ಟ್ರೀಪಾರ್ಕ್‌ ನಿರ್ವಹಣೆ ಅಭಿವೃದ್ಧಿ ಸಮಿತಿ ಹೆಗಲಿಗೆ


Team Udayavani, Jul 1, 2018, 2:34 PM IST

1-july-16.jpg

ಪುತ್ತೂರು: ಬಿರುಮಲೆ ಗುಡ್ಡದಲ್ಲಿ ಸಾಲು ಮರದ ತಿಮ್ಮಕ್ಕ ಟ್ರೀಪಾರ್ಕ್‌ ಕಾಮಗಾರಿ ಹೆಚ್ಚು- ಕಡಿಮೆ ಅಂತಿಮಗೊಂಡಿದೆ. ಮುಂದಿನ 5 ವರ್ಷ ವಿವಿಧ ಕಾಮಗಾರಿಗಳನ್ನು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಬಿರುಮಲೆ ಗುಡ್ಡ ಅಭಿವೃದ್ಧಿ ಸಮಿತಿ ಉತ್ಸಾಹದಿಂದಿದ್ದು, ಟ್ರೀಪಾರ್ಕ್‌ನ ನಿರ್ವಹಣೆಯನ್ನು ಇದಕ್ಕೆ ನೀಡುವ ಬಗ್ಗೆ ಆಲೋಚಿಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ವಿ.ಪಿ. ಕಾರ್ಯಪ್ಪ ಅವರು ಹೇಳಿದರು.

ದರ್ಬೆ ಸಮೀಪದ ಗುಲಾಬಿ ಸದನದಲ್ಲಿ ಶನಿವಾರ ಸಂಜೆ ನಡೆದ ಬಿರುಮಲೆ ಗುಡ್ಡ ಅಭಿವೃದ್ಧಿ ಸಮಿತಿಯ ಮಹಾಸಭೆಯಲ್ಲಿ ಅತಿಥಿಯಾಗಿ ಅವರು ಮಾತನಾಡಿದರು. ಬಿರುಮಲೆ ಗುಡ್ಡವನ್ನು ಅಭಿವೃದ್ಧಿ ಮಾಡಬೇಕು ಎಂದು ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಟ್ರೀಪಾರ್ಕ್‌ ಕಾಮಗಾರಿ ಯಶಸ್ವಿಯಾಗಿ ನಡೆಯುತ್ತಿದೆ. ರಮಾನಾಥ ರೈ ಸಚಿವರಾಗಿದ್ದಾಗ, ಅವರ ಆಶಯದಂತೆ ಟ್ರೀಪಾರ್ಕ್‌ ನಿರ್ಮಿಸಲಾಗಿದೆ. ರಾಜ್ಯ ಸರಕಾರದಿಂದ ಅನುದಾನ ಮಂಜೂರುಗೊಂಡಿದ್ದು, 41 ಲಕ್ಷ ರೂ.ಗಳ ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ 5 ವರ್ಷಗಳಲ್ಲಿ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಭೆಗೆ ತಿಳಿಸಿದರು.

ಮುಂದಿನ ಕಾಮಗಾರಿಗಾಗಿ 35 ಲಕ್ಷ ರೂ.ಗಳ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ. ಸದ್ಯದಲ್ಲೇ ಅನುದಾನ ಬಿಡುಗಡೆಗೊಳ್ಳುವ ಸಂಭವ ಇದೆ. ಇದರಲ್ಲಿ ಮಕ್ಕಳ ಪಾರ್ಕ್‌, ನೀರಿನ ಟ್ಯಾಂಕ್‌, ಗಲ್ಲಿ ಚೆಕ್ಸ್‌ (ಗುಡ್ಡದ ಮೇಲಿನಿಂದ ಹರಿದು ಬರುವ ಮಳೆನೀರಿನ ವೇಗವನ್ನು ಇಳಿಜಾರಿನಲ್ಲಿ ಕಡಿಮೆ ಮಾಡುವ ಕಾಮಗಾರಿ), ಕಾರಂಜಿ ನಿರ್ಮಾಣ ಮಾಡಲಾಗುವುದು. ಇಷ್ಟು ಕಾಮಗಾರಿ ಮುಗಿದ ಬಳಿಕ, ಇನ್ನೊಂದು ಹಂತದ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವಂತೆ ಪ್ರಸ್ತಾವನೆ ಮುಂದಿಡಲಾಗುವುದು. ಒಟ್ಟು ಐದು ವರ್ಷದಲ್ಲಿ ಇಂತಹ ಹಲವು ಕಾಮಗಾರಿ ಹಮ್ಮಿಕೊಳ್ಳಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಮಿತಿ ಅಧ್ಯಕ್ಷ ಎ.ವಿ. ನಾರಾಯಣ್‌ ಮಾತನಾಡಿ, 1978ರಲ್ಲಿ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಕೋಚಣ್ಣ ರೈಗಳ ಮುತುವರ್ಜಿಯಲ್ಲಿ ಬಿರುಮಲೆ ಗುಡ್ಡದಲ್ಲಿ ಅನೇಕ ಕೆಲಸಗಳನ್ನು ಮಾಡಲಾಗಿದೆ. ಇದೀಗ 15 ಎಕರೆ ಪ್ರದೇಶದಲ್ಲಿ ಟ್ರೀಪಾರ್ಕ್‌ ನಿರ್ಮಾಣ ಮಾಡಲಾಗುತ್ತಿದೆ. ಮುಂದೆಯೂ ವಿವಿಧ ಯೋಜನೆಗಳನ್ನು ಇಲ್ಲಿ ಹಮ್ಮಿಕೊಳ್ಳಬೇಕಾಗಿದೆ ಎಂದರು. ಸಮಿತಿಯಲ್ಲಿ ಸಕ್ರಿಯರಾಗಿದ್ದ ಪ್ರೊ| ಬಿ.ಜೆ. ಸುವರ್ಣ ಅವರು ಇತ್ತೀಚೆಗೆ ನಿಧನ ಹೊಂದಿದ್ದು, ಸಭೆಯಲ್ಲಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಉಪವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯ, ಉಪಾಧ್ಯಕ್ಷ ಎಂ. ದತ್ತಾತ್ರೇಯ, ಕಾರ್ಯದರ್ಶಿ ಎ. ಜಗಜೀವನ್‌ದಾಸ್‌ ರೈ, ಜಯಪ್ರಕಾಶ್‌ ರೈ, ಟಿ. ಕರುಣಾಕರ ಪೈ, ಶಿವಾನಂದ ಶೇಟ್‌, ನಿತಿನ್‌ ಪಕ್ಕಳ, ರವಿಪ್ರಕಾಶ್‌, ಗೋಪಾಲಕೃಷ್ಣ, ಡಾ| ಕೆ. ರವೀಂದ್ರ, ದೀಕ್ಷಾ ಪೈ, ಸುಭಾಶ್‌ ರೈ, ಎ. ಶರತ್‌ ಕುಮಾರ್‌, ಡಾ| ಸತ್ಯವತಿ ಆಳ್ವ, ಮನೋಜ್‌ ಎನ್‌. ಶಾಸ್ತ್ರೀ, ವನಿತಾ, ಡಾ| ಎನ್‌. ಯದುಕುಮಾರ್‌ ಉಪಸ್ಥಿತರಿದ್ದರು. ಖಜಾಂಚಿ ಎಂ.ಎಸ್‌. ಅಮ್ಮಣ್ಣಾಯ ವಂದಿಸಿದರು.

ಟಾಪ್ ನ್ಯೂಸ್

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.