ಶಾಂತಿವನದ ವಿಡಿಯೋ ಕುರಿತು ಮೌನ ಮುರಿದ ಸಿದ್ದರಾಮಯ್ಯ:ಹೇಳಿದ್ದೇನು?
Team Udayavani, Jun 29, 2018, 2:48 PM IST
ಬೆಂಗಳೂರು: ಶಾಂತಿವನ ಪ್ರಕೃತಿ ಚಿಕಿತ್ಸಾಯದಲ್ಲಿ ಸಮ್ಮಿಶ್ರ ಸರ್ಕಾರದ ಆಯುಷ್ಯದ ಕುರಿತು ಹೇಳಿಕೆ ನೀಡಿದ್ದ ವಿಡಿಯೋ ಕುರಿತು ಸಮನ್ವಯ ಸಮಿತಿ ಅಧ್ಯಕ್ಷ , ಮಾಜಿ ಸಿಎಂ ಸಿದ್ದರಾಮಯ್ಯ ಮೌನ ಮುರಿದ್ದಿದ್ದು, ‘ವಿಡಿಯೋಗೂ ನನಗೂ ಸಂಬಂಧ ಇಲ್ಲ’ ಎನ್ನುವ ಮೂಲಕ ಎಲ್ಲಾ ಗೊಂದಲಗಳಿಗೆ ಅಂತ್ಯ ಹಾಡಲು ಮುಂದಾಗಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ‘ನಾನು ಸರ್ಕಾರದ ವಿರುದ್ಧ ಇದ್ದೇನೆ ಎನ್ನುವುದು ಸುಳ್ಳು . ಯಾರೋ ಕಿಡಿಗೇಡಿಗಳು ವಿಡಿಯೋ ಮಾಡಿದ್ದಾರೆ. ನಾನು ಯಾವ ಸಂದರ್ಭದಲ್ಲಿ ಮಾತನಾಡಿದ್ದೇನೋ ಗೊತ್ತಿಲ್ಲ. ಸಹಜವಾಗಿ ಮಾತನಾಡುವಾಗ ರೆಕಾರ್ಡ್ ಮಾಡಿದ್ದಾರೆ’ ಎಂದರು.
‘ಮೈತ್ರಿ ಸರ್ಕಾರ ಸುಗಮವಾಗಿದೆ.ಯಾವುದೇ ಗೊಂದಲವಿಲ್ಲ.ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಲು ಸರ್ಕಾರ ರಚಿಸಿದ್ದೇವೆ’ ಎಂದರು.
ರಾಜಕೀಯದಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತೇನೆ !
ಶುಕ್ರವಾರ ಬೆಳಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ ನಾನು ರಾಜಕೀಯದಲ್ಲಿ ಇನ್ನಷ್ಟು ಸಕ್ರೀಯವಾಗಿ ತೊಡಗಿಸಿಕೊಳ್ಳುವುದಾಗಿ ಹೇಳಿದ್ದಾರೆ.
ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಕಳೆದ ರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದೇನೆ. ಚುನಾವಣಾ ಕಾಲದ ಕಾರ್ಯದೊತ್ತಡದಿಂದ ಬಳಲಿದ್ದ ದೇಹ ಮತ್ತು ಮನಸ್ಸು ಸುಧಾರಿಸಿ ಉಲ್ಲಸಿತನಾಗಿದ್ದೇನೆ ಎಂದು ಮೊದಲ ಟ್ವೀಟ್‌ನಲ್ಲಿ ಬರೆದಿದ್ದಾರೆ.
ಇನ್ನೊಂದು ಟ್ವೀಟ್‌ನಲ್ಲಿ ‘ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಆರೋಗ್ಯ ಸುಧಾರಣೆ ಮಾಡಿಕೊಂಡ ನಂತರ, ರಾಜಕೀಯದಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಲು ದೇಹ ಮತ್ತು ಮನಸ್ಸು ಸಜ್ಜಾಗಿದೆ’ ಎಂದು ಬರೆದಿದ್ದಾರೆ.
ಮೂರನೇ ಟ್ವೀಟ್‌ನಲ್ಲಿ ‘ಉಜಿರೆ ಪ್ರಕೃತಿ ಚಿಕಿತ್ಸಾ ಕೇಂದ್ರ ಹನ್ನೆರಡು ದಿನ ನನ್ನ ಮನೆಯಾಗಿತ್ತು ಡಾ. ಪ್ರಶಾಂತ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ತಮ್ಮ ಕುಟುಂಬದ ಸದಸ್ಯನಂತೆ ನನ್ನ ಪಾಲನೆ ಮಾಡಿದ್ದಾರೆ. ಅವರ ಸೇವಾ ಬದ್ಧತೆ ಮತ್ತು ತೋರಿಸಿದ್ದ ಕಾಳಜಿಗೆ ತುಂಬುಹೃದಯದ ಕೃತಜ್ಞತೆಗಳು. ಎಲ್ಲರಿಗೂ ವೃತ್ತಿಯಲ್ಲಿ ಇನ್ನಷ್ಟು ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ’ ಎಂದು ಧನ್ಯವಾದ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.