ಕಾಲುದಾರಿಯನ್ನು ವಿಸ್ತರಿಸಿ, ರಸ್ತೆಯನ್ನಾಗಿಸಲು ಆಗ್ರಹ

Team Udayavani, Jun 30, 2018, 2:15 AM IST

sanka-29-6.jpg

ನಿಡ್ಪಳ್ಳಿ: ಇಲ್ಲಿಯ ಕೂಟೇಲು ಎಂಬಲ್ಲಿಂದ ನಿಡ್ಪಳ್ಳಿ ಪ್ರಾಥಮಿಕ ಶಾಲೆ ಹಾಗೂ ಶ್ರೀ ಶಾಂತದುರ್ಗಾ ದೇವಾಲಯ ಸಂಪರ್ಕಿಸುವ ಕಾಲುದಾರಿಯನ್ನು ವಿಸ್ತರಿಸಿ, ರಸ್ತೆಯನ್ನಾಗಿಸಿ ಪರಿವರ್ತಿಸಲು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಹಿಂದೆ ಬೇಸಗೆ ಕಾಲದಲ್ಲಿಯಾದರೂ ಕೂಟೇಲಿನಿಂದ ತೋಡಿನ ಮುಖಾಂತರ ವಾಹನಗಳು ಸಂಚರಿಸಲು ಅವಕಾಶ ಇತ್ತು. ಬರೆ, ಚಿಕ್ಕೋಡಿ, ನಿಡ್ಪಳ್ಳಿ ಶಾಲೆ, ಅಂಗನವಾಡಿ, ಗೋಳಿತ್ತಡಿಗಾಗಿ ನಾಕುಡೇಲು, ಡೊಂಬಟೆಬರಿ ಈ ಪ್ರದೇಶದ ಜನರಿಗೆ ಇದು ಬಹಳ ಹತ್ತಿರವಾದ ದಾರಿಯಾಗಿತ್ತು. ಕೂಟೇಲಿನಲ್ಲಿ ಕಿಂಡಿ ಅಣೆಕಟ್ಟು ಆದ ಬಳಿಕ ಪ್ರದೇಶಕ್ಕೆ ಕುಕ್ಕುಪುಣಿಯಾಗಿ ಸುಮಾರು ಒಂದು ಕಿ.ಮೀ. ಸುತ್ತಾಗಿ ಬರಬೇಕಾಗಿದೆ.

ಹಿಂದೆ ಮಲ್ಲಿಕಾ ಪ್ರಸಾದ್‌ ಅವರು ಪುತ್ತೂರು ಶಾಸಕರಾಗಿದ್ದ ಸಮಯದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಅನುದಾನ ಮಂಜೂರುಗೊಳಿಸಿ ಕೂಟೇಲು ಎಂಬಲ್ಲಿ ತೋಡಿಗೆ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿತ್ತು. ಆದರೆ ಅಣೆಕಟ್ಟು ಮೂಲಕ ಮೂಲಕ ಸಂಚರಿಸಲು ವಾಹನ ಸವಾರರಿಗೆ ಅಡಚಣೆಯಾಗಿದೆ.

ಅಣೆಕಟ್ಟಿನ ಮೇಲೆ ನಾಲ್ಕು ಚಕ್ರದ ವಾಹನ ಚಲಿಸುವಷ್ಟು ಅಗಲ ಇಟ್ಟು ಮುಂದೆ ತೋಡಿನ ಬದಿ ಕಲ್ಲು ಕಟ್ಟಿ ಅಗಲಗೊಳಿಸಲು ಯೋಜನೆ ರೂಪಿಸಲಾಗಿತ್ತು. ಈ ಮೂಲಕ ದಾರಿಯನ್ನು ಅಗಲಗೊಳಿಸಿ ರಸ್ತೆಯಾಗಿ ಪರಿವರ್ತಿಸಲಾಗುವುದು ಎಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಆಶ್ವಾಸನೆ ನೀಡಿದ್ದರು. ಆದರೆ ಅಣೆಕಟ್ಟಿನ ಮೇಲೆ ಸಾಕಷ್ಟು ಸ್ಥಳಾವಕಾಶ ಇದ್ದು, ತೋಡಿನ ಬದಿ ಕಾಲು ದಾರಿ ಮಾತ್ರ ಕಿರಿದಾಗಿದೆ. ನೀಡಿದ ಭರವಸೆಯನ್ನು ಈಡೇರಿಸಲು ವಿಫ‌ಲರಾಗಿರುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಿರುವ ಕಾಲುದಾರಿ ಸ್ಥಳೀಯ ದೇವಸ್ಥಾನ, ದೈವಸ್ಥಾನ, ಶಾಲೆಗೆ ಬರುವ ಮಕ್ಕಳಿಗೂ, ಅಧಿಕಾರಿಗಳಿಗೂ, ಸಾರ್ವಜನಿಕರಿಗೂ ಬಹಳ ಹತ್ತಿರವಾಗುತ್ತದೆ. ಅಲ್ಲದೆ ಮಳೆಗಾಲದಲ್ಲಿ ನೀರು ಹರಿಯುತ್ತಿರುವಾಗ ಮಕ್ಕಳು ನಡೆದಾಡಲು ಹೆದರುತ್ತಾರೆ. ಈ ಕಾಲುದಾರಿಯನ್ನು ಅಗಲಗೊಳಿಸಲು ಜಾಗದ ಕೊರತೆಯಾಗಿಲ್ಲ. ಆದರೆ ಜನಪ್ರತಿನಿಧಿಗಳಿಗೆ ಇಚ್ಛಾಶಕ್ತಿ ಕೊರತೆಯಿದೆ ಇದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತತ್‌ ಕ್ಷಣ ಯೋಜನೆ ರೂಪಿಸಲಿ
ಕಾಲುದಾರಿಯನ್ನೇ ಅಗಲಗೊಳಿಸಿ ನಾಲ್ಕು ಚಕ್ರದ ವಾಹನ ಬರುವ ಹಾಗಾದರೆ ಸಾರ್ವಜನಿಕರಿಗೆ ಬಹಳ ಅನುಕೂಲವಾಗುತ್ತದೆ. ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಬೇಡಿಕೆ ಇಡಲಾಗಿದ್ದು ತತ್‌ ಕ್ಷಣ ಇದರ ಬಗ್ಗೆ ಆಸಕ್ತಿ ವಹಿಸಿ ಯೋಜನೆ ರೂಪಿಸಲಿ.
– ರಘುರಾಮ ಆಳ್ವ, ಸ್ಥಳೀಯರು

ಟಾಪ್ ನ್ಯೂಸ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.