ಅಭಿಮಾನಿಗಳ ಸಮ್ಮುಖದಲ್ಲಿ ಗಣೇಶ್ ಹುಟ್ಟುಹಬ್ಬ
Team Udayavani, Jul 3, 2018, 11:15 AM IST
ನಟ ಗಣೇಶ್ ಸೋಮವಾರ ಅಭಿಮಾನಿಗಳ ಸಮ್ಮುಖದಲ್ಲಿ ತಮ್ಮ 39 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸೋಮವಾರ ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ಗಣೇಶ್ ಮನೆಗೆ ತೆರಳಿ ಶುಭಾಶಯ ಕೋರಿದ್ದು ವಿಶೇಷವಾಗಿತ್ತು. ಮುಂಜಾನೆಯಿಂದಲೇ ಅವರ ಮನೆ ಎದುರು ಸಾಲುಗಟ್ಟಿ ನಿಂತಿದ್ದ ಅಭಿಮಾನಿಗಳು, ಹೂವಿನ ಹಾರ ಹಿಡಿದು ತಮ್ಮ ನೆಚ್ಚಿನ ನಾಯಕನ ಕೊರಳಿಗೆ ಹಾಕುವ ಮೂಲಕ ಶುಭಾಶಯ ಕೋರಿದರು.
ಅಭಿಮಾನಿಗಳು ತಂದಿದ್ದ ವಿವಿಧ ಬಗೆಯ ಕೇಕ್ ಕತ್ತರಿಸಿದ ಗಣೇಶ್ ಅವರಿಗೆ ಕೇಕ್ ತಿನ್ನಿಸುವ ಮೂಲಕ ಅವರ ಜೊತೆ ಫೋಟೋಗೆ ಫೋಸ್ ಕೊಟ್ಟು ಇಡೀ ದಿನ ಅಭಿಮಾನಿಗಳ ಜೊತೆ ಕಳೆದರು. ಗಣೇಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗಣೇಶ್ ಅಭಿನಯದ ಹೊಸ ಚಿತ್ರ “ಗೀತಾ’ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಅವರ ಮನೆಯ ಮುಂದೆ ‘ಗೀತಾ’ ಚಿತ್ರದ ಕಟೌಟ್ ಹಾಕಿದ್ದು ಈ ಹುಟ್ಟುಹಬ್ಬದ ವಿಶೇಷ.
ಇನ್ನು, ಗಣೇಶ್ ಬರ್ಥ್ಡೇ ಅಂಗವಾಗಿ ಪ್ರಶಾಂತ್ರಾಜ್ ನಿರ್ದೇಶನದ “ಆರೆಂಜ್’ ಚಿತ್ರದ ಟೀಸರ್ ಕೂಡ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಿಲ್ಪಾ ಗಣೇಶ್ ಕೂಡ ಗಣೇಶ್ ಅವರಿಗೆ ಕೇಕ್ ತಿನ್ನಿಸಿ ಶುಭಹಾರೈಸಿದರು. ನಿರ್ದೇಶಕ ಪ್ರಶಾಂತ್ರಾಜ್, ನಿರ್ಮಾಪಕ ನವೀನ್, ಸೈಯದ್ ಸಲಾಮ್ ಸೇರಿದಂತೆ ಚಿತ್ರರಂಗದ ಅನೇಕ ನಿರ್ಮಾಪಕರು, ನಿರ್ದೇಶಕರು, ಕಲಾವಿದರು ಆಗಮಿಸಿ, ಶುಭಾಶಯ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.