ಮುನಿದ ವರುಣ;ಕೈ ಕಟ್ಟಿ ಕುಳಿತ ರೈತರು..!


Team Udayavani, Jul 3, 2018, 12:10 PM IST

gul-6.jpg

ರಾಯಚೂರು: ಮಳೆಗಾಲ ಶುರುವಾಗಿ ತಿಂಗಳೂ ಕಳೆದರೂ ಜಿಲ್ಲೆಗೆ ಮಾತ್ರ ವರುಣ ಕೃಪೆ ತೋರಿಲ್ಲ. ಬರೀ ಮೋಡ ಕವಿದ ವಾತಾವರಣ ಇದೆಯಾದರೂ ಮಳೆ ಮಾತ್ರ ಬರುತ್ತಿಲ್ಲ. ಇದರಿಂದ ಬಿತ್ತನೆಗಾಗಿ ಕಾದು ಕುಳಿತ ರೈತರು ಆಗಸದತ್ತ ಮುಖ ಮಾಡಿ ಕೂಡುವಂತಾಗಿದೆ. ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದ್ದರೂ ಜಿಲ್ಲೆಯ ಮೇಲೆ ಮಾತ್ರ ವರುಣ ಕೃಪೆ ತೋರುತ್ತಿಲ್ಲ. ಜಿಲ್ಲೆಯ ಕೆಲವೆಡೆ ಒಂದಷ್ಟು ಮಳೆ ಸುರಿದಿದೆಯಾದರೂ ಬಿತ್ತನೆಗೆ ಭೂಮಿ ಹದವಾಗುವಷ್ಟು ಆಗಿಲ್ಲ. ಹೊಲವನ್ನು ಹಸನು ಮಾಡಿರುವ ರೈತರು, ಬಿತ್ತನೆ ಬೀಜ, ರಸಗೊಬ್ಬರ ಸಂಗ್ರಹಿಸಿಟ್ಟುಕೊಂಡಿದ್ದಾರೆ.

ಇನ್ನೊಂದು ಮಳೆ ಬಂದರೆ ಬಿತ್ತನೆ ಮಾಡಬಹುದು ಎಂಬ ನಿರೀಕ್ಷೆಗಳು ಹುಸಿಯಾಗುತ್ತಿವೆ. ಜೂನ್‌ನಲ್ಲಿ ಮುಂಗಾರು ಹಂಗಾಮು ಸಂಪೂರ್ಣ ವಿಫಲಗೊಂಡ ಪರಿಣಾಮ ಕೃಷಿ ಚಟುವಟಿಕೆಗಳು ನಿಂತು ಬಿಟ್ಟಿವೆ. ನಿರೀಕ್ಷೆಯಷ್ಟು ಮಳೆಯಾಗಿಲ್ಲ. 98ರಿಂದ 100 ಎಂಎಂ ಮಳೆ ನಿರೀಕ್ಷಿಸಲಾಗಿತ್ತು. ಆದರೆ, ಈವರೆಗೆ ಕೇವಲ 40 ಎಂಎಂ ಕೂಡ ಮಳೆ ಬಿದ್ದಿಲ್ಲ. ಇದರಿಂದ ಈಗಾಗಲೇ ಬಿತ್ತನೆ ಮಾಡಿರುವ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ವಾಡಿಕೆ ಮಳೆ ಬಂದಿಲ್ಲ: ಜಿಲ್ಲೆಯಲ್ಲಿ ಕಳೆದ ವರ್ಷದ ಮುಂಗಾರು ಹಂಗಾಮಿನಲ್ಲಿ 145.6 ಮಿ.ಮೀ. ವಾಡಿಕೆ ಮಳೆಯಲ್ಲಿ 160.5 ಮಿ.ಮೀ. ಮಳೆ ದಾಖಲಾಗಿತ್ತು. ಶೇ.10ರಷ್ಟು ಹೆಚ್ಚು ಮಳೆಯಾಗಿದ್ದರಿಂದ ಕೃಷಿ ಚಟುವಟಿಕೆಗಳು ಅಡ್ಡಿ ಆತಂಕವಿಲ್ಲದೆ ಸಾಂಗವಾಗಿ ಸಾಗಿದ್ದವು. ಆದರೆ, ಈ ಬಾರಿ 100 ಮಿ.ಮೀ. ವಾಡಿಕೆ ಮಳೆ ಬೇಕಿದ್ದು, ಕೇವಲ 35-40 ಮಿ.ಮೀ. ಮಳೆಯಾಗಿದೆ. ಕಳೆದ ಸಾಲಿನ ಮುಂಗಾರಿನಲ್ಲಿ 3,55,757 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿಯಿತ್ತು. ಪ್ರಸಕ್ತ ಸಾಲಿನಲ್ಲೂ ಸರಾಸರಿ 3,50,551 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದು, ಈವರೆಗೆ ಕೇವಲ 13,455 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಇದರಿಂದ ಮುಂಚಿತವಾಗಿ ಬಿತ್ತನೆ ಮಾಡಿರುವ ಬೆಳೆಗಳು ಮೊಳಕೆಯೊಡೆದಿದ್ದು, ನೀರಿಲ್ಲದೇ ಬಾಡುತ್ತಿವೆ. ವಾರದೊಳಗೆ ಮಳೆ ಬಾರದಿದ್ದಲ್ಲಿ ಅದನ್ನು ಅಳಿಸಿ ಪುನಃ ಹಿಂಗಾರಿಗೆ ಮತ್ತೆ ಬಿತ್ತನೆ ಮಾಡುವ ಪರಿಸ್ಥಿತಿ ಎದುರಾಗಲಿದೆ.

ಈಗಾಗಲೇ ಮಳೆಯಾಶ್ರಿತ ಕೃಷಿ ಪ್ರದೇಶದ ರೈತರು ಮುಂಗಾರು ಹಂಗಾಮಿನ ಆಸೆ ಕೈ ಬಿಟ್ಟಿದ್ದಾರೆ. ಆದರೆ, ನೀರಾವರಿ ಪ್ರಾಂತದ ರೈತರು ಮಾತ್ರ ಬತ್ತ, ಹತ್ತಿ, ತೊಗರಿ ಸೇರಿ ಇತರೆ ಬೆಳೆಗಳ ಬಿತ್ತನೆ ಮಾಡಿದ್ದು, ನೀರು ಹರಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಟ್ಟಾರೆ ಬಿತ್ತನೆ ಮಾಡಿರುವ ರೈತರು, ಮಾಡಬೇಕೆಂದಿರುವ ರೈತರು ಆಗಸದತ್ತ ಮುಖ ಮಾಡಿ ವರುಣನ ಆಗಮನಕ್ಕಾಗಿ ಕಾದು ಕುಳಿತಿರುವುದಂತೂ ಸತ್ಯ. 

ಮುಂಗಾರು ಮಳೆ ಜೂನ್‌ ತಿಂಗಳಲ್ಲಿ ನಿರೀಕ್ಷೆಯಷ್ಟು ಬಂದಿಲ್ಲ. 100 ಎಂ.ಎಂ. ಮಳೆ ನಿರೀಕ್ಷೆಯಲ್ಲಿ ಕೇವಲ 35ರಿಂದ 40 ಎಂಎಂ ಮಾತ್ರ ಸುರಿದಿದೆ. ಇನ್ನೂ ಒಂದೆರಡು ದಿನಗಳಲ್ಲಿ ಮಳೆ ಬರುವ ಸಾಧ್ಯತೆಗಳಿವೆ.  
ವಿಶ್ವನಾಥ ಬಿರಾದಾರ, ಹವಾಮಾನ ತಜ್ಞರು 

 ಪ್ರಸಕ್ತ ಸಾಲಿನಲ್ಲೂ ಸರಾಸರಿ ಪ್ರಸಕ್ತ ಸಾಲಿನಲ್ಲೂ ಸರಾಸರಿ  ,50,551 3,50,551 ಹೆಕ್ಟೇರ್‌ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಪ್ರದೇಶದಲ್ಲಿ ಬಿತ್ತನೆ ಗುರಿ

 ಈವರೆಗೆ ಕೇವಲ ಈವರೆಗೆ ಕೇವಲ 13,455 ಹೆಕ್ಟೇರ್‌ ಪ್ರದೇಶದಲ್ಲಿ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ

ಟಾಪ್ ನ್ಯೂಸ್

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.