ಕ್ಯಾನ್ಸರ್ ಹಿಮ್ಮೆಟ್ಟಿಸಲು ಸಮುದಾಯ ಕೈ ಜೋಡಿಸಲಿ
Team Udayavani, Jun 29, 2018, 11:38 AM IST
ಬೆಂಗಳೂರು: ಮಾರಕ ಕ್ಯಾನ್ಸರ್ ಕಾಯಿಲೆ ಹಿಮ್ಮೆಟ್ಟಿಸಲು ಸರ್ಕಾರಗಳ ಜತೆಗೆ ಸಮುದಾಯ ಕೈಜೋಡಿಸಬೇಕು. ಆಧುನಿಕ ಚಿಕಿತ್ಸಾ ಕ್ರಮಗಳೊಂದಿಗೆ ಈ ಕಾಯಿಲೆ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ “ರಾಜ್ಯ ಕ್ಯಾನ್ಸರ್ ಸಂಸ್ಥೆ’ ಕಟ್ಟಡವನ್ನು ಗುರುವಾರ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಕ್ಯಾನ್ಸರ್ ವೇಗವಾಗಿ ಹೆಚ್ಚುತ್ತಿದೆ. ರಾಷ್ಟ್ರ ಮತ್ತು ಸ್ಥಳೀಯ ಮಟ್ಟದಲ್ಲಿ ಕೈಗೊಳ್ಳುವ ಮುನ್ನೆಚ್ಚರಿಕೆ ಕ್ರಮಗಳು ನಗಣ್ಯವಾಗಿವೆ. ಅಲಕ್ಷ್ಯವೇ ಕ್ಯಾನ್ಸರ್ ವ್ಯಾಪಿಸಲು ಕಾರಣ ಎಂದರು.
ಒಟ್ಟು ಕ್ಯಾನ್ಸರ್ ರೋಗಿಗಳ ಪೈಕಿ ಶೇ.12 ಮಂದಿ ಮಾತ್ರ ಆರಂಭದ ಹಂತದಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಉಳಿದವರು ಪರಿಸ್ಥಿತಿ ಕೈ ಮೀರಿದ ಬಳಿಕ ಚಿಕಿತ್ಸೆ ಮೊರೆ ಹೋಗುತ್ತಾರೆ. ಕ್ಯಾನ್ಸರ್ ಸೇರಿ ಈಗಿನ ಎಲ್ಲ ಕಾಯಿಲೆಗಳಿಗೆ ಮೂಲ, ನಮ್ಮ ಅವೈಜ್ಞಾನಿಕ ಆಹಾರ ಪದ್ಧತಿ, ಯಾಂತ್ರಿಕ ಜೀವನ ಶೈಲಿ. ಆದ್ದರಿಂದ ಕಾಯಿಲೆಗಳು ಬಾರದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು. ಕೃತಕ ಆಹಾರ ಬಿಟ್ಟು, ಪ್ರಾಕೃತಿಕ ಆಹಾರ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಆಘಾತಕಾರಿ ಅಂಕಿ-ಅಂಶ: ಕೇಂದ್ರ ಸರ್ಕಾರದ 120 ಕೋಟಿ ರೂ. ನೆರವು ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಕ್ಯಾನ್ಸರ್ ಸಂಸ್ಥೆ ಕಟ್ಟಡ ನಿರ್ಮಿಸಲಾಗಿದೆ. ಸದ್ಯ ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಅಂದಾಜು 30 ಲಕ್ಷ ಇದೆ. ಪ್ರತಿ ವರ್ಷ 10 ಲಕ್ಷ ಮಂದಿ ಈ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಪ್ರತಿ ವರ್ಷ 5 ಲಕ್ಷ ಮಂದಿ ಕ್ಯಾನ್ಸರ್ ಕಾಯಿಲೆಯಿಂದ ಸಾವನ್ನಪ್ಪುತ್ತಿದ್ದಾರೆ.
ಭಾರತೀಯ ವೈಜ್ಞಾನಿಕ ಸಂಶೋಧನಾ ಸಂಸ್ಥೆಯ (ಐಸಿಎಂಆರ್) 2016ರ ವರದಿ ಪ್ರಕಾರ ದೇಶದಲ್ಲಿ 2020ರ ವೇಳೆಗೆ ಪ್ರತಿ ವರ್ಷ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುವವರ ಸಂಖ್ಯೆ 17.3 ಲಕ್ಷ ಆಗಲಿದೆ. ಸಾವಿನ ಪ್ರಮಾಣ 8.8 ಲಕ್ಷ ಆಗಲಿದೆ. ಈ ಅಂಕಿ-ಅಂಶಗಳು ಆಘಾತ ಹುಟ್ಟಿಸುತ್ತಿವೆ ಎಂದು ಉಪರಾಷ್ಟ್ರಪತಿಗಳು ಆತಂಕ ವ್ಯಕ್ತಪಡಿಸಿದರು.
ರಾಜ್ಯಪಾಲ ವಿ.ಆರ್.ವಾಲಾ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ಶಿವಾನಂದ ಪಾಟೀಲ್, ಶಾಸಕ ಉದಯ ಗರುಡಾಚಾರ್, ರಾಜೀವಗಾಂಧಿ ಆರೋಗ್ಯ ವಿವಿ ಉಪ ಕುಲಪತಿ ಡಾ.ಎಸ್.ಸಚ್ಚಿದಾನಂದ, ಕಿದ್ವಾಯಿ ಸಂಸ್ಥೆ ನಿರ್ದೇಶಕ ಡಾ. ಕೆ.ಬಿ.ಲಿಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.
ಬಜೆಟ್‌ನಲ್ಲಿ ಹೆಚ್ಚು ಅನುದಾನ- ಸಿಎಂ: “ಮೂಳೆ ಮಜ್ಜೆ ಕಸಿ’ (ಬೋನ್ ಮ್ಯಾರೋ ಟ್ರಾನ್ಸ್‌ಪ್ಲಾಂಟ್) ಚಿಕಿತ್ಸಾ ವ್ಯವಸ್ಥೆ ಅಳವಡಿಸಿಕೊಳ್ಳಲು ಕಿದ್ವಾಯಿ ಸಂಸ್ಥೆಗೆ ಅಗತ್ಯವಿರುವ ಅನುದಾನ ಒದಗಿಸಲು ಸರ್ಕಾರ ಸಿದ್ಧವಿದ್ದು, ಬಜೆಟ್‌ನಲ್ಲಿ ಅನುದಾನ ಘೋಷಣೆ ಮಾಡುವುದಾಗಿ ಇದೇ ವೇಳೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.
“ಮೂಳೆ ಮಜ್ಜೆ ಸಮಸ್ಯೆಯಿಂದ ಬಳಲುವವರ ನೋವು ಕಣ್ಣಾರೆ ಕಂಡಿದ್ದೇನೆ. ಚಿಕ್ಕ ಮಕ್ಕಳಲ್ಲೂ ಈ ಸಮಸ್ಯೆ ಇತ್ತಿಚಿಗೆ ಹೆಚ್ಚಾಗಿದೆ. ಮೂಳೆ ಮಜ್ಜೆ ಕಸಿ ಮಾಡಬೇಕಾದರೆ ಒಬ್ಬ ರೋಗಿಗೆ 30 ರಿಂದ 35 ಲಕ್ಷ ರೂ. ಬೇಕು. ಬಡವರಿಂದ ಈ ವೆಚ್ಚ ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಕಡಿಮೆ ದರದಲ್ಲಿ ಚಿಕಿತ್ಸೆ ಸಿಗಲು ಮೂಳೆ ಮಜ್ಜೆ ಕಸಿ ಚಿಕಿತ್ಸಾ ವ್ಯವಸ್ಥೆಯನ್ನು ಕಿದ್ವಾಯಿ ಸಂಸ್ಥೆ ಅಳವಡಿಸಿಕೊಳ್ಳಲಿ.
ಇದಕ್ಕೆ ಬೇಕಾಗುವ ಹಣಕಾಸು ಸರ್ಕಾರ ನೀಡಲಿದೆ. ಈ ಬಗ್ಗೆ ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ಆರೋಗ್ಯ ಸಚಿವರೊಂದಿಗೆ ಚರ್ಚಿಸಿದ್ದೇನೆ. ಬಜೆಟ್‌ನಲ್ಲಿ ಅನುದಾನದ ಘೋಷಣೆ ಮಾಡುತ್ತೇನೆ,’ ಎಂದರು. ಜತೆಗೆ “ಆರೋಗ್ಯ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಆರ್ಥಿಕ ನೆರವು ನೀಡುತ್ತಿದೆ. ರಾಜ್ಯ ಸರ್ಕಾರ ಸಹ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.