ಕೈ ಐಟಿ ಸೆಲ್ ನಲ್ಲಿ ಲೈಂಗಿಕ ಕಿರುಕುಳ?
Team Udayavani, Jul 4, 2018, 11:49 AM IST
ನವದೆಹಲಿ/ಬೆಂಗಳೂರು: ನಟಿ ರಮ್ಯಾ ಮುಖ್ಯಸ್ಥೆಯಾಗಿರುವ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ಘಟಕದ ಉದ್ಯೋಗಿಯೊಬ್ಬ ರು ಸಹೋದ್ಯೋಗಿಯಿಂದಲೇ ಲೈಂಗಿಕ ಕಿರುಕುಳಕ್ಕೆ ತುತ್ತಾದ ಕುರಿತು ವಿವಾದ ಭುಗಿಲೆದಿದ್ದಿದೆ.
ಈ ಸಂಗತಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗುರಿಯಾಗುತ್ತಲೇ ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿರುವ ರಮ್ಯಾ ಆ ಮಹಿಳೆ ಜಾಲತಾಣದ ದೂರು ಸಮಿತಿಗೆ ಯಾವುದೇ ರೀತಿಯಲ್ಲಿ ದೂರು ಸಲ್ಲಿಸಿಲ್ಲ. ಜತೆಗೆ ಹಾಲಿ ಉದ್ಯೋಗಿಯ ಪರವಾಗಿ 39 ಮಂದಿ ಸಹಿ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಏನಿದು ಪ್ರಕರಣ?: ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ಘಟಕದಲ್ಲಿ ತನಗೆ ಸಹೋದ್ಯೋಗಿ ಚಿರಾಗ್ ಪಟ್ನಾಯಕ್ ಎಂಬುವರು ಕಿರುಕುಳ ನೀಡುತ್ತಿದ್ದರು ಎಂದು ಅಲ್ಲಿ ಉದ್ಯೋಗಿಯಾಗಿದ್ದು, ಸದ್ಯ ರಾಜೀನಾಮೆ ನೀಡಿರುವ ಮಹಿಳೆಬ್ಬರು ಆರೋಪಿಸಿದ್ದಾರೆ. ಈ ಸಂಬಂಧ ರಮ್ಯಾಗೆ ಇ-ಮೇಲ್ ಕೂಡಾ ಮಾಡಿ ದ್ದರು.
ಆ ಮಹಿಳೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ನಿರ್ವಹಣಾ ವ್ಯವಸ್ಥಾಪಕಿಯಾಗಿದ್ದರು. ಕಿರುಕುಳ ನೀಡುತ್ತಿದ್ದ ಎಂಬ ಆರೋಪಕ್ಕೆ ಗುರಿಯಾಗಿರುವ ಚಿರಾಗ್ ಪಟ್ನಾಯಕ್ ಜತೆ ಸಮನ್ವಯತೆ ಮಾಡಿಕೊಂಡು ಟ್ವೀಟ್ ನಿರ್ವ ಹಿ ಸುವ ಕೆಲಸವೂ ಮಹಿಳೆಗೆ ನಿಗದಿಯಾಗಿತ್ತು. ಒಂದು ಹಂತದಲ್ಲಿ ಸಾಮಾಜಿಕ ಜಾಲ ತಂಡದಿಂದ ಹೊರನಡೆದಿದ್ದ ಮಹಿಳೆ ಮಾ.5ರಂದು ಮತ್ತೆ ಕೆಲಸಕ್ಕೆ ಸೇರ್ಪಡೆಗೊಂಡಿದ್ದರು.
ಬಳಿಕ ಚಿರಾಗ್ ಪಟ್ನಾಯಕ್ ಹಲವು ಸಂದರ್ಭಗಳಲ್ಲಿ ಅನುಚಿತವಾಗಿ ವರ್ತಿಸಿದ್ದ ಎಂದು ಮಹಿಳೆ ರಮ್ಯಾಗೆ ಬರೆದಿರುವ ಪತ್ರದಲ್ಲಿ ಆರೋಪ ಮಾಡಿದ್ದಾರೆ. ಹಲವು ಬಾರಿ ತನ್ನ ಖಾಸಗಿತನ ಅತಿಕ್ರಮಿಸಿ, ಅನುಚಿತವಾಗಿ ವರ್ತಿಸಿದ್ದಾನೆ ಎಂದು ಬರೆದುಕೊಂಡಿದ್ದಾರೆ. ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಅವರು ಮನವಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದ ತಂಡದಿಂದ ಮೇ 17ರಂದು ಖನ್ನತೆಯ ಕಾರಣ ನೀಡಿ ರಾಜೀನಾಮೆ ನೀಡಿರುವುದನ್ನೂ ರಮ್ಯಾಗೆ ಬರೆದ ಇ-ಮೇಲ್‌ನಲ್ಲಿ ಉಲ್ಲೇಖೀಸಲಾಗಿದೆ. ಮೇ 14ರಂದು ಪಟ್ನಾಯಕ್ ವಿರುದ್ಧ ತಾನು ಮಾಡಿರುವ ಆರೋಪ ಮತ್ತು ಯಾವ ಕಾರಣಕ್ಕಾಗಿ ಒತ್ತಡ ಉಂಟಾಗಿದೆ ಎಂದು ಮನವರಿಕೆ ಮಾಡಲು ಯತ್ನಿಸಿದರೂ ರಮ್ಯ ಅದನ್ನು ಕೇಳಿಸಿಕೊಳ್ಳಲು ಸಿದ್ಧರಿರಲಿಲ್ಲ.
ಆದರೆ ರಮ್ಯಾ ತನ್ನ ಕಾರ್ಯತತ್ಪರತೆ, ನಿಷ್ಠೆಯನ್ನು ಹೊಗಳಿದರು ಎಂದು ಬರೆದುಕೊಂಡಿದ್ದಾರೆ. ಈ ಇ-ಮೇಲ್ ಈಗ ಟ್ವಿಟ ರ್ ನಲ್ಲಿ ವೈರಲ್ ಆಗಿ ದೆ. ಉದ್ಯೋಗಿಗೆ ಬೆಂಬಲ: ಮಹಿಳೆ ಮಾಡಿದ ಈ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ರಮ್ಯಾ, ಮಾಜಿ ಉದ್ಯೋಗಿ ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿದ್ದಾರೆ. ಆದರೆ ದೂರುಗಳ ಸಮಿತಿಗೆ ಯಾವುದೇ ರೀತಿಯಲ್ಲಿ ಅವರು ಆರೋಪದ ಬಗ್ಗೆ ಮಾಹಿತಿ ನೀಡಿಲ್ಲ ಎಂದಿದ್ದಾರೆ.
ಚಿರಾಗ್ ಪಟ್ನಾಯಕ್ ಪರವಾಗಿ 39 ಮಂದಿ ಸಹಿ ಹಾಕಿದ್ದಾರೆ. ಮಾಜಿ ಉದ್ಯೋಗಿ ಮತ್ತು ಪಟ್ನಾಯಕ್ ನಡುವಿನ ಸಂಭಾಷಣೆಯ ವಿವರಗಳನ್ನು ಪರಿಶೀಲಿಸಿದಾಗ ಅವರ ಪರವಾಗಿಯೇ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಟ್ವಿಟರ್‌ನಲ್ಲಿ ಬಿಡುಗಡೆ ಮಾಡಲಾಗಿರುವ ಹೇಳಿಕೆಯಲ್ಲಿ ರಮ್ಯಾ ತಿಳಿಸಿದ್ದಾರೆ. ಮಹಿಳೆಯನ್ನು ಸಂಪರ್ಕಿಸುವ ಪ್ರಯತ್ನ ನಡೆದಿದ್ದು, ಉತ್ತರಕ್ಕಾಗಿ ಕಾಯಲಾಗುತ್ತಿದೆ ಎಂದಿದ್ದಾರೆ.
ಬಿಜೆಪಿ ಕಿಡಿ: ಇದೇ ವೇಳೆ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ ಬಿಜೆಪಿ ನಾಯಕಿ ಮೀನಾಕ್ಷಿ ಲೇಖೀ ಪಕ್ಷದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತದೆ ಎಂಬ ಆರೋಪಗಳ ಬಗ್ಗೆ ಅಧ್ಯಕ್ಷ ರಾಹುಲ್ ಗಾಂಧಿ ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣದ ಮಾಜಿ ಉದ್ಯೋಗಿ ಮಾಡಿದ ಆರೋಪಗಳನ್ನು ಪರಿಶೀಲಿಸುತ್ತಿದ್ದಾರೆ ಎಂದಿದ್ದಾರೆ.
ಭಾರತ ಮಹಿಳೆಯರಿಗೆ ಸುರಕ್ಷತೆಯಲ್ಲ ಎಂಬ ಸಮೀಕ್ಷೆಯನ್ನು ಮುಂದಿಟ್ಟುಕೊಂಡು ಕೇಂದ್ರದ ವಿರುದ್ಧ ಅವರು ಟೀಕಿಸಿದ್ದರು ಎಂದಿದ್ದಾರೆ. ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಕೂಡ ಸುರಕ್ಷಿತರಾಗಿಲ್ಲ ಎಂದು ಹೇಳಿದ ಲೇಖೀ ಇಂಡಿಯಾ ಗೇಟ್ ಬಳಿ ಏಪ್ರಿಲ್‌ನಲ್ಲಿ ಕಥುವಾ ಘಟನೆ ಖಂಡಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ಪ್ರಿಯಾಂಕಾ ವಾಧಾರನ್ನೂ ಎಳೆದಾಡಲಾಗಿತ್ತು ಎಂದು ಹೇಳಿದ್ದಾರೆ ಲೇಖೀ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.