ಮಕ್ಕಳನ್ನೇ ಆಸ್ತಿಯನ್ನಾಗಿ ರೂಪಿಸಲು ಪಾಲಕರಿಗೆ ಸಲಹೆ


Team Udayavani, Jul 1, 2018, 4:41 PM IST

1-july-24.jpg

ಹುಬ್ಬಳ್ಳಿ: ಮಕ್ಕಳಿಗಾಗಿ ಕೋಟ್ಯಂತರ ರೂ. ಆಸ್ತಿ ಮಾಡುವ ಬದಲು ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಮಕ್ಕಳನ್ನೇ ದೊಡ್ಡ ಆಸ್ತಿಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪಾಲಕರು ಚಿಂತಿಸಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ಘಂಟೀಕೇರಿಯ ಶಾಂತಿನಾಥ ಪ್ರೌಢಶಾಲೆಯಲ್ಲಿ ಶಹರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಹಮ್ಮಿಕೊಂಡಿದ್ದ 2017-18ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 2018-19ನೇ ಸಾಲಿನ ವಿವಿಧ ವಿಷಯ ಪರಿವಾರಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸತತ ಪ್ರಯತ್ನ, ಕಠಿಣ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಇವರ ಸಾಧನೆ ಶ್ಲಾಘನೀಯ ಎಂದರು.

ಸರಕಾರಿ ಶಾಲೆಯ ಮಕ್ಕಳು ಉತ್ತಮ ಸಾಧನೆ ಮಾಡಿರುವುದು ಹಾಗೂ ಕೆಲ ಸರಕಾರಿ ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ ಬಂದಿರುವುದು ಸಂತಸ ತಂದಿದೆ. ವಿದ್ಯಾರ್ಥಿಗಳು ಮುಂದಿನ ಶಿಕ್ಷಣದಲ್ಲೂ ಇದೇ ರೀತಿ ಸಾಧನೆ ಮಾಡಬೇಕು. ಇವರ ಸಾಧನೆ ಮುಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಲಿ ಎಂದರು.

ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವೈಷ್ಣವಿ ಗುಂಡಿಕೇರಿ, ನಜ್ಮಾ ಕಮ್ಮಾರ, ಅರ್ಚನಾ ಕೋಟಗಿ, ಗಾಯತ್ರಿ ಅರ್ಕಸಾಲಿ, ಸಂಸ್ಕೃತಿ ಬಿಳಗಿ, ಸ್ವಾತಿ ಬೆಳವಡಿಮಠ, ನಿಸರ್ಗ ಯಲಬುರ್ಗಿ, ರುಕ್ಸಾರ್‌ ಬಂಕಾಪುರ, ಉಮೆಹಮಿ ಅಜಮಿ, ನವೀನ ಬಳ್ಳಾರಿ, ಸಿಮ್ರಾನ್‌ ಸೈಯದ್‌, ಐಶ್ವರ್ಯಾ ಬೆಳಂಕರ ಅವರನ್ನು ಪುರಸ್ಕರಿಸಲಾಯಿತು.

ಶೇ.100 ಫ‌ಲಿತಾಂಶ ಪಡೆದ ಶಾಲೆಗಳ ಮುಖ್ಯಾಧ್ಯಾಪಕರನ್ನು ಸನ್ಮಾನಿಸಲಾಯಿತು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕುಂಬಾರ, ಶಾಂತಿ ನಿಕೇತನ ಶಿಕ್ಷಣ ಟ್ರಸ್ಟ್‌ನ ಸಿ. ಬೋರಣ್ಣ, ಭರತ ಬಂಡಾರಿ, ಪ್ರಾಚಾರ್ಯ ಕ್ಯಾಥರೀನ್‌, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಪ್ರೌಢಶಾಲೆ ಮುಖ್ಯಾಧ್ಯಾಪಕರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.