ಶಿಕ್ಷಣ ಜ್ಞಾನಾರ್ಜನೆಗೆ ಸೀಮಿತವಾಗದಿರಲಿ
Team Udayavani, Jun 30, 2018, 6:00 AM IST
ಬೆಳಗಾವಿ: ಮುಂದಿನ 50 ವರ್ಷಗಳಿಗೆ ತಾಂತ್ರಿಕ ಶಿಕ್ಷಣ ಅಗತ್ಯಕ್ಕನುಸಾರವಾಗಿ ಪಠ್ಯಕ್ರಮ ರೂಪಿಸಬೇಕು ಎಂದು
ಪದ್ಮವಿಭೂಷಣ ಪುರಸ್ಕೃತ ಡಾ. ವಿ.ಕೆ. ಆತ್ರೆ ಹೇಳಿದರು.
ಬೆಳಗಾವಿ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣ ಕೇವಲ ಜ್ಞಾನಾರ್ಜನೆಗೆ ಸೀಮಿತವಾಗದೇ ಹೊಸ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಬೇಕು.ಅಂತಹ ಸವಾಲುಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತೆಗೆದುಕೊಳ್ಳಬೇಕು ಎಂದರು.
ಮುಂದಿನ 30 ವರ್ಷ ಎಂಜಿನಿಯರಿಂಗ್ ಕ್ಷೇತ್ರಕ್ಕೆ ಬಹಳ ಸವಾಲಿನ ವರ್ಷಗಳು ಎಂದು ಅಮೆರಿಕ ಹೇಳಿದೆ. ಇದು ನಮಗೂ ಅನ್ವಯವಾಗುತ್ತದೆ. ಸವಾಲಿನ ಜತೆಗೆ ಅವಕಾಶಗಳೂ ಹೆಚ್ಚು ದೊರೆಯುತ್ತವೆ. ಇವುಗಳ ಸಮರ್ಪಕ ಬಳಕೆಗೆ ಇಂತಹ ವಿವಿಗಳು ಕೊಡುಗೆ ನೀಡಬೇಕು. ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಸವಾಲುಗಳು ಇರಲೇಬೇಕು. ಈ ಹಿನ್ನೆಲೆಯಲ್ಲಿ ಎಂಜನಿಯರಿಂಗ್ ಶಿಕ್ಷಣವನ್ನು ಪುನವಿಮರ್ಶೆ ಮಾಡುವ ಅಗತ್ಯವಿದೆ.ಅಮೂಲಾಗ್ರ ಬದಲಾವಣೆಯ ಚಿಂತನೆಗೆ ಎಲ್ಲ ವಿಶ್ವವಿದ್ಯಾಲಯಗಳು ಪ್ರಯತ್ನಿಸಬೇಕು ಎಂದು ತಿಳಿಸಿದರು.
441 ಕೋಟಿ ರೂಪಾಯಿ
ಶೀಘ್ರದಲ್ಲೇ ವಿವಿ ಸುಪರ್ದಿಗೆ
ಕೇಂದ್ರ ಆದಾಯ ತೆರಿಗೆ ಇಲಾಖೆಯಲ್ಲಿ ಬಹಳ ವರ್ಷಗಳಿಂದ ಸಿಲುಕಿಕೊಂಡಿರುವ ವಿಶ್ವವಿದ್ಯಾಲಯದ 441 ಕೋಟಿ ರೂ. ಶೀಘ್ರದಲ್ಲೇ ವಿವಿಯ ಸುಪರ್ದಿಗೆ ಮರಳಿ ಬರಲಿದೆ. ಈ ಹಣವನ್ನು ಬ್ಯಾಂಕಿನಲ್ಲಿ ಠೇವಣಿಯಾಗಿ ಇಡದೇ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಬಳಕೆ ಮಾಡಬೇಕು. ವಿದ್ಯಾರ್ಥಿಗಳ ಜ್ಞಾನಾರ್ಜನೆಯೇ ವಿಶ್ವವಿದ್ಯಾಲಯಗಳ ನಿಜವಾದ ಠೇವಣಿ ಎಂದು ರಾಜ್ಯಪಾಲ ವಿ.ಆರ್.ವಾಲಾ ಹೇಳಿದರು.
ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲ, ಉಪನ್ಯಾಸಕರ ಹುದ್ದೆಗಳ ಭರ್ತಿ, 7ನೇ ವೇತನ ಆಯೋಗದ ಅನುಷ್ಠಾನ ಸೇರಿ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಬರುವ ಅಧಿವೇಶನದಲ್ಲಿ ಇದಕ್ಕೆ ಅನುಮೋದನೆ ಪಡೆದು ಜಾರಿಗೊಳಿಸಲು ಪ್ರಯತ್ನಿಸುವೆ.
– ಜಿ.ಟಿ. ದೇವೇಗೌಡ, ಉನ್ನತ ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.