ಸರ್ಕಾರಕ್ಕೆ ಸಿದ್ದರಾಮಯ್ಯ ಬೆಂಬಲವಿದೆ
Team Udayavani, Jun 30, 2018, 10:35 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮ್ಮಿಶ್ರ ಸರ್ಕಾರದ ಬಗ್ಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬಜೆಟ್ ಮಂಡನೆ ವಿಚಾರಕ್ಕೆ ಸಂಬಧಿಸಿದಂತೆ ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದಾರೆ ಎಂಬ ವದಂತಿ ಬೆನ್ನಲ್ಲೇ, ಸಿಎಂ ಎಚ್.ಡಿ.ಕುಮಾರಸ್ವಾಮಿ ಈ ಟ್ವೀಟ್ ಮಾಡಿರುವುದು ಕುತೂಹಲ ಮೂಡಿಸಿದೆ.
“ಸಿಎಂ ಆಫ್ ಕರ್ನಾಟಕ’ ಟ್ವಿಟ್ಟರ್ ಖಾತೆಯಲ್ಲಿ ಶುಕ್ರವಾರ ಟ್ವೀಟ್ ಮಾಡಲಾಗಿದ್ದು, “ಸಿದ್ದರಾಮಯ್ಯ ಅವರು ಶಾಂತಿವನದಲ್ಲಿ ಮಾತನಾಡಿರುವುದು ರಾಜಕೀಯ ವಿಶ್ಲೇಷಣೆ. ಸಮ್ಮಿಶ್ರ ಸರ್ಕಾರದ ಬಗ್ಗೆ ಅವರಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ರಚನೆಯಲ್ಲಿ ಅವರ ಪಾತ್ರ ದೊಡ್ಡದಿದೆ. ಅವರು ಸದಾ ನಮ್ಮ ಬೆಂಬಲಕ್ಕಿರುತ್ತಾರೆ’ ಎಂಬ ವಿವರಣೆಯಿದೆ. ಈ ಮೂಲಕ ಸಿದ್ದರಾಮಯ್ಯ ಅವರು ಶಾಂತಿವನದಲ್ಲಿ ಲೋಕಾಭಿರಾಮವಾಗಿ ಆಡಿದ್ದ ಮಾತುಗಳಿಂದ ಎದ್ದಿದ್ದ ವಿವಾದ ತಿಳಿಗೊಳಿಸುವ ಪ್ರಯತ್ನವನ್ನು ಸಿಎಂ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.