ಹೊಸ ಪರಿಕರಗಳು ಹಳ್ಳಿಗರ ಕೈ ಸೇರಬೇಕು


Team Udayavani, Jun 30, 2018, 11:32 AM IST

blore-3.jpg

ಬೆಂಗಳೂರು: ದೃಷ್ಟಿ ದೋಷ ನಿವಾರಣೆ ಸಂಬಂಧ ಅತ್ಯಾಧುನಿಕ ಪರಿಕರಗಳು ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಇವು ಗ್ರಾಮೀಣ ಜನರಿಗೆ ತಲುಸುವ ಅಗತ್ಯವಿದೆ ಎಂದು ಮಿಂಟೋ ಕಣ್ಣಾಸ್ಪತ್ರೆ ನಿರ್ದೇಶಕಿ ಡಾ.ಬಿ.ಎಲ್‌.ಸುಜಾತಾ
ಹೇಳಿದ್ದಾರೆ.

ರಾಜ್ಯ ಸರ್ಕಾರಿ ನೇತ್ರಾಧಿಕಾರಿಗಳ ಸಂಘ ಶುಕ್ರವಾರ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ನೇತ್ರಾಧಿಕಾರಿಗಳ ಮೂರು ದಿನದ “ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ’ ಉದ್ಘಾಟಸಿ ಅವರು ಮಾತನಾಡಿದರು. ಅಂಧತ್ವ ನಿವಾರಣೆ ಕೂಡ ಒಂದು ಸಮಾಜಮುಖೀ ಕೆಲಸ. ಹಳ್ಳಿಗಳಲ್ಲಿ ಸಾಕಷ್ಟು ಮಂದಿಗೆ ದೃಷ್ಟಿದೋಷದ ಬಗ್ಗೆ ಇನ್ನೂ ತಿಳಿವಳಿಕೆ ಇಲ್ಲ. ಇಂತಹ ಮುಗ್ಧರಿಗೆ ಸಲಹೆ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಯಾಗಿದೆ. ಈ ನಿಟ್ಟಿನಲ್ಲಿ ಆಯಾ ಸ್ಥಳೀಯ
ನೇತ್ರಾಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. 

ಕಣ್ಣಿನ ದೋಷದ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಅರಿವಿನ ಕಾರ್ಯಾಗಾರಗಳು ನಡೆಯಬೇಕು. ಅಲ್ಲದೆ, ಶಾಲಾ ಮಕ್ಕಳಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಹಳ್ಳಿಗಳಲ್ಲಿ ಕಣ್ಣಿನ ದೋಷದ ಬಗ್ಗೆ ತಿಳಿವಳಿಕೆ ನೀಡುವ ಕೆಲಸಗಳು ಹೆಚ್ಚೆಚ್ಚು ನಡೆದಾಗ ಮಾತ್ರ, ಇದರ ನಿರ್ಮೂಲನೆ ಸಾಧ್ಯ ಎಂದರು.

ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಮಹದೇವಯ್ಯ ಮಠಪತಿ ಮಾತನಾಡಿ, ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಇಲ್ಲದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳು ಇದ್ದರೂ ಈ ಬಗ್ಗೆ ಜನರಿಗೆ ತಪ್ಪು ತಿಳಿವಳಿಕೆ ಇದೆ. ಹೀಗಾಗಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ತಮ್ಮ ನೈಪುಣ್ಯತೆ ಒರೆಗೆ ಹಚ್ಚಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ರಾಜ್ಯದ ಹಲವಡೆಗಳಿಂದ ಆಗಮಿಸಿದ 60ಕ್ಕೂ ಹೆಚ್ಚು ಸರ್ಕಾರಿ ನೇತ್ರಾಧಿಕಾರಿಗಳು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದಾರೆ.

ಪುಸ್ತಕಗಳನ್ನು ಕಣ್ಣಿಗೆ ತೀರಾ ಹತ್ತಿರ ಇರಿಸಿ ಕೊಂಡು ಓದುವುದು ಅಪಾಯಕಾರಿ. ಈ ಬಗ್ಗೆ ವಿದ್ಯಾರ್ಥಿಗಳು ಎಚ್ಚರ
ವಹಿಸಬೇಕು. ಅಲ್ಲದೆ, ಕಡಿಮೆ ಅಥವಾ ಮಂದ ಬೆಳಕಿನಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಮೊದಲು ಬಿಡಬೇಕು.
 ●ಎಂ.ವೆಂಕಟೇಶ್‌, ಸರ್ಕಾರಿ ನೇತ್ರಾಧಿಕಾರಿಗಳ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.