“ಸಂಘಟನೆಯಿಂದ ಸಮಾಜದ ತುಡಿತಕ್ಕೆ ಶೀಘ್ರ ಸ್ಪಂದನೆೆ
Team Udayavani, Jul 3, 2018, 7:10 AM IST
‘ಕಟಪಾಡಿ: ವಿಶ್ವಬ್ರಾಹ್ಮಣ ಯುವ ಸಂಘಟನೆಯು ಸಮಾಜದ ತುಡಿತಕ್ಕೆ ಶ್ರೇಷ್ಠವಾಗಿ ಸ್ಪಂದಿಸುತ್ತಿದ್ದು, ಸಮಾಜ ಸೇವೆಗಾಗಿ ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿ ಲಭಿಸುವಂತಾಗಲಿ ಎಂದು ವಿಶ್ವಕರ್ಮ ಒಕ್ಕೂಟದ ಗೌರವಾಧ್ಯಕ್ಷ ಅಲೆವೂರು ಯೋಗೀಶ ಆಚಾರ್ಯ ಹೇಳಿದರು.
ಜು.1ರಂದು ಕಟಪಾಡಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇಗುಲದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವಿಶ್ವಬ್ರಾಹ್ಮಣ ಯುವ ಸಂಘಟನೆ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ , ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸಂಘಟನೆ ಸಮಾಜದ ಸಮಸ್ತ ರೀತಿಯ ಸಂಕಷ್ಟಕ್ಕೆ ಬೆನ್ನೆಲುಬಾಗಿ ನಿಂತಿದೆ. ಸಮಾಜವು ತುಳಿತಕ್ಕೊಳಗಾಗದಂತೆ ಮುಂಜಾಗ್ರತೆ ವಹಿಸುವುದರ ಜತೆಗೆ ಮುನ್ನೆಚ್ಚರಿಕೆಯನ್ನೂ ನೀಡುತ್ತಿದೆ. ವರ್ಷಾಂತ್ಯದೊಳಗೆ ಮತ್ತೂಮ್ಮೆ ವಧೂ-ವರರ ಸಮಾವೇಶ ನಡೆಸಲಾಗುತ್ತದೆ ಎಂದವರು ತಿಳಿಸಿದರು.
ಸಂಘಟನೆಯ ಅಧ್ಯಕ್ಷ ಗಣೇಶ ಆಚಾರ್ಯ ಉಚ್ಚಿಲ ಅಧ್ಯಕ್ಷತೆ ವಹಿಸಿದ್ದರು. 16 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ,
4 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ಸಹಾಯಧನ ವಿತರಿಸ ಲಾಯಿತು.
ದೇವಸ್ಥಾನದ ಧರ್ಮದರ್ಶಿ ನವೀನ ಆಚಾರ್ಯ ಪಡುಬಿದ್ರಿ, ಸಂಘಟನೆಯ ಗೌರವಾಧ್ಯಕ್ಷ ಪಡುಕುತ್ಯಾರು ಸದಾಶಿವ ಎ. ಆಚಾರ್ಯ, ಜುವೆಲರಿ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ನಾಗರಾಜ ಆಚಾರ್ಯ, ನಿವೃತ್ತ ತಹಶೀಲ್ದಾರ ಮುರಳೀಧರ ಆಚಾರ್ಯ, ಚಕ್ರತೀರ್ಥ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಕೇಶವ ಆಚಾರ್ಯ ಸಗ್ರಿ, ಕಾಪು ಶ್ರಿ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಶೇಖರ ಆಚಾರ್ಯ, ಉಪಾಧ್ಯಕ್ಷ ಸುಧಾಕರ ಆಚಾರ್ಯ ಬಿಳಿಯಾರು, ಪ್ರಧಾನ ಕಾರ್ಯದರ್ಶಿ ಹರೀಶ್ ಆಚಾರ್ಯ ಕಳತ್ತೂರು ಉಪಸ್ಥಿತರಿದ್ದರು.ಸಂಘಟನೆಯ ಸಂಚಾಲಕ ಮುರಳೀಧರ ಆಚಾರ್ಯ ಇನ್ನಂಜೆ, ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿ ದ್ದರು. ಗಣೇಶ ಆಚಾರ್ಯ ಸ್ವಾಗತಿಸಿದರು. ರಾಜೇಶ್ ಆಚಾರ್ಯ ಬಿಳಿಯಾರು ಸಾಧನಾ ವರದಿ ನೀಡಿದರು. ರತ್ನಾಕರ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಹಿರೇಬೆಟ್ಟು ಪ್ರದೀಪ್ ಆಚಾರ್ಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.