ಒತ್ತಿನೆಣೆ: ರಕ್ಷಣಾ ಗೋಡೆಯಲ್ಲಿ ಬಿರುಕು
Team Udayavani, Jul 3, 2018, 9:30 AM IST
ಬೈಂದೂರು: ಒತ್ತಿನೆಣೆಯಲ್ಲಿ ಗುಡ್ಡ ಕುಸಿತ ತಡೆಯಲು ನಿರ್ಮಿಸಿರುವ ಹೈಟೆಕ್ ತಂತ್ರಜ್ಞಾನದ ಸ್ಲೋಪ್ ಪ್ರೊಟೆಕ್ಷನ್ ವಾಲ್‌ನಲ್ಲಿ ಸೋಮವಾರ ಸಂಜೆಯ ವೇಳೆಗೆ ಬಿರುಕು ಕಂಡುಬಂದಿದ್ದು, ನಿರಂತರ ಮಳೆ ಬಂದರೆ ಸಂಪೂರ್ಣ ತಡೆಗೋಡೆ ಧರಾಶಾಯಿಯಾಗುವ ಭೀತಿ ಎದುರಾಗಿದೆ.
ಬೈಂದೂರಿನ ಮಟ್ಟಿಗೆ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಐ.ಆರ್.ಬಿ. ಕಂಪೆನಿಯ ಅಸಮರ್ಪಕ ಕಾಮಗಾರಿ ಯಿಂದಲೇ ಮಳೆಗಾಲದಲ್ಲಿ ಸಾರ್ವಜನಿಕರು ಇಷ್ಟೊಂದು ಹೈರಾಣಾಗುವಂತೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ತಡೆಗೋಡೆಯ ಕಾಂಕ್ರೀಟ್ ಮತ್ತು ಗುಡ್ಡದ ಮಣ್ಣು ರಸ್ತೆಯತ್ತ ಕುಸಿಯಲಾರಂಭಿಸಿದ್ದು ವಾಹನ ಪ್ರಯಾಣಿಕರು ಎಚ್ಚರದಿಂದ ಸಾಗಬೇಕಾಗಿದೆ.
ಎಚ್ಚರಿಸಿದ್ದ ಉದಯವಾಣಿ
ಕಳೆದ ವರ್ಷ ಗುಡ್ಡ ಕುಸಿತ ಸಂಭವಿಸಿ ಮಳೆಗಾಲದಲ್ಲಿ ರಸ್ತೆ ತಡೆ ಉಂಟಾಗಿತ್ತು. ಮಳೆಗಾಲ ಪೂರ್ತಿ ಹೆದ್ದಾರಿ ಪ್ರಯಾಣಿಕರು ಆತಂಕದಿಂದಲೇ ಕಳೆಯುವಂತಾಗಿತ್ತು. ಈ ವರ್ಷ ಇಂತಹ ಘಟನೆ ಮರುಕಳಿಸಬಾರದು ಎಂದು ಇಲಾಖೆ ಹೊಸ ತಂತ್ರಜ್ಞಾನದ ಸ್ಲೋಪ್ ಪ್ರೊಟೆಕ್ಷನ್ ವಾಲ್ ನಿರ್ಮಿಸಿತ್ತು. ಒತ್ತಿನೆಣೆ ಗುಡ್ಡದಲ್ಲಿ ಶೇಡಿಮಣ್ಣು ಇರುವ ಕಾರಣ ಮಳೆಗಾಲದಲ್ಲಿ ಕುಸಿಯುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸೂಕ್ತ ಮಣ್ಣು ಪರೀಕ್ಷೆ ಮಾಡುವ ಮೂಲಕ ಸಮರ್ಪಕವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಉದಯವಾಣಿ ವರದಿ ಪ್ರಕಟಿಸಿ ಎಚ್ಚರಿಸಿತ್ತು. ಮಳೆಗಾಲದ ಆರಂಭದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಕುರಿತು ವರದಿ ಮಾಡಿರುವುದನ್ನೂ ನೆನಪಿಸಿಕೊಳ್ಳಬಹುದಾಗಿದೆ.
ಗುಡ್ಡದ ತಳಭಾಗದಲ್ಲಿ ಒಂದು ತಿಂಗಳ ಹಿಂದೆ ಕುಸಿತ ಉಂಟಾಗಿತ್ತು. ಮರಳಿನ ಚೀಲಗಳನ್ನು ಜೋಡಿಸಿ ಕುಸಿಯದಂತೆ ತಾತ್ಕಾಲಿಕ ತಡೆ ಮಾಡಲಾಗಿತ್ತು
ಸೋಮವಾರ ಸಿಮೆಂಟ್ ಬಿರುಕು ಬಿಟ್ಟಿರುವ ಜಾಗದಲ್ಲಿ ಚರಂಡಿಗೆ ಕುಸಿಯಬಾರದು ಎಂದು ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಲಾಗುತ್ತಿದೆ. ಕಂಪೆನಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಹೆದ್ದಾರಿ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.