ಸಂಪರ್ಕ ಕಡಿತಗೊಳುವ ಭೀತಿ: ಕಾಮಗಾರಿ ಲೋಪದ ಆರೋಪ 

Team Udayavani, Jun 29, 2018, 12:47 PM IST

29-june-11.jpg

ಸುಳ್ಯಪದವು: ಗ್ರಾಮೀಣ ಭಾಗದ ರಸ್ತೆಗಳಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ನಮ್ಮ ಗ್ರಾಮ ನಮ್ಮ ರಸ್ತೆಯನ್ನು ಜಾರಿಗೊಳಿಸಿದೆ. ಮೈಂದನಡ್ಕ-ಪದಡ್ಕ ರಸ್ತೆಯನ್ನು ಕಳೆದ ಬೇಸಗೆಯಲ್ಲಿ 2.70 ಕಿ.ಮೀ.ರಸ್ತೆ ಯನ್ನು
ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ ಅಭಿವೃದ್ಧಿಗೊಳಿಸಲಾಗಿತ್ತು. ರಸ್ತೆ ರಚನೆಗೆ 1.84 ಕೋಟಿ ರೂ. ಮತ್ತು 5ವರ್ಷಗಳ ನಿರ್ವಹಣೆ ಹಾಗೂ 6ನೇ ವರ್ಷದ ನವೀಕರಣಕ್ಕೆ 31.83 ಲಕ್ಷ, ಅಂದರೆ ಈ ರಸ್ತೆ ಅಭಿವೃದ್ಧಿಗೆ 221.50 ಲಕ್ಷ ರೂ. ಅನುದಾನ ಇರಿಸಲಾಗಿದೆ.

ಇದೀಗ ಕನ್ನಡ್ಕ ಬಸ್ಸು ತಂಗುದಾಣದ ಬಳಿ ರಸ್ತೆ ಕುಸಿದು ಹೋಗಿದ್ದು ರಸ್ತೆಯಲ್ಲಿ ಹೊಂಡಗಳು ಸೃಷ್ಟಿಯಾಗಿದೆ. ಇದರಿಂದ ಸುಮಾರು 100 ಮೀಟರ್‌ ರಸ್ತೆ ಮಧ್ಯೆ ಬಿರುಕು ಕಾಣಿಸಿಕೊಂಡಿದ್ದು, ಮೋರಿಯ ಪಕ್ಕದಲ್ಲಿ ನೀರು ಶೇಖರಣೆಗೊಳುತ್ತಿದೆ. ಇದೀಗ ರಸ್ತೆ ಸಂಪರ್ಕ ಕಡಿತಗೊಳ್ಳುವ ಅತಂಕ ಸಾರ್ವಜನಿಕರಲ್ಲಿ ಮೂಡಿದೆ.

ಒರತೆ ಹೆಚ್ಚು
ಕನ್ನಡ್ಕ ಎಂಬಲ್ಲಿ ರಸ್ತೆ ನಿರ್ಮಿಸುವಾಗ ಮಣ್ಣು ಹಾಕಿ ಹದ ಮಾಡಿ ಎತ್ತರ ತಗ್ಗನ್ನು ಸರಿಪಡಿಸಲಾಗಿತ್ತು. ಮಣ್ಣು ಸರಿಯಾಗಿ ಸೆಟ್‌ ಆಗದೇ ಇರುವುದು ಮತ್ತು ನೀರಿನ ಒರತೆ ಹೆಚ್ಚು ಇರುವುದರಿಂದ ಕುಸಿತವಾಗಿದೆ ಎಂಬ ಮಾತು ಸಾರ್ವಜನಿಕರಿಂದ ವ್ಯಕ್ತವಾಗಿದೆ. 

ಕೇರಳ-ಕರ್ನಾಟಕ ಸಂಪರ್ಕಿಸುವ ರಸ್ತೆ ಇದಾಗಿದ್ದು.ಸರಕಾರಿ, ಖಾಸಗಿ ಬಸ್‌ಗಳು, ಇತರ ವಾಹನಗಳು ದಿನನಿತ್ಯ ಸಂಚರಿಸುತ್ತಿವೆ. ಕನ್ನಡ್ಕ, ಸುಳ್ಯಪದವು, ಗಡಿಭಾಗದ ಜನರಿಗೆ ಈ ರಸ್ತೆ ಮುಖ್ಯವಾಗಿದೆ. ಲಾರಿಗಳಲ್ಲಿ ಮಿತಿಗಿಂತ ಹೆಚ್ಚು ಕೆಂಪುಕಲ್ಲು ಗಳನ್ನು ಸಾಗಾಟ ಮಾಡಲಾಗುತ್ತಿದೆ. ನಿರಂತರವಾಗಿ ಘನ ವಾಹನಗಳು ಸಂಚರಿಸುತ್ತಿರುವುದರಿಂದ ಮೋರಿಯ ಸಮೀಪ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದೆ.

ನೀರು ನಿಂತು ದ್ವಿಚಕ್ರವಾಹನ ಸವಾರಿಗೆ ತೊಂದರೆಯಾಗುತ್ತಿದೆ. ಲಘುವಾಹನಗಳ ಭಾಗಗಳು ಜಖಂಗೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ. ರಸ್ತೆಯ ಮೇಲೆ ನೀರು ಹರಿದು ರಸ್ತೆ ಪಕ್ಕದಲ್ಲಿರುವ ಮಣ್ಣು ಕೂಡ ಮಳೆಯ ನೀರಿನಲ್ಲಿ ಕೊಚ್ಚಿಹೋಗಿದೆ.

ಕಾಮಗಾರಿಯಲ್ಲಿ ಕೊರತೆ
ರಸ್ತೆ ನಿರ್ಮಾಣ ಮಾಡುವಾಗ ಮಣ್ಣು ತುಂಬಿಸಲಾಗಿತ್ತು. ಮಣ್ಣು ಹಾಕಿರುವುದರಿಂದ ರಸ್ತೆ ಬಿರುಕು ಬಿಟ್ಟಿದೆ. ಒರತೆ ಇರುವ ಪ್ರದೇಶವಾಗಿದೆ. ಇದೀಗ ಮಣ್ಣು ಸಡಿಲಗೊಂಡಿದೆ. ಮಳೆಗಾಲದಲ್ಲಿಯೂ ಕೆಂಪು ಕಲ್ಲು ಸಾಗಾಟದ ಲಾರಿಗಳು ನಿರಂತರವಾಗಿ ಸಂಚರಿಸುತ್ತಿವೆ. ಜನಪ್ರತಿನಿಧಿಗಳು, ಅಧಿಕಾರಿಗಳು ಈ ರಸ್ತೆಯ ಭಾಗದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸೂಕ್ತ ಕ್ರಮಕೈಗೊಳ್ಳಬೇಕು.
 - ಶ್ರೀಧರ ಪೂಜಾರಿ,
ಸಾಮಾಜಿಕ ಕಾರ್ಯಕರ್ತ

ನನ್ನ  ಗಮನಕ್ಕೆ ಬಂದಿಲ್ಲ
ರಸ್ತೆ ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ಬಂದಿಲ್ಲ. ಬಿರುಕು ಬಿಟ್ಟ ಮತ್ತು ಹೊಂಡಗಳ ರಸ್ತೆಯನ್ನು ಪರಿಶೀಲನೆ ಮಾಡುತ್ತೇನೆ. ರಸ್ತೆಯಲ್ಲಿ ಹೊಂಡಗಳು ಇದ್ದರೆ ದುರಸ್ತಿಗೊಳಿಸಲು ಕ್ರಮಕೈಗೊಳ್ಳಲಾಗುವುದು ನಂತರ ಪುನ: ಡಾಮರೀಕರಣ ಗೊಳಿಸಲಾಗುವುದು.
– ಜನಾರ್ದನ
ಎಂಜಿನಿಯರ್‌ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ 

ಟಾಪ್ ನ್ಯೂಸ್

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.