ನೀರವ್ ಮೋದಿಗೆ ರೆಡ್ ಕಾರ್ನರ್ ನೋಟಿಸ್
Team Udayavani, Jul 3, 2018, 6:00 AM IST
ಹೊಸದಿಲ್ಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಅಕ್ರಮವಾಗಿ 13 ಸಾವಿರ ಕೋಟಿ ರೂ. ಸಾಲ ಪಡೆದು ತಲೆಮರೆಸಿಕೊಂಡಿರುವ ವಜ್ರ ವ್ಯಾಪಾರಿ ನೀರವ್ ಮೋದಿಗೆ ಇಂಟರ್ ಪೋಲ್, ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿದೆ. ಮುಂಬೈ ವಿಶೇಷ ನ್ಯಾಯಾಲಯದಲ್ಲಿ ನೀರವ್ ಮೋದಿ ವಿರುದ್ಧ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿದ್ದರಿಂದ ಅವರ ಬಂಧನಕ್ಕೆ ಜಾಮೀನುರಹಿತ ವಾರಂಟ್ ಜಾರಿಯಾಗಿತ್ತು.
ವಿದೇಶಿ ಪ್ರವೇಶ ನಿರ್ಬಂಧ: ಈ ಹಿನ್ನೆಲೆಯಲ್ಲಿ ಸಿಬಿಐ ಕೋರಿಕೆ ಮೇರೆಗೆ ಅಂತಾರಾಷ್ಟ್ರೀಯ ಪೊಲೀಸ್ ಸಂಘಟನೆ ಸಂಸ್ಥೆಯು, 192 ರಾಷ್ಟ್ರಗಳಿಗೆ ನೀರವ್ ಮೋದಿ, ಆತನ ಸೋದರ ನಿಶಾಲ್ ಮೋದಿ, ಸಹೋದ್ಯೋಗಿ ಸುಭಾಷ್ ಪ್ರರಾಬ್ಗ ಪ್ರವೇಶ ನೀಡದಂತೆ ರೆಡ್ ಕಾರ್ನರ್ ನೋಟಿಸ್ ನೀಡಿದೆ.
ದೇಶದಲ್ಲೇ ಅತಿ ದೊಡ್ಡ ಬ್ಯಾಂಕಿಂಗ್ ಅವ್ಯವಹಾರ ಎಂದೇ ಕುಖ್ಯಾತಿ ಪಡೆದಿರುವ ಪಿಎನ್ಬಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ನೀರವ್ ಮೋದಿ, ಸ್ವದೇಶಕ್ಕೆ ಮರಳಿ ವಿಚಾರಣೆಗೆ ಹಾಜರಾಗಲು ಅನಾರೋಗ್ಯದ ನೆಪವೊಡ್ಡಿ ನಿರಾಕರಿಸಿದ್ದರು. ನೀರವ್ ಮೋದಿ ಇಂಗ್ಲೆಂಡ್ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದ್ದು, 2008ರಿಂದ 2017ರ ಅವಧಿಯೊಳಗೆ ನೀರವ್ 5 ಪಾಸ್ಪೋರ್ಟ್ ಪಡೆದಿದ್ದು, ಈ ಎಲ್ಲಾ ಮಾಹಿತಿಗಳನ್ನು ಇಂಟರ್ಪೋಲ್ ಕಲೆ ಹಾಕಿದೆ. ಹೀಗಾಗಿ ಅವರನ್ನು ಬಂಧಿಸಿ ಭಾರತಕ್ಕೆ ಕರೆ ತರುವ ಪ್ರಕ್ರಿಯೆ ಚುರುಕಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.