ರಸ್ತೆಯಲ್ಲೇ ಚರಂಡಿ ನೀರು: ದುರಸ್ತಿಗೆ ಆಗ್ರಹ 


Team Udayavani, Jun 29, 2018, 12:37 PM IST

29-june-10.jpg

ಉಪ್ಪಿನಂಗಡಿ: ಪ್ರಸಕ್ತ ಆಡಳಿತ ನಡೆಸುತ್ತಿರುವ ಉಪ್ಪಿನಂಗಡಿ ಗ್ರಾಮ ಪಂಚಾಯತ್‌ ಆಡಳಿತವು ರಸ್ತೆಯ ಅಂಚನ್ನು ಇಂಟರ್‌ ಲಾಕ್‌ ಅಳವಡಿಸಿ ಚರಂಡಿಯನ್ನು ಸಮರ್ಪಕವಾಗಿ ನಿರ್ಮಿಸಿ ಜನ ಮೆಚ್ಚುಗೆ ಪಡೆದಿದೆ. ಆದರೆ ಮಳೆಗಾಲದಲ್ಲಿ ಮಳೆ ನೀರು ಚರಂಡಿ ಬದಲು ರಸ್ತೆಯಲ್ಲೇ ಹರಿಯುವಂತೆ ಮಾಡಿ ಜನರನ್ನು ಸಂಕಷ್ಟಕ್ಕೀಡು ಮಾಡಿದೆ ಎಂದು ಗ್ರಾಮಸ್ಥರು ಅಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ.

ಉಪ್ಪಿನಂಗಡಿ ಪೇಟೆಯ ಬ್ಯಾಂಕ್‌ ರಸ್ತೆಯಲ್ಲಿ ಚರಂಡಿ ನೀರು ಹರಿಯುತ್ತಿದೆ. ಹಲವೆಡೆ ಚರಂಡಿಯನ್ನು ಒತ್ತುವರಿ ಮಾಡಿಕೊಂಡಿರುವುದು ಸಮಸ್ಯೆಗೆ ಕಾರಣ ಎನ್ನವಾಗಿದೆ. ರಸ್ತೆಯಲ್ಲೇ ಚರಂಡಿ ನೀರು ಹರಿಯುತ್ತಿರುವ ಬಗ್ಗೆ ವಾರ್ಡ್‌ ಸದಸ್ಯರಲ್ಲಿ ಪ್ರಶ್ನಿಸಿದಾಗ, ಸಮಸ್ಯೆಯನ್ನು ಸರಿಪಡಿಸಲು ಪಿಡಿಒಗೆ ಸತತವಾಗಿ ಮನವಿ ಮಾಡಲಾಗಿದೆ. ಅವರು ಸ್ಪಂದಿ ಸುತ್ತಿಲ್ಲ. ಪಂ. ಆಡಳಿತಕ್ಕೆ ಶೇ. 95ರಷ್ಟು ಆದಾಯ ತಂದುಕೊಡುವ ವಾರ್ಡ್‌ಗೆ ಮೂಲಸೌಕರ್ಯ ಒದಗಿಸಲು ಕಾನೂನು ತೊಡಕು ಕಾಡುತ್ತಿದೆಯೇ? ಅಥವಾ ಕಾನೂನು ಇರುವುದೇ ಸಮಸ್ಯೆ ಸೃಷ್ಟಿಸಲೇ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಮಕ್ಕಳು ಸಂಚರಿಸುವಾಗ ಬೇಸರ ಮೂಡುತ್ತದೆ
ಚರಂಡಿ ನೀರು ಹರಿಯುತ್ತಿರುವ ರಸ್ತೆಯಲ್ಲಿ ಪಾದಚಾರಿಗಳು ನಡೆದಾಡ ಬೇಕಾದ ಸ್ಥಿತಿ ಇದೆ. ಪುಟ್ಟ ಮಕ್ಕಳು ಕೊಳಚೆ ನೀರಿನಲ್ಲಿ ನಡೆಯುವುದನ್ನು ಕಂಡಾಗ ಬೇಸರವಾಗುತ್ತದೆ. ಪಂಚಾಯತ್‌ ಆಡಳಿತ ಶೀಘ್ರವಾಗಿ ಕ್ರಮ ಜರುಗಿಸಬೇಕು ಎಂದು ಸ್ಥಳೀಯ ಮುಖಂಡರಾದ ಡಾ| ಕೈಲಾರ್‌ ರಾಜಗೋಪಾಲ ಭಟ್‌ ಆಗ್ರಹಿಸಿದ್ದಾರೆ. ಉಪ್ಪಿನಂಗಡಿ ಪೇಟೆಯ ಸಮಸ್ಯೆ ಗಮನಕ್ಕೆ ಬಂದಿದೆ. ಕಾರಣಾಂತರಗಳಿಂದ ಬಗೆಹರಿಸಲು ಅಸಾಧ್ಯವಾಗಿತ್ತು. ಮಳೆಯ ಪ್ರಮಾಣವೂ ಅಧಿಕವಾಗಿದೆ. ಕಳೆದ ಸಾಮಾನ್ಯ ಸಭೆಯಲ್ಲಿ ಚರಂಡಿ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಚಿಂತಿಸಲಾಗಿದೆ. ಶೀಘ್ರದಲ್ಲಿ ಸಮಸ್ಯೆ ನಿವಾರಣೆ ಆಗಲಿದೆ ಎಂದು ಗ್ರಾ.ಪಂ. ಅಧ್ಯಕ್ಷ ಅಬ್ದುಲ್‌ ರಹಿಮಾನ್‌ ಕೆ. ಪ್ರತಿಕ್ರಿಯಿಸಿದ್ದಾರೆ.

ಸಮಾನವಾಗಿ ಹಂಚಿದ್ದೇವೆ 
ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಚುನಾವಣೆಯ ನೀತಿ ಸಂಹಿತೆ ಕಾರಣದಿಂದಾಗಿ ಪಂಚಾಯತ್‌ ಸಭೆ ಸಕಾಲದಲ್ಲಿ ನಡೆಯದ ಕಾರಣ ಕ್ರಿಯಾ ಯೋಜನೆ ಮಾಡಲು ಆಗಿಲ್ಲ. ಎರಡು ದಿನಗಳ ಹಿಂದೆ ನಡೆದ ಸಭೆಯಲ್ಲಿ ಈ ಬಗ್ಗೆ ಅಗತ್ಯ ಕ್ರಮ ಜರುಗಿಸಲಾಗಿದ್ದು, ಪ್ರತಿ ವಾರ್ಡ್‌ಗೆ ಚರಂಡಿ ದುರಸ್ತಿಗಾಗಿ ತಲಾ 50 ಸಾವಿರ ರೂ.ಗಳನ್ನು ನೀಡಲಾಗುವುದು. ಹೆಚ್ಚು ಆದಾಯ ತರುವ ಮೊದಲ ವಾರ್ಡ್‌ಗೆ ಹೆಚ್ಚು ಹಣ ಮೀಸಲಿರಿಸಲು ಉಳಿದ ಸದಸ್ಯರು ಒಪ್ಪದ ಕಾರಣ ಎಲ್ಲ ವಾರ್ಡ್‌ಗಳಿಗೆ ಸಮಾನವಾಗಿ ಹಣ ಹಂಚಲಾಗಿದೆ ಎಂದು ಪಿಡಿಒ ಅಬ್ದುಲ್ಲಾ ಅಸಫ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.