318 ಅಂಗನವಾಡಿ ಕೇಂದ್ರಗಳಿಗಿಲ್ಲ ಸ್ವಂತ ಕಟ್ಟಡ
Team Udayavani, Jul 1, 2018, 12:55 PM IST
ಯಾದಗಿರಿ: ಜಿಲ್ಲೆಯಲ್ಲಿ 1386 ಅಂಗನವಾಡಿ ಕೇಂದ್ರಗಳ ಪೈಕಿ 944 ಕೇಂದ್ರಗಳಿಗೆ ಸ್ವಂತ ಕಟ್ಟಡ ಸೌಕರ್ಯವಿದ್ದು, 318 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲದೆ ಇರುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಕಾಳಜಿವಹಿಸುವ ಇಲಾಖೆಗೆ ಜಿಲ್ಲೆಯಲ್ಲಿ ಮೂಲಸೌಕರ್ಯಗಳ ಕೊರತೆಯುಂಟಾಗಿದೆ.
ಸುಮಾರು ವರ್ಷಗಳಿಂದ ನಿರ್ಮಿತಿ ಕೇಂದ್ರ ಮತ್ತು ಪಿಆರ್‌ಇಗೆ ವಹಿಸಿರುವ ಕಾಮಗಾರಿಗಳು ಹಲವೆಡೆ ಪ್ರಾರಂಭವಾಗದೇ ಇರುವುದು ತಿಂಗಳಿಗೊಮ್ಮೆ ಕೇವಲ ಕಟ್ಟಡಗಳ ಬಾಡಿಗೆಯೇ ಲಕ್ಷಾಂತರ ರೂಪಾಯಿ ವ್ಯಯಿಸಬೇಕಾಗಿರುವ ಪರಿಸ್ಥಿತಿ ಇಲಾಖೆಗೆ ಎದುರಾಗಿದೆ.
ಜಿಲ್ಲೆಯ ಶಹಾಪುರ ತಾಲೂಕಿಗೆ 386 ಅಂಗನವಾಡಿ ಕೇಂದ್ರಗಳು ಮತ್ತು 9 ಮಿನಿ ಅಂಗನವಾಡಿ ಕೇಂದ್ರಗಳು ಮಂಜೂರಾಗಿವೆ. 279 ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸಿದರೆ, ಪಂಚಾಯಿತಿ ಕಟ್ಟಡದಲ್ಲಿ 12, ಸಮುದಾಯ ಭವನದಲ್ಲಿ 12 ಹಾಗೂ ಶಾಲೆ ಕಟ್ಟಡದಲ್ಲಿ 16 ಕೇಂದ್ರಗಳನ್ನು ತೆರೆಯಲಾಗಿದ್ದು, 76 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳನ್ನು ಅವಲಂಭಿಸಿವೆ.
ಸುರಪುರ ತಾಲೂಗೆ 451 ಅಂಗನವಾಡಿ ಮತ್ತು 23 ಮಿನಿ ಅಂಗನವಾಡಿ ಕೇಂದ್ರಗಳು ಮಂಜೂರಾಗಿವ. ಇದರಲ್ಲಿ 315 ಅಂಗನವಾಡಿಗಳು ಸ್ವಂತ ಕಟ್ಟದಲ್ಲಿ ನಡೆಯುತ್ತಿವೆ. ಸಮುದಾಯ ಭವನದಲ್ಲಿ 16, ಶಾಲಾ ಕಟ್ಟಡದಲ್ಲಿ 27 ಕೇಂದ್ರಗಳಿದ್ದರೆ 116 ಅಂಗನವಾಡಿಗಳಿಗೆ ಬಾಡಿಗೆ ಕಟ್ಟಡಗಳೇ ದಿಕ್ಕು ಎನ್ನುವಂತಿದೆ.
ಯಾದಗಿರಿ ತಾಲೂಕಿನಲ್ಲಿ 239 ಅಂಗನವಾಡಿ, 4 ಮಿನಿ ಅಂಗನವಾಡಿ ಕೇಂದ್ರಗಳು ಮಂಜೂರಾಗಿವೆ. 158 ಸ್ವಂತ ಕಟ್ಟಡ ಹೊಂದಿದ್ದರೆ ಪಂಚಾಯಿತಿ ಕಟ್ಟಡದಲ್ಲಿ 3, ಸಮುದಾಯ ಭವನದಲ್ಲಿ 4, ಶಾಲಾ ಕಟ್ಟಡದಲ್ಲಿ 8 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ.
ಇನ್ನೂ 70 ಅಂಗನವಾಡಿಗಳಿಗೆ ಸ್ವಂತ ಕಟ್ಟಡದ ಭಾಗ್ಯ ಕರುಣಿಸಬೇಕಿದೆ. ಇನ್ನೂ ಯಾದಗಿರಿ ತಾಲೂಕಿನಿಂದ ವಿಭಜನೆಗೊಂಡ ನೂತನ ಗುರುಮಠಕಲ್‌ನಲ್ಲಿ ಕೂಡ ಇಂತಹದ್ದೇ ಸಮಸ್ಯೆ ಇದೆ. 260 ಅಂಗನವಾಡಿ, 14 ಮಿನಿ ಅಂಗನವಾಡಿ ಕೇಂದ್ರಗಳು ಗುರುಮಠಕಲ್ ತಾಲೂಕಿಗೆ ಮಂಜೂರಾಗಿದ್ದು, 192 ಕೇಂದ್ರಗಳು ಸ್ವಂತ ಕಟ್ಟಡದಲ್ಲಿದೆ. 5 ಪಂಚಾಯಿತಿ ಕಟ್ಟಡದಲ್ಲಿ, 5 ಸಮುದಾಯ ಭವನಗಳಲ್ಲಿ ಹಾಗೂ 16 ಶಾಲಾ ಕಟ್ಟಡಗಳಲ್ಲಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಅಕ್ಷರ ಜ್ಞಾನ ನೀಡುತ್ತಿದ್ದು, 56 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿಯೇ ನಡೆಯುತ್ತಿವೆ.
ಸರ್ಕಾರ ಮಹಿಳೆಯರು ಮತ್ತು ಮಕ್ಕಳಿಗಾಗಿ ಜಾರಿಗೆ ತರುವ ಹಲವು ಯೋಜನೆಗಳ ಅನುಷ್ಠಾನಕ್ಕೆ ಅಂಗನವಾಡಿ ಕೇಂದ್ರಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತಹದ್ದರಲ್ಲಿ ನಿರ್ಮಿತಿ ಕೇಂದ್ರಕ್ಕೆ ವಹಿಸಿರುವ ಅಂಗನವಾಡಿ ಕೇಂದ್ರಗಳ
ಕಟ್ಟಡಗಳ ನಿರ್ಮಾಣದಲ್ಲಿ ಜಿಲ್ಲಾಡಳಿತವೂ ಆಸಕ್ತಿವಹಿಸದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ
ಅನೀಲ ಬಸೂದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.