ಮೇಲ್ಸೇತುವೆ ಸಂಚಾರಕ್ಕೊಂದು ಪರ್ಯಾಯ ಮಾರ್ಗ


Team Udayavani, Jul 1, 2018, 3:48 PM IST

1-july-19.jpg

ಮಂಗಳೂರು ನಗರ ವ್ಯಾಪ್ತಿಯಲ್ಲಿ ವಾಹನಗಳ ಸಂಖ್ಯೆಯಲ್ಲಿ ಬಹಳಷ್ಟು ಹೆಚ್ಚಳವಾಗಿದೆ. ಟ್ರಾಫಿಕ್‌ ಕಿರಿಕಿರಿ ನಿತ್ಯ ತಪ್ಪಿದ್ದಲ್ಲ. ಮುಖ್ಯವಾಗಿ ಬಳ್ಳಾಲ್‌ಬಾಗ್‌ನಿಂದ ಪಿವಿಎಸ್‌ ವರೆಗಿನ ರಸ್ತೆಯಲ್ಲಿ ವಾಹನ ಸಂಚಾರವೇ ಕಷ್ಟ ಎಂಬಂತಾಗಿದೆ. ಇಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿದ್ದು, ಶಾಲೆ, ಕಾಲೇಜುಗಳಿಗೆ ತೆರಳುವ ಮತ್ತು ಮರಳಿ ಮನೆಗೆ ಹೋಗುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಇದರಿಂದ ತೊಂದರೆ ಅನುಭವಿಸುವಂತಾಗಿದೆ.

ಮುಂದಿನ ದಿನಗಳಲ್ಲಿ ನಗರವು ಇನ್ನೂ ಬೆಳೆಯುವುದರಿಂದ ಇಲ್ಲಿನ ಸಮಸ್ಯೆ ಮತ್ತಷ್ಟು ಬಿಗಾಡಾಯಿಸುವ ಸಾಧ್ಯತೆ ಇದೆ. ಹೀಗಾಗಿ ಈ ನಿಟ್ಟಿನಲ್ಲಿ ಈಗಲೇ ತುರ್ತು ಕ್ರಮಕೈಗೊಂಡರೆ ಇಲ್ಲಿನ ಸಮಸ್ಯೆಗೊಂದು ಶಾಶ್ವತ ಪರಿಹಾರ ಸಿಕ್ಕಂತಾಗುತ್ತದೆ. ಎಂ.ಜಿ. ರಸ್ತೆಯನ್ನು ಲಾಲ್‌ಬಾಗ್‌ನಿಂದ ಪಿವಿಎಸ್‌ವರೆಗೆ ಈಗ ದ್ವಿಪಥ ರಸ್ತೆಯಿದ್ದು, ಇದನ್ನು ಮೂರು ಪಥವನ್ನಾಗಿ ಮಾಡಿದರೆ ವಾಹನಗಳ ಓಡಾಟಕ್ಕೆ ಅನುಕೂಲವಾಗಬಹುದು ಮತ್ತು ಇದರಿಂದ ಇಲ್ಲಿನ ಟ್ರಾಫಿಕ್‌ ಸಮಸ್ಯೆಗೆ ಸಂಪೂರ್ಣ ಮುಕ್ತಿ ಸಿಗಲಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮೂರು ಸಾಲುಗಳ ರಸ್ತೆ ನಿರ್ಮಾಣ ಕಷ್ಟ. ಹೀಗಾಗಿ ಎರಡು ಪಥಗಳ ಮೇಲೆ ಎರಡೆರಡು ಸಾಲುಗಳ ಅಂದರೆ ಒಟ್ಟು ನಾಲ್ಕು ಸಾಲಿನ ಮೇಲ್ಸೇತುವೆ ನಿರ್ಮಿಸಬಹುದು. ಇದರಿಂದ ಲಾಲ್‌ಬಾಗ್‌ನಿಂದ ಹಂಪನಕಟ್ಟೆ ಪ್ರದೇಶಗಳಿಗೆ ಹೋಗುವ ವಾಹನಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲು ಸಾಧ್ಯವಾಗುತ್ತದೆ. ಒಂದು ವೇಳೆ ಎರಡು ಪಥಗಳ ಮೇಲ್ಸೆತುವೆ ಮಾಡಲು ಸಾಧ್ಯವಿಲ್ಲವೆಂದಾದರೆ ಅದನ್ನು ಏಕಪಥದ ಸೇತುವೆಯನ್ನು ನಿರ್ಮಿಸಬಹುದು.

ಇದರೊಂದಿಗೆ ಪಿವಿಎಸ್‌ ನಿಂದ ಬಂಟ್ಸ್‌ ಹಾಸ್ಟೆಲ್‌ ರಸ್ತೆಯ ಅಭಿವೃದ್ಧಿಯ ಬಗ್ಗೆಯೂ ಚಿಂತನೆ ನಡೆಯಬೇಕಿದೆ. ಲಾಲ್‌ಬಾಗ್‌- ಬಳ್ಳಾಲ್‌ಬಾಗ್‌ನ ಮಧ್ಯದ ಪ್ರದೇಶ ಅಂದರೆ ಮಹಾನಗರ ಪಾಲಿಕೆಯ ಕಟ್ಟಡದಿಂದ ಬದಿಯ ರಸ್ತೆಯ ಅನಂತರದ ಪ್ರದೇಶ ಮತ್ತು ಪಿವಿಎಸ್‌ ಪ್ರದೇಶಗಳು ಎತ್ತರದಲ್ಲಿವೆ. ಹೀಗಾಗಿ ಇಲ್ಲಿ ಮೇಲ್ಸೇತುವೆ ಮಾಡುವುದರಿಂದಾಗಿ ರಸ್ತೆ ಮತ್ತು ಮೇಲ್ಸೆತುವೆ ಸಮಾನಾಂತರವಾಗಿರುತ್ತದೆ. ಮೇಲ್ಸೆತುವೆಗೆ ಬೆಂಗಳೂರಿನಲ್ಲಿ ಕಟ್ಟಿದಂತಹ ವೃತ್ತಾಕಾರದ ಕಂಬಗಳನ್ನು ಜೋಡಿಸಿದರೆ ರಸ್ತೆಯಲ್ಲಿ ಸಾಕಷ್ಟು ಜಾಗವೂ ಸಿಗುತ್ತದೆ. 

ಸ್ಮಾರ್ಟ್‌ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ರಸ್ತೆಯನ್ನು ಹೊರತುಪಡಿಸಿ ಸಂಚಾರಕ್ಕೆ ಇರುವ ಇತರ ಅವಕಾಶಗಳನ್ನೂ ಪರಿಗಣಿಸಬೇಕಿದೆ. ಹೀಗಾದರೆ ಮಾತ್ರ ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ಎದುರಾಗುವ ಬೃಹತ್‌ ಮಟ್ಟದ ಟ್ರಾಫಿಕ್‌ ಸಮಸ್ಯೆಯಿಂದ ಮುಕ್ತವಾಗಬಹುದು.

 ವಿಶ್ವನಾಥ ಕೋಟೆಕಾರ್‌,
ಕೋಡಿಕಲ್‌

ಟಾಪ್ ನ್ಯೂಸ್

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.