಟಿ ಮೊರೆ ಹೋಗಿದ್ದರಾದರೂ ಅದು ಸರ್ಕಾರದ ಆದೇಶವನ್ನು ಎತ್ತಿಹಿಡಿದಿತ್ತು. ಈಗ ಹೈಕೋರ್ಟ್ ಮೊರೆ ಹೋಗಿರುವ ಅಮೃತ್ ಪೌಲ್ ಯಾವುದೇ ಕರ್ತವ್ಯ ಲೋಪವೆಸಗಿಲ್ಲ. ಪುನಃ ಕೇಂದ್ರ ವಲಯ ಐಜಿಪಿಯಾಗಿ ಮುಂದುವರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಅಮೃತ್ ಪೌಲ್ ಅರ್ಜಿಯಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.