ಉಗ್ರಪ್ಪ ಆರೋಪಕ್ಕೆ ಸಿಎಂ ಗರಂ
Team Udayavani, Jul 1, 2018, 6:25 AM IST
ಬೆಂಗಳೂರು: ಕಾವೇರಿ ಕುರಿತ ಸರ್ವಪಕ್ಷ ಸಭೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಧಾನಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ನಡುವೆ ವಾಗ್ವಾದ ನಡೆಯಿತು ಎಂದು ಹೇಳಲಾಗಿದೆ.
ಉಗ್ರಪ್ಪ ಅವರು, ರಾಜ್ಯದ ಪರ ವಕೀಲರು ಸಮರ್ಥವಾಗಿವಾದ ಮಂಡಿಸದಿರುವುದು ಹಾಗೂ ಕಾಲ ಕಾಲಕ್ಕೆ ಸೂಕ್ತ ನಿರ್ಣಯ ಕೈಗೊಳ್ಳದಿರುವುದು ನಮಗೆ ಹಿನ್ನಡೆ ಉಂಟಾಗಲು ಕಾರಣ.
ಹೀಗಾಗಿ, ವಕೀಲರನ್ನು ಬದಲಾಯಿಸಿ ಎಂದು ಆಗ್ರಹಿಸಿದರು. ಇದಕ್ಕೆ ಗರಂ ಆದ ಎಚ್.ಡಿ.ಕುಮಾರಸ್ವಾಮಿ, ನಮ್ಮ ವಕೀಲರ ತಂಡದ ಆತ್ಮವಿಶ್ವಾಸ ಕುಗ್ಗಿಸುವ ಕೆಲಸ ಮಾಡುವುದು ಬೇಡ.
ನಾರಿಮನ್ ನೇತೃತ್ವದ ತಂಡ ಮೊದಲಿನಿಂದಲೂ ರಾಜ್ಯಕ್ಕೆ ನ್ಯಾಯ ಕೊಡಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ ಎಂದು ಸುಮ್ಮನಾಗಿಸಿದರು. ಸಭೆಯ ನಂತರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಹ, ಯಾರೂ ಇಲ್ಲಿ ವೈಯಕ್ತಿಕವಾಗಿ ಮುಖ್ಯವಲ್ಲ. ರಾಜ್ಯದ ಹಿತಾಸಕ್ತಿ ಮುಖ್ಯ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಿದೆ. ನಮ್ಮ ಅಧಿಕಾರಿಗಳು, ಕಾನೂನು ತಜ್ಞರು, ವಕೀಲರ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಅವರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.