ಸರ್ಕಾರ ವಿರೋಧಿ ಎಂಬ ಹಣೆಪಟ್ಟಿಗೆ ಸಿದ್ದು ಬೇಸರ


Team Udayavani, Jul 1, 2018, 6:00 AM IST

dinesh-siddu-gopal.jpg

ಬೆಂಗಳೂರು: ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಶನಿವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಕಾವೇರಿ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಜತೆ ಆಗಮಿಸಿದ್ದ ವೇಣು ಗೋಪಾಲ್‌, ಸಿದ್ದರಾಮಯ್ಯ ಜತೆ ಅರ್ಧ ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಶಾಂತಿವನದಲ್ಲಿ ಲೋಕಾಭಿರಾಮವಾಗಿ ಮಾತನಾಡಿದ್ದ ದೃಶ್ಯಗಳ ವಿಡಿಯೋ ವೈರಲ್‌ ಆದ ಬಗ್ಗೆಯೂ ಪ್ರಸ್ತಾಪವಾಗಿ, ನಾನು ಬೇರೆಯೇ ಅರ್ಥದಲ್ಲಿ ಹೇಳಿದ್ದೆ. ಮಾತು ತುಂಡರಿಸಲಾಗಿದೆ ಎಂದು ಸಮಜಾಯಿಷಿ ನೀಡಿದರು ಎನ್ನಲಾಗಿದೆ.

ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ಕೊಟ್ಟಿದ್ದರೂ ಕಾಂಗ್ರೆಸ್‌ ಅಸ್ತಿತ್ವ ಉಳಿಯಬೇಕು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೂ ನಮ್ಮ ಸರ್ಕಾರ ಎಂಬ ವಿಶ್ವಾಸ ಮೂಡಬೇಕು ಎಂಬುದಷ್ಟೇ ನನ್ನ ಕಾಳಜಿ. ಕಾಂಗ್ರೆಸ್‌ ಪಕ್ಷದ್ದೂ ಸರ್ಕಾರವಾದ್ದರಿಂದ ನಾವು ಈಗಾಗಲೇ ಮಂಡಿಸಿರುವ ಬಜೆಟ್‌ಗೆ ಹೊಸ ಅಂಶ ಸೇರಿಸಿ ಹೊಸ ಬಜೆಟ್‌ ಬೇಡ ಎಂದಷ್ಟೇ ಹೇಳಿದ್ದೆ. ಆದರೆ,ಸಮ್ಮಿಶ್ರ ಸರ್ಕಾರಕ್ಕೆ ನನ್ನ ವಿರೋಧ ಎಂಬುದು ಕೇವಲ ಸೃಷ್ಟಿ. ನಮ್ಮ ಪಕ್ಷದ ಕೆಲವು ನಾಯಕರೇ ಈ ರೀತಿ ಹೈಕಮಾಂಡ್‌ ಮುಂದೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಇದು ನನಗೆ ಬೇಸರ ತರಿಸಿದೆ ಎಂದು ಹೇಳಿದರು ಎಂದು ಹೇಳಲಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಮಾಧಾನಪಡಿಸಿದ ವೇಣುಗೋಪಾಲ್‌, ನಿಮ್ಮ ನಾಯಕತ್ವದಲ್ಲೇ ರಾಜ್ಯದಲ್ಲಿ ಪಕ್ಷ ಸಂಘಟನೆಯಾಗಲಿದೆ. ನಿಮ್ಮನ್ನು ನಿರ್ಲಕ್ಷ್ಯ ಮಾಡುವ ಅಥವಾ ದೂರ ಇಡುವ ಪ್ರಶ್ನೆಯೇ ಇಲ್ಲ. ಸೋನಿಯಾಗಾಂಧಿ ಹಾಗೂ ರಾಹುಲ್‌ ಗಾಂಧಿ ಸಹ ನಿಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಹೇಳಿದರು ಎನ್ನಲಾಗಿದೆ.

ಸಚಿವ ಡಿ.ಕೆ.ಶಿವಕುಮಾರ್‌ ಸಹ ವೇಣು ಗೋಪಾಲ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ನಂತರ ಡಿಸಿಎಂ ಪರಮೇಶ್ವರ್‌,ದಿನೇಶ್‌ ಗುಂಡೂರಾವ್‌ ಸೇರಿ ರಾಜ್ಯದ ಮುಖಂಡರ ಜತೆ ವೇಣುಗೋಪಾಲ್‌ ಖಾಸಗಿ ಹೋಟೆಲ್‌ನಲ್ಲಿ ಮಾತುಕತೆ ನಡೆಸಿದರು ಎಂದು ಹೇಳಲಾಗಿದೆ.

ಎಂ.ಬಿ.ಪಾಟೀಲ್‌ ಭೇಟಿ: ಎಂ.ಬಿ.ಪಾಟೀಲ್‌ ಸಹ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ತಮಗೆ ಹಾಗೂ ತಮ್ಮ ಜತೆ ಇರುವ ಶಾಸಕರಿಗೆ ಸಚಿವ ಸಂಪುಟದಲ್ಲಿ ಅವ 
ಕಾಶ ಕೊಡಿಸುವಂತೆ ಹೈಕಮಾಂಡ್‌ ಮೇಲೆ ಒತ್ತಡ ತರಬೇಕು ಎಂದು ಕೋರಿದರು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.