ಸಾರ್ವಜನಿಕ ಶೌಚಾಲಯಕ್ಕೆ  ಮೂಲ ಸೌಕರ್ಯ ಕಲ್ಪಿಸಿ


Team Udayavani, Jun 29, 2018, 5:32 PM IST

29-june-23.jpg

ರೋಣ: ಸಾರ್ವಜನಿಕ ಶೌಚಾಲಯಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ವಿವಿಧ ವಾರ್ಡ್‌ನ ಮಹಿಳಾ ನಿವಾಸಿಗಳು ಪುರಸಭೆಯ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು. 7 ನೇ ವಾರ್ಡ್‌ನ ಮಹಿಳೆ ಅಂಬವ್ವ ನಾಯ್ಕರ ಮಾತನಾಡಿ, 6,7,8 ಹಾಗೂ 9ನೇ ವಾರ್ಡ್ ನ ಮಹಿಳೆಯರು ಅನೇಕ ವರ್ಷಗಳಿಂದ ಬಹಿರ್ದೆಸೆಗೆ ಬಯಲು ಜಾಗೆ ಮತ್ತು ಗಿಡಗಂಟಿಗಳನ್ನು ಅವಲಂಬಿಸಿದ್ದು, ಪುರಸಭೆಗೆ ನಗರದ ಅಭಿವೃದ್ಧಿಗೆ ಸರ್ಕಾರ ಕೋಟಿಗಟ್ಟಲೆ ಅನುದಾನ ನೀಡಿದರೂ ಈ ಬಡಾವಣೆಯಲ್ಲಿ ನಿಮಾರ್ಣವಾಗಿರುವ ಶೌಚಾಲಯಕ್ಕೆ ಮೂಲಭೂತ ಸೌಕರ್ಯಗಳನ್ನು ಹಾಗೂ ಸೂಕ್ತ ರಸ್ತೆಯನ್ನು ನಿರ್ಮಿಸದಿರುವುದನ್ನು ಖಂಡನೀಯ ಎಂದರು.

ಸಾರ್ವಜನಿಕ ಶೌಚಾಲಯಕ್ಕೆ ಯಾವುದೇ ರೀತಿಯಾದ ಸೌಲಭ್ಯಗಳು ಇಲ್ಲ. ಅಲ್ಲದೆ ಅಲ್ಲಿರುವ ಸಿಬ್ಬಂದಿಗಳು ಸ್ವಚ್ಛತೆಯನ್ನು ಮಾಡದೆ ಇರುವುದರಿಂದ ಗಬ್ಬೆದ್ದು ನಾರುತ್ತಿದೆ. ಇದರಿಂದ ಬಯಲಲ್ಲಿಯೆ ಶೌಚಕ್ಕೆ ಹೋಗಬೇಕಾಗಿದೆ. ಇದರಿಂದ ವಾರ್ಡ್‌ನ ಸಮಸ್ಯೆಯ ಬಗ್ಗೆ ಹಲವಾರು ಬಾರಿ ಮನವಿಯನ್ನು ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಇದರಿಂದ ಮಹಿಳೆಯರು ರಸ್ತೆಯಲ್ಲಿ ಬಯಲಿಗೆ ಹೋಗಬೇಕಾಗಿದೆ. ಸ್ವತಂತ್ರ ಭಾರತದಲ್ಲಿ ಮಹಿಳೆಯರಿಗೆ ಗೌರವ ಇಲ್ಲದಂತಾಗಿದೆ. ಮಕ್ಕಳು ಸೇರಿದಂತೆ ಅನೇಕ ಹಿರಿಯ ನಾಗರಿಕರಿಗೆ ಮಳೆಗಾಲ ಹಾಗೂ ರಾತ್ರಿ ಸಮಯದಲ್ಲಿ ಕಷ್ಟಕರವಾಗುತ್ತದೆ. ಆದ್ದರಿಂದ ಸುಲಭ ಶೌಚಾಲಯಕ್ಕೆ ಅನುಕೂಲ ಮಾಡಿ ಕೊಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದರು.

ಸುಶೀಲಾ ಸೊಬರದ ಮಾತನಾಡಿ, ಸಾರ್ವಜನಿಕ ಶೌಚಾಲಯಕ್ಕೆ ಮೂಲಭೂತ ಸೌಕರ್ಯಗಳನ್ನು ನೀಡುವಂತೆ ಅನೇಕ ಬಾರಿ ಪುರಸಭೆಗೆ ಮನವಿ ಸಲ್ಲಿಸುತ್ತಾ ಬಂದರೂ ಇಲ್ಲಿಯವರೆಗೆ ಮಾಡದ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದೆವೆ. ಮನೆಯಲ್ಲಿ ಇರುವ ವಯೋವೃದ್ಧರಿಗೆ ತುಂಬಾ ಸಮಸ್ಯೆಯಾಗಿದೆ. ಇದರಿಂದ ಮಹಿಳೆಯರು ತಲೆ ತಗ್ಗಿಸುವಂತಾಗಿದೆ.

ಸ್ವಾತಂತ್ರ್ಯ ದೊರಕಿ 60 ವರ್ಷ ಕಳೆದರೂ ಮಹಿಳೆಯರು ಶೌಚಾಲಯಕ್ಕಾಗಿ ಬೀದಿಗಿಳಿದು ಪ್ರತಿಭಟಿಸುವುದೆಂದರೆ ಅಳುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಲೆ ತಗ್ಗಿಸಬೇಕು ಎಂದು ದೂರಿದರು. ನಿತ್ಯ ತಂಬಿಗಿ ಹಿಡಿದುಕೊಂಡು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮ್ಮುಖದಲ್ಲಿಯೇ ಬಯಲು ಜಾಗೆಯಲ್ಲಿ ಬಹಿರ್ದೆಸೆಗೆ ಹೋಗುತ್ತಿದ್ದರು. ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಮಹಿಳೆಯರು ಅನುಭವಿಸುತ್ತಿರುವ ತೊಂದರೆಯನ್ನು ಯಾವುದೇ ಕಾರಣ ಹೇಳದೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಿ ಮೂರು ನಾಲ್ಕು ದಿನದಲ್ಲಿ ಶೌಚಾಲಯಕ್ಕೆ ಸೌಲಭ್ಯಗಳನ್ನು ಕಲ್ಪಿಸಬೇಕು. ಮಹಿಳೆಯರ ಮಾನ ಕಾಪಾಡುವ ನಿಟ್ಟಿನಲ್ಲಾದರೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿ ತುರ್ತು ವ್ಯವಸ್ಥೆಗೆ ಮುಂದಾಗುವಂತೆ ಮಹಿಳೆಯರು ಪಟ್ಟು ಹಿಡಿದರು.

ಸ್ಥಳಕ್ಕೆ ಆಗಮಿಸಿದ ಪುರಸಭೆಯ ಅಭಿಯಂತರ ಎಸ್‌.ಎಫ್‌.ನದಾಫ್‌ ಮಾತನಾಡಿ, ಅಲ್ಲಿನ ಸಿಬ್ಬಂದಿಗಳನ್ನು ಕರೆದು ಶೀಘ್ರವಾಗಿ ಈ ಸಮಸ್ಯೆಯನ್ನು ಬಗೆಹರಿಸುವಂತೆ ಕ್ರಮ ಕೈಗೊಳ್ಳುತ್ತೆವೆ ಎಂದರು. ಪ್ರತಿಭಟನೆಯಲ್ಲಿ ಶರಣಮ್ಮ ಸೀರಿ, ಮಂಗಳಾ ಕುರಬರ, ಮಮತಾ ಮುಲ್ಲಾ, ಸುವರ್ಣ ರೇಷ್ಮಿ, ಸುವರ್ಣ ಜಕ್ಕನಗೌಡ್ರ, ನೀಲಕ್ಕ ಬಸನಗೌಡ್ರ, ದಾಕ್ಷಾಯಿಣಿ ಪೊಲೀಸಪಾಟೀಲ, ಪಾರಮ್ಮ ಸೊಬರದ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

dk shivakumar

Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.