ಸಂಸದರಿಂದ ಸುಳ್ಳು ಆರೋಪ: ರಮಾನಾಥ ರೈ
Team Udayavani, Jul 3, 2018, 3:05 AM IST
ಮಂಗಳೂರು: ಕಳೆದ ಐದು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಜಿಲ್ಲೆ ಅಭಿವೃದ್ಧಿಯ ಸುವರ್ಣಯುಗವನ್ನು ಕಂಡಿದ್ದರೂ ಸಂಸದ ನಳಿನ್ ಕುಮಾರ್ ವಿನಾ ಕಾರಣ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪಗಳನ್ನು ಮಾಡಿ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಮಂಗಳೂರು – ಸೋಲಾಪುರ ಹೆದ್ದಾರಿ ನಿರ್ಮಾಣದ ಕಾಮಗಾರಿ ತಡವಾಗಲು ನಾನು ಸೇರಿದಂತೆ ಮಾಜಿ ಶಾಸಕರಾದ ಕೆ. ಅಭಯಚಂದ್ರ ಜೈನ್ ಹಾಗೂ ಮೊದಿನ್ ಬಾವಾ ಕಾರಣ ಎಂಬುದಾಗಿ ಸಂಸದ ನಳಿನ್ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾರೆ. ಹೆದ್ದಾರಿ ನಿರ್ಮಾಣದ ಭೂಸ್ವಾಧೀನದ ವೇಳೆ ಜಾಗ ಕಳೆದುಕೊಳ್ಳುವ ಸಾರ್ವಜನಿಕರ ವಿಶ್ವಾಸ ಗಳಿಸಲು ಮೂರು ಬಾರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು. ಆದರೆ ಆಮಂತ್ರಣವಿದ್ದರೂ ನಳಿನ್ ಸಭೆಗೆ ಭಾಗವಹಿಸದೆ ನಿರ್ಲಕ್ಷ್ಯ ತೋರಿದ್ದರು ಎಂದರು.
ಅತ್ಯಂತ ಸೋಮಾರಿ ಸಂಸದ
ಜಿಲ್ಲೆಯಲ್ಲಿ ನಡೆದ ಅಭಿವೃದ್ಧಿ ಕೆಲಸಗಳ ಬಗ್ಗೆ ಉಲ್ಲೇಖೀಸಿದ ರಮಾನಾಥ ರೈ, ಲೇಡಿಗೋಷನ್ ಆಸ್ಪತ್ರೆಯ ಹೊಸ ಕಟ್ಟಡದ ನಿರ್ಮಾಣ, ಜಿಲ್ಲಾ ಅಂಬೇಡ್ಕರ್ ಭವನ, ವಿಮಾನ ನಿಲ್ದಾಣ ಸಂಪರ್ಕ ರಸ್ತೆ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆ, ಮಿನಿವಿಧಾನ ಸೌಧಗಳ ನಿರ್ಮಾಣ, ಜಿ.ಪಂ. ಹಾಗೂ ಗ್ರಾ.ಪಂ. ರಸ್ತೆಗಳ ಅಭಿವೃದ್ಧಿ, ಉಪ್ಪಿನಂಗಡಿ ಸಮುದಾಯ ಆಸ್ಪತ್ರೆ ಹೀಗೆ ಹತ್ತು ಹಲವು ಅಭಿವೃದ್ಧಿ ಕಾರ್ಯಗಳು ಕಳೆದ ಐದು ವರ್ಷಗಳಲ್ಲಿ ನಡೆದಿವೆ. ಆದರೆ ಸಂಸದರು ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಡಾಲರ್ ಬಗ್ಗೆಯೂ ತಿಳಿಯದ ನಳಿನ್ ಕೋಮು ಪ್ರಚೋದನಕಾರಿ ಭಾಷಣ ಮಾಡುವುದಕ್ಕೆ ಮಾತ್ರ ಸೀಮಿತವಾಗುತ್ತಿದ್ದಾರೆ. ಅವರು ನಾನು ಕಂಡ ಅತ್ಯಂತ ಸೋಮಾರಿ ಸಂಸದ ಎಂದರು.
ಮೂಲರಪಟ್ಣ ಸೇತುವೆ ಕುಸಿಯಲು ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಮರಳುಗಾರಿಕೆ ಕಾರಣ ಎಂದು ಆರೋಪಿಸುತ್ತಿದ್ದಾರೆ. ಆದರೆ ಕಳೆದ 15 ವರ್ಷಗಳಿಂದಲೂ ಸೇತುವೆಯ ಸುತ್ತ ಮುತ್ತ ಮರಳುಗಾರಿಕೆ ನಡೆಯುತ್ತಿದೆ ಎಂದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ದೊರೆಯಲಿದೆ ಎಂಬ ಸುದ್ದಿ ಇದೆ, ನಿಜವೇ ಎಂಬ ಸುದ್ದಿಗಾರರ ಪ್ರಶ್ನೆಗೆ, ನನಗದು ಗೊತ್ತಿಲ್ಲ. ನಾನು ಹೈಕಮಾಂಡ್ ಅಲ್ಲ. ನಾನು ಪಕ್ಷದ ನಿಷ್ಟಾವಂತ ಕಾರ್ಯಕರ್ತ ಎಂದರು. ಮೇಯರ್ ಭಾಸ್ಕರ್ ಕೆ., ಕಾಂಗ್ರೆಸ್ ಮುಖಂಡರಾದ ಶಶಿಧರ್ ಹೆಗ್ಡೆ, ನವೀನ್ ಡಿ’ಸೋಜಾ, ಪ್ರತಿಭಾ ಕುಳಾç, ಮಮತಾ ಗಟ್ಟಿ, ಸಾಹುಲ್ ಹಮೀದ್, ಅಶೋಕ್ ಡಿ.ಕೆ., ಶುಭೋದಯ ಆಳ್ವ ಉಪಸ್ಥಿತರಿದ್ದರು.
ಸೋಮಾರಿ ಯಾರೆಂಬ ಉತ್ತರ ಸಿಕ್ಕಿದೆ: ನಳಿನ್
ಮಂಗಳೂರು: ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹೇಳಿಕೆಗೆ ಸೋಮವಾರ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಂಸದ ನಳಿನ್ ಕುಮಾರ್ ಕಟೀಲು, ಯಾರು ಸೋಮಾರಿ ಎಂದು ಕಳೆದ ಚುನಾವಣೆಯಲ್ಲಿ ಜನರು ತೀರ್ಪು ನೀಡಿದ್ದಾರೆ ಎಂದು ಪ್ರತ್ಯುತ್ತರ ನೀಡಿದರು. ಕಳೆದ ಚುನಾವಣೆಯಲ್ಲಿ ಜನರು ಅವರನ್ನು ಕಾಡಿಗೆ ಕಳುಹಿಸಿದ್ದಾರೆ. ಹೀಗಾಗಿ ಅವರ ಆರೋಪಗಳಿಗೆ ನಾನು ಸ್ಪಂದಿಸುವ ಆವಶ್ಯಕತೆ ಇಲ್ಲ. ಕಳೆದ 30 ವರ್ಷಗಳಿಂದ ಸಚಿವನಾಗಿದ್ದೇನೆ ಎಂದು ಹೇಳಿಕೊಂಡಿರುವುದೇ ಅವರ ಸಾಧನೆ. ಅವರು ಸಚಿವರಾಗಿದ್ದಾಗ ಜಿಲ್ಲೆಗೆ ಏನು ಕೊಟ್ಟಿದ್ದಾರೆ ಎಂಬುದನ್ನು ಹೇಳಲಿ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಜಿಲ್ಲೆಗೆ ಏನು ನೀಡಿದ್ದಾರೆ ಎಂಬುದನ್ನು ನಾನು ಹೇಳುತ್ತೇನೆ ಎಂದರು. ಡಾಲರ್ ನ ಬಗ್ಗೆಯೂ ತಿಳಿಯದಿದ್ದ ನಳಿನ್ ಕೋಮು ಪ್ರಚೋದನಕಾರಿ ಭಾಷಣ ಮಾಡುವುದಕ್ಕೆ ಮಾತ್ರ ಸೀಮಿತ ಎಂಬ ರೈ ಹೇಳಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ನಳಿನ್ ಅವರು, ರಮಾನಾಥ ರೈ ಅವರು ಸರ್ವಜ್ಞ . ಅವರಿಗೆ ಎಲ್ಲವೂ ತಿಳಿದಿದೆ ಎಂದಷ್ಟೇ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.