ಜುಲೈ ವಾಯಿದೆ ವಹಿವಾಟಿಗೆ ಭರ್ಜರಿ ಆರಂಭ: ಸೆನ್ಸೆಕ್ಸ್ 386 ಅಂಕ ಏರಿಕೆ
Team Udayavani, Jun 29, 2018, 4:48 PM IST
ಮುಂಬಯಿ : ಜುಲೈ ತಿಂಗಳ ವಾಯಿದೆ ವಾಹಿಟಿಗೆ ಭರ್ಜರಿ ಆರಂಭ ನೀಡಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಕಳೆದ ಎರಡು ದಿನಗಳ ನಷ್ಟವನ್ನು ಒಂದೇ ದಿನದಲ್ಲಿ ಭರ್ತಿ ಮಾಡಿಕೊಡುವ ರೀತಿಯಲ್ಲಿ ಇಂದು ಶುಕ್ರವಾರ 385.84 ಅಂಕಗಳ ಭರ್ಜರಿ ಏರಿಕೆಯೊಂದಿಗೆ 35,423.48 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಆಶಾದಾಯಕವಾಗಿ ಮುಗಿಸಿದೆ.
ಡಾಲರ್ ಎದುರು ರೂಪಾಯಿ ಸ್ವಲ್ಪ ಮಟ್ಟಿನ ಚೇತರಿಕೆಯನ್ನು ಕಂಡಿರುವುದು ಮುಂಬಯಿ ಶೇರು ಪೇಟೆಗೆ ಉತ್ತೇಜನ ನೀಡಿತು. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ 452.40 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು 125.20 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,714.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,730 ಶೇರುಗಳು ವಹಿವಾಟಿಗೆ ಒಳಪಟ್ಟವು; 1,842 ಶೇರುಗಳು ಮುನ್ನಡೆ ಕಂಡವು; 743 ಶೇರುಗಳು ಹಿನ್ನಡೆಗೆ ಗುರಿಯಾದವು; 145 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್ಇ
B Z Zameer ahmed khan ಹೇಳಿಕೆ ಹಿಂದೆ ಎಚ್ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.