ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ-ಸೌಲಭ್ಯ ಸಿಗಲಿ

Team Udayavani, Jul 3, 2018, 3:31 PM IST

dvg-1.jpg

ದಾವಣಗೆರೆ: ನಾವು ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಗಮನಕ್ಕೆ ತರುವುದಲ್ಲ. ಕೊರತೆ ಬಗ್ಗೆ ಸಭೆಗಳಲ್ಲಿ ಪ್ರಸ್ತಾಪಿಸಬೇಕು ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ನೇತೃತ್ವದ ತಂಡ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿಗಳಿಗೆ ಸೂಚಿಸಿದೆ. 

ಜಿಪಂ ಅಧ್ಯಕ್ಷೆ ಮಂಜುಳಾ ಟಿ.ವಿ. ರಾಜು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಂ. ವಾಗೀಶ್‌ಸ್ವಾಮಿ, ಸದಸ್ಯೆ ಶೈಲಜಾ ಬಸವರಾಜ್‌ ಅವರಿದ್ದ ತಂಡ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ವಿವಿಧ ವಿಭಾಗ ಪರಿಶೀಲಿಸಿದ ವೇಳೆ ವೈದ್ಯಾಧಿಕಾರಿಗಳು ಅಲ್ಲಿನ ಸಮಸ್ಯೆ ಹೇಳಿದಾಗ, ಅಗತ್ಯ ಇರುವ ಉಪಕರಣಗಳ ಬಗ್ಗೆ ಸಂಬಂಧಿತರ ಗಮನಕ್ಕೆ ತಂದು, ಅವುಗಳನ್ನ ತರಿಸಿಕೊಂಡು ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಕೊಡುವಂತಾಗಬೇಕು. ಯಂತ್ರೋಪಕರಣಗಳ ಕೊರತೆ ಮುಂದಿಟ್ಟುಕೊಂಡು ಆಸ್ಪತ್ರೆಗೆ ಬಂದವರಿಗೆ ತೊಂದರೆ ಕೊಡುವುದು ಸರಿಯಲ್ಲ. ಸಕಾಲಿಕವಾಗಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿತು.

ಸಂಜೆಯ ವೇಳೆಯಲ್ಲೂ ಹೊರ ರೋಗಿ ವಿಭಾಗದಲ್ಲಿ ಅತಿ ಹೆಚ್ಚಿನ ಜನರು ಇರುವುದನ್ನು ಕಂಡು ಪ್ರಶ್ನಿಸಿದ ಜಿಪಂ ತಂಡಕ್ಕೆ, ಸೋಮವಾರ ದಾವಣಗೆರೆ ಜಿಲ್ಲೆಯ ವಿವಿಧ ಭಾಗದಿಂದ ಮಾತ್ರವಲ್ಲ, ಹೊರ ಜಿಲ್ಲೆಯಿಂದಲೂ ಜನರು ಆಗಮಿಸುತ್ತಾರೆ. ಹಾಗಾಗಿಯೇ ಅತಿ ಹೆಚ್ಚಿನ ಜನರು ಇದ್ದಾರೆ ಎಂದು ನಿವಾಸಿ ವೈದ್ಯಾಧಿಕಾರಿ ಡಾ| ರಾಘವೇಂದ್ರಸ್ವಾಮಿ ಹೇಳಿದರು. 

ಸ್ಕ್ಯಾನಿಂಗ್‌ ಸೆಂಟರ್‌ನಲ್ಲೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಇರುವುದು ಕಂಡು ಬಂದಿತು. ಅಧ್ಯಕ್ಷೆ ಮಂಜುಳಾ ಟಿ.ವಿ. ರಾಜು ಕಾರಣ ಕೇಳಿದಾಗ, ಹಾವೇರಿ, ಬಳ್ಳಾರಿ ಜಿಲ್ಲೆಯ ಭಾಗದಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗರ್ಭಿಣಿಯರು ಹೆರಿಗೆಗೆ ದಾಖಲಾಗುತ್ತಾರೆ. ತಿಂಗಳಿಗೆ ಕನಿಷ್ಠ 900 ಹೆರಿಗೆ ಆಗುತ್ತವೆ. ಸಹಜವಾಗಿಯೇ ಒತ್ತಡ ಇರುತ್ತದೆ. ಹಳೆ ಹೆರಿಗೆ ಆಸ್ಪತ್ರೆ ಜೊತೆಗೆ 100 ಹಾಸಿಗೆ ಸಾಮರ್ಥ್ಯದ ಹೊಸ ಆಸ್ಪತ್ರೆಗೆ ಬೇಡಿಕೆ ಸಲ್ಲಿಸಲಾಗಿದೆ. ಇನ್ನೂ ಮಂಜೂರಾತಿ ಆಗಿಲ್ಲ ಎಂದು ನಿವಾಸಿ ವೈದ್ಯರು ತಿಳಿಸಿದರು.

ಹೊಸ ಆಸ್ಪತ್ರೆಗೆ ಬೇಡಿಕೆ ಸಲ್ಲಿಸಿ ಎಷ್ಟು ದಿನಗಳಾಗಿವೆ. ಸಂಬಂಧಿತ ಸಚಿವರು, ಶಾಸಕರ ಗಮನಕ್ಕೆ ತರಲಾಗಿದೆಯೇ ಎಂಬ ಪ್ರಶ್ನೆಗೆ ಇದು ಬಹಳ ದಿನಗಳ ಬೇಡಿಕೆ ಎಂದು ಆಸ್ಪತ್ರೆ ಅಧೀಕ್ಷಕಿ ಡಾ| ನೀಲಾಂಬಿಕೆ ತಿಳಿಸಿದರು. ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿರುವ ಹೈಯರ್‌ ಎಂಡ್‌ ಅಲ್ಟ್ರಾಸೌಂಡ್‌ ಮೆಷಿನ್‌ಗೆ ಅಗತ್ಯ ಹೈಯರ್‌ ಎಂಡ್‌ ವ್ಯವಸ್ಥೆಯೇ ಇಲ್ಲ. ಮೈಂಡ್‌ಡ್ರೈ ಮೆಷಿನ್‌ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಡಿಜಿಟಲ್‌ ಎಕ್ಸ್‌ರೇ ಫಿಲಂ… ಕೊರತೆ ಇದೆ ಎಂದು ಅಲ್ಲಿನ ಸಿಬ್ಬಂದಿ ತಂಡದ ಗಮನಕ್ಕೆ ತಂದರು. 

ಮಹಿಳೆಯರ ವೈದ್ಯಕೀಯ ಚಿಕಿತ್ಸಾ ವಿಭಾಗ, ಹೃದ್ರೋಗ ವಿಭಾಗ, ವೆಂಟಿಲೇಟರ್‌, ಮೂತ್ರಪಿಂಡ ಚಿಕಿತ್ಸಾ ವಿಭಾಗ ಇತರೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಬರುವರಿಗೆ ಯಾವುದೇ ರೀತಿಯ ಲೋಪವಾಗದಂತೆ ಸಕಾಲಿಕ ಚಿಕಿತ್ಸೆ ಒದಗಿಸಲು ತಂಡ ತಿಳಿಸಿದೆ.

ಟಾಪ್ ನ್ಯೂಸ್

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.