ಶಿಕ್ಷಿತ ಮಕ್ಕಳು ಈ ದೇಶದ ಆಸ್ತಿ
Team Udayavani, Jul 1, 2018, 3:57 PM IST
ಬೆಂಗಳೂರು: ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆತರೆ ದೇಶದ ಆಸ್ತಿಯಾಗುತ್ತಾರೆ ಎಂದು ಆದಿಚುಂಚನಗಿರಿ ಮಠದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ರಕ್ಷಾ ಫೌಂಡೇಷನ್ನಿಂದ ನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ 8ನೇ ವರ್ಷದ ಉಚಿತ ನೋಟ್ ಪುಸ್ತಕ ವಿತರಣೇ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಮಾಜಿ ರಾಷ್ಟ್ರಪತಿ ಡಾ.ಅಬ್ದುಲ್ ಕಲಾಂ ಬಡತನದ ಮಧ್ಯೆಯೂ ಶಿಕ್ಷಣ ಪಡೆದು ದೇಶದ ಆಸ್ತಿಯಾಗಿ ಬೆಳೆದರು. ಇಂತಹ ವ್ಯಕ್ತಿಗಳನ್ನು ಮಾದರಿಯಾಗಿಸಿಕೊಂಡು ವಿದ್ಯಾರ್ಥಿಗಳು ಶಿಕ್ಷಣ ಪಡೆದರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದು ಹೇಳಿದರು.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತಕುಮಾರ್ ಮಾತನಾಡಿ, ಇಂದಿನ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವುದರ ಜತೆಗೆ ಅವರಿಗೆ ಕನ್ನಡ ನಾಡು, ನುಡಿ, ದೇಶ ಹಾಗೂ ಪ್ರಕೃತಿ ಬಗ್ಗೆ ಅರಿವು ಮೂಡಿಸಬೇಕು. ಕೇವಲ ಸ್ವಾರ್ಥಕ್ಕೆ ಬಾಳದೆ, ಸಮಾಜದ ಏಳ್ಗೆಗೆ ಶ್ರಮಿಸಬೇಕು. ದೇಶ ಮತ್ತು ಸಂಸ್ಕೃತಿ ಬಗ್ಗೆ ಗೌರವದ ಭಾವನೆ ಹೊಂದಿರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ 10 ಸಾವಿರ ವಿದ್ಯಾರ್ಥಿಗಳಿಗೆ 1 ಲಕ್ಷ ಪುಸ್ತಕಗಳು, ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ 30 ವಿದ್ಯಾರ್ಥಿಗಳಿಗೆ ಐಪ್ಯಾಡ್ ಹಾಗೂ ಇಬ್ಬರು ವಿಕಲಚೇತನ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ನೀಡಲಾಯಿತು. ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ವಿಧಾನ ಪರಿಷತ್ ಸದಸ್ಯೆ ತಾರಾ, ಬಿಜೆಪಿ ಮುಖಂಡ ಪ್ರಹ್ಲಾದ್ ಬಾಬು, ಪಾಲಿಕೆ ಮಾಜಿ ಸದಸ್ಯ ಸಿ.ಕೆ. ರಾಮಮೂರ್ತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.