ಮುಂದುವರಿದ ಫುಟ್‌ಪಾತ್ ತೆರವು ಕಾರ್ಯ
Team Udayavani, Jul 1, 2018, 4:19 PM IST
ಧಾರವಾಡ: ನಗರದ ಮಾರುಕಟ್ಟೆ ಪ್ರದೇಶದಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಡಿಸಿಪಿ ನೇಮಗೌಡ ಮಾರ್ಗದರ್ಶನದಲ್ಲಿ ಶನಿವಾರವೂ ಮುಂದುವರಿದಿದೆ. ಸಂಚಾರ ವಿಭಾಗದ ಎಸಿಪಿ ಎಂ.ವಿ. ನಾಗನೂರ ನೇತೃತ್ವದ ಪೊಲೀಸರ ತಂಡವು ಸುಭಾಸ ರಸ್ತೆ ಹಾಗೂ ಅಕ್ಕಿಪೇಟೆಯ ಫುಟ್‌ಪಾತ್ ಅತಿಕ್ರಮಣ ಮಾಡಿಕೊಂಡಿದ್ದ ಜಾಗವನ್ನು ತೆರವುಗೊಳಿಸುವ ಕಾರ್ಯ ಮಾಡಿತು. ಈ ವೇಳೆ ಎರಡು ಗೂಡಂಗಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಫುಟ್‌ಪಾತ್ ಅತಿಕ್ರಮಣ ಮಾಡದಂತೆ ಎಚ್ಚರಿಕೆ ನೀಡಿದರು.
ಕೆಲ ಗೂಡಂಗಡಿ ಮಾಲೀಕರು ಪೊಲೀಸರೊಂದಿಗೆ ಮಾತಿನ ಚಕಮಕಿ ಸಹ ಕೈಗೊಂಡು, ಕೆಲ ಹೊತ್ತು ರಸ್ತೆಯಲ್ಲಿಯೇ ಪ್ರತಿಭಟನೆ ನಡೆಸಿದರು. ಈ ರೀತಿ ಏಕಾಏಕಿ ನಮ್ಮ ಅಂಗಡಿ ತೆರವು ಮಾಡಿದರೆ ಬದುಕೋದು ಹೇಗೆ? ಎಂದು ಪೊಲೀಸರನ್ನು ಪ್ರಶ್ನಿಸಿದ ಪ್ರತಿಭಟನಾಕಾರರು, ಕಾರ್ಯಾಚರಣೆ ಕೈಬಿಡುವಂತೆ ಆಗ್ರಹಿಸಿದರು. ಕೊನೆಗೆ ಡಿಸಿಪಿ ನೇಮಗೌಡ ಅವರೊಂದಿಗೆ ಸಂಜೆ ಮಾತನಾಡುವಂತೆ ಪ್ರತಿಭಟನಾಕಾರರ ಮನವೊಲಿಸಿದ ಪೊಲೀಸರು, ಪ್ರತಿಭಟನೆ ಹಿಂಪಡೆಯುವಂತೆ ಮಾಡಿದರು.
ಇದಾದ ಬಳಿಕ ಸಂಜೆ ಗೂಡಂಗಡಿ ಮಾಲೀಕರೊಂದಿಗೆ ಸಭೆ ನಡೆಸಿದ ಡಿಸಿಪಿ ನೇಮಗೌಡ, ಪಾದಚಾರಿಗಳ ಸುಗಮ ಸಂಚಾರಕ್ಕೆ ತೆರವು ಕಾರ್ಯಾಚರಣೆ ಅನಿವಾರ್ಯ. ಈ ಜಾಗ ಹೊರತುಪಡಿಸಿ ಗುರುತಿಸಿರುವ ಹಾಕರ್ ಝೋನ್‌ಗಳಲ್ಲಿ ಅಂಗಡಿ ಇಟ್ಟು ವ್ಯಾಪಾರ ಮಾಡಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.