ಕುಸಿದು ಬಿದ್ದ ಕಾಂಪೌಂಡ್‌ ಪರಿಶೀಲಿಸಿದ ಶಾಸಕ ಹರ್ಷವರ್ಧನ್‌

Team Udayavani, Jun 29, 2018, 12:36 PM IST

m4-kusidu.jpg

ನಂಜನಗೂಡು: ಕಳಪೆ ಕಾಮಗಾರಿಯಿಂದ ಕುಸಿದು ಬಿದ್ದಿರುವ ಪರಿಶಿಷ್ಟ ಜಾತಿ-ಪಂಗಡಗಳ ಪ್ರತಿಭಾವಂತ ಬಾಲಕಿಯರ ವಸತಿ ನಿಲಯದ ಕಾಂಪೌಂಡ್‌ನ್ನು ಶಾಸಕ ಹರ್ಷವರ್ಧನ ಪರಿಶೀಲಿಸಿದರು. ಬುಧವಾರ ಉದಯವಾಣಿ ಪತ್ರಿಕೆಯಲ್ಲಿ ಪ್ರಕಟಗೊಂಡ “ಒಂದೇ ತಿಂಗಳಲ್ಲಿ ಕುಸಿದು ಬಿದ್ದ ಶಾಲಾ ಕಾಂಪೌಂಡ್‌’ ಶೀರ್ಷಿಕೆಯಡಿ ಪ್ರಕಟಗೊಂಡ ವರದಿಗೆ ಸ್ಪಂದಿಸಿ ಶಾಸಕ ಹರ್ಷವರ್ಧನ್‌ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮುಗಿಸಿಕೊಂಡು ನೇರವಾಗಿ ವಸತಿ ಶಾಲೆಗೆ ಭೇಟಿ ನೀಡಿದರು. 

ಅದಾಗಲೇ ಕುಸಿದು ಬಿದ್ದ ಕಾಂಪೌಂಡ್‌ ಮರು ನಿರ್ಮಾಣ ಕಾಮಗಾರಿಯನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಿದೆಉ. ಅಡಿಪಾಯ ಹಾಕದೇ ನಿರ್ಮಿಸಿರುವ ಕಾಂಪೌಂಡ್‌ಗೆ ಭದ್ರತೆ ಏನಿದೆ. ಅದು ಮತ್ತೆ ಬೀಳುತ್ತದೆ. ಗುಣಮಟ್ಟದ ವಸ್ತುಗಳನ್ನು ಬಳಸಿ ಕಾಮಗಾರಿ ನಡೆಸಬೇಕೆಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ತಹಶೀಲ್ದಾರ್‌ ದಯಾನಂದ, ವಸತಿ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 

ಕಾಮಗಾರಿಗೆ ಬಳಸಿರುವ ಸಾಮಗ್ರಿಗಳ ಕುರಿತು ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿ, ಆ ವರದಿ ಬರುವವರೆಗೂ ಕಾಮಗಾರಿ ಸ್ಥಗಿತಗೊಳಿಸಬೇಕು. ಕಳಪೆ ಸಾಮಗ್ರಿಗಳಿಂದ ಕಾಮಗಾರಿ ನಡೆಸುವ ಗುತ್ತಿಗೆದಾರರು, ಅದಕ್ಕೆ ಒಪ್ಪಿಗೆ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.  

ಬಳಿಕ ಬಾಲಕಿಯರ ವಸತಿ ಶಾಲೆಗೆ ಭೇಟಿ ನೀಡಿ ಕೆಟ್ಟಿರುವ ಶುದ್ಧ ನೀರು ಘಟಕ, ಸೋಲಾರ್‌ಗಳನ್ನು ಪರಿಶೀಲಿಸಿದರು. ಪಠ್ಯ ಪುಸ್ತಕಗಳು ಸರಬರಾಜಾಗದ ಬಗ್ಗೆ ಆಟದ ಮೈದಾನ ಕೊರತೆಗಳ ಕುರಿತು ಮಾಹಿತಿ ಪಡೆದು ವಸತಿ ಶಾಲೆಯಲ್ಲಿ ಎಲ್ಲಾ ಮೂಲ ಸೌಲಭ್ಯ ಕಲ್ಪಿಸುವುದಾಗಿ ಮಕ್ಕಳಿಗೆ ಭರವಸೆ ನೀಡಿದರು. 

ಈ ಸಂಧರ್ಭದಲ್ಲಿ ತಹಶೀಲ್ದಾರ್‌ ದಯಾನಂದ್‌, ನಗರಸಭಾ ಆಯುಕ್ತ ವಿಜಯ್‌, ಎಂಜನಿಯರ ಭಾಸ್ಕರ್‌, ತಾಪಂ ಸದಸ್ಯರಾದ ಶಿವಣ್ಣ, ಬಿಜೆಪಿ ಮುಖಂಡರಾದ ಕುಂಬರಳ್ಳಿ ಸುಬ್ಬಣ್ಣ, ಬಾಲಚಂದ್ರು ಮಹದೇವಸ್ವಾಮಿ ದೇವೀರಮ್ಮನಹಳ್ಳಿ ಬಸವರಾಜು ಇತರರಿದ್ದರು. 

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.