ಪಿಂಪ್ರಿ-ಚಿಂಚ್ವಾಡ್ ಬಂಟರ ಸಂಘ ಪರಿಸರ ದಿನಾಚರಣೆ
Team Udayavani, Jun 29, 2018, 12:07 PM IST
ಪುಣೆ:ಪಿಂಪ್ರಿ-ಚಿಂಚ್ವಾಡ್ ಬಂಟರ ಸಂಘದ ವತಿಯಿಂದ ದುರ್ಗಾ ಟೆಕ್ಡಿ ನಿಗ್ಡಿ ಇಲ್ಲಿ ಪರಿಸರ ಸಂರಕ್ಷಣೆಯ ಅಂಗವಾಗಿ ಗಿಡ ನೆಡಲಾಯಿತು.
ಸಂಘದ ಪದಾಧಿಕಾರಿಗಳು ದುರ್ಗಾ ಟೆಕ್‌ಡಿಗೆ ತೆರಳಿ ನೂರಾರು ಸಂಖ್ಯೆಯ ಗಿಡಗಳನ್ನು ನೆಟ್ಟರು. ಈ ಸಂದರ್ಭ ಸಂಘದ ಅಧ್ಯಕ್ಷ ಕಟ್ಟಿಂಗೇರಿಮನೆ ಮಹೇಶ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಬಜಗೋಳಿ, ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ, ಶಿಕ್ಷಣ ಮತ್ತು ಸಮಾಜಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ಡಾ| ವಿನಯ್ ಶೆಟ್ಟಿ ಕೆಂಜೂರು, ಯುವ ವಿಭಾಗದ ಕಾರ್ಯಾಧ್ಯಕ್ಷ ಅಜಿತ್ ಶೆಟ್ಟಿ ಮುಂಡ್ಕೂರು, ಮಾಜಿ ನಗರ ಸೇವಕರಾದ ಪ್ರಸಾದ್ ಶೆಟ್ಟಿ, ಸದಸ್ಯರುಗಳಾದ ರಮೇಶ್ ಡಿ. ಶೆಟ್ಟಿ, ವಿಶ್ವನಾಥ್ ಶೆಟ್ಟಿ, ಅರುಣ್ ಶೆಟ್ಟಿ, ಚೇತನ್ ಶೆಟ್ಟಿ, ಪ್ರಭಾಕರ ಶೆಟ್ಟಿ ಮತ್ತು ಯುವ ವಿಭಾಗದ ಪದಾಧಿಕಾರಿಗಳು ಭಾಗವಹಿಸಿದ್ದರು.
ನಂತರ ಓಣಿಮಜಲು ಜಗನ್ನಾಥ ಶೆಟ್ಟಿ ಕಿರು ಸಭಾಗೃಹದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಹಾಗೂ ನೀರಿನ ಮಹತ್ವ ದ ಬಗ್ಗೆ ತುಳು ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.