ಸುದಿನ Follow up : ಪೊಟ್ಟುಕೆರೆ ಪಹಣಿಪತ್ರ ಸರಿಪಡಿಸಲು ಕ್ರಮ
Team Udayavani, Jul 5, 2018, 2:25 AM IST
ಕಡಬ: ಕುಟ್ರಾಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಹಳೆ ಸ್ಟೇಶನ್ ನ ಪೊಟ್ಟುಕೆರೆಯ ಪರಂಬೋಕು ಪ್ರದೇಶವನ್ನು ಪಹಣಿ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿ ಸರಕಾರಿ ಜಮೀನು ಎಂದು ನಮೂದಿಸಿ ಅತಿಕ್ರಮಣ ಮಾಡಲು ಹುನ್ನಾರ ನಡೆಯುತ್ತಿದೆ ಎಂದು ಕುಟ್ರಾಪ್ಪಾಡಿ ಗ್ರಾ.ಪಂ. ವತಿಯಿಂದ ಕಂದಾಯ ಇಲಾಖೆಗೆ ಸಲ್ಲಿಸಿದ ದೂರಿಗೆ ಸ್ಪಂದಿಸಿರುವ ಕಂದಾಯ ಅಧಿಕಾರಿಗಳು ಕೊನೆಗೂ ಪಹಣಿ ಪತ್ರ ಸರಿಪಡಿಸಲು ಕ್ರಮ ಕೈಗೊಂಡಿದ್ದಾರೆ.
4 ತಿಂಗಳ ಬಳಿಕ ಕ್ರಮ
ಕುಟ್ರಾಪ್ಪಾಡಿ ಗ್ರಾಮದ ಸರ್ವೆ ನಂ. 40ರಲ್ಲಿ ಇರುವ ಹಳೆ ಸ್ಟೇಶನ್‌ನ ಪೊಟ್ಟುಕೆರೆಯನ್ನು ಉದ್ಯೋಗ ಖಾತರಿ ಯೋಜನೆಯಡಿ ಹೂಳೆತ್ತಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಾಹಿತಿ ಪಡೆದಾಗ ಈ ಹಿಂದೆ ಕೈಬರಹದ ಪಹಣಿ ಪತ್ರದಲ್ಲಿ ಕೆರೆ ಪರಂಬೋಕು ಎಂದು ಇರುವ ಜಾಗವನ್ನು ಇದೀಗ ಸರಕಾರಿ ಜಾಗ ಎಂದು ದಾಖಲಿಸಲಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ಅಕ್ರಮ ತಿದ್ದುಪಡಿಯ ಹಿಂದೆ ಕೆರೆಯನ್ನು ಆತಿಕ್ರಮಣಗೊಳಿಸುವ ಹುನ್ನಾರ ಇರುವುದನ್ನು ಮನಗಂಡು ಅಕ್ರಮ ತಿದ್ದುಪಡಿಯನ್ನು ಸರಿಪಡಿಸಿ ಸದ್ರಿ ಪ್ರದೇಶವನ್ನು ಮತ್ತೆ ಕೆರೆ ಪರಂಬೋಕು ಎಂದು ಪಹಣಿಯಲ್ಲಿ ದಾಖಲಿಸಬೇಕು ಎಂದು ಪಂ. ವತಿಯಿಂದ ಜಿಲ್ಲಾಧಿಕಾರಿ, ಸಹಾಯಕ ಕಮೀಷನರ್ ಹಾಗೂ ಕಡಬ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿತ್ತು. ನಾಲ್ಕು ತಿಂಗಳ ಬಳಿಕ ಪಹಣಿ ಪತ್ರದಲ್ಲಿನ ತಪ್ಪನ್ನು ಸರಿಪಡಿಸಲು ಕಂದಾಯ ಇಲಾಖೆ ಮುಂದಾಗಿದೆ.
ಕೆರೆ ಕಬಳಿಸುವ ಸಂಚು
ಹಳೆಯ ಕಡತಗಳಲ್ಲಿ ಹಾಗೂ ಪಹಣಿಪತ್ರಗಳಲ್ಲಿ ಕೆರೆ ಪರಂಬೋಕು ಎಂದೇ ದಾಖಲಾಗಿದ್ದ ಈ ಭೂಮಿಯನ್ನು ಕೆಲವು ವರ್ಷಗಳ ಹಿಂದೆ ಏಕಾಏಕಿ ಸರಕಾರಿ ಜಮೀನು ಎಂದು ಪಹಣಿಯಲ್ಲಿ ದಾಖಲಿಸಿರುವುದರ ಹಿಂದೆ ಕೆರೆಯನ್ನು ಕಬಳಿಸುವ ಉದ್ದೇಶ ಇದೆ ಎಂದು ಸ್ಥಳೀಯರು ಆರೋಪಿಸಿದ್ದರು. ಯಾರಿಗೋ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೆರೆಯ ಜಮೀನನ್ನು ಸರಕಾರಿ ಎಂದು ನಮೂದಿಸಲಾಗಿದೆ. ಒಂದು ಭಾಗದಲ್ಲಿ ಕಲ್ಲು, ಮಣ್ಣು ತುಂಬಿರುವುದರಿಂದ ಕೆರೆಯ ಗಾತ್ರ ಸಾಕಷ್ಟು ಕಿರಿದಾಗಿದೆ. ಕೆರೆಗಳನ್ನು ಉಳಿಸಿ ಅಭಿವೃದ್ಧಿಪಡಿಸಬೇಕೆಂದು ಆದೇಶ ಹೊರಡಿಸಿರುವ ಸರಕಾರ ಸದ್ರಿ ಕೆರೆಯ ಅತಿಕ್ರಮಣದ ಸಂಚನ್ನು ವಿಫಲಗೊಳಿಸಿ ಕೆರೆಯನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು. ಉದಯವಾಣಿ ‘ಸುದಿನ’ ಈ ಕುರಿತು ಎರಡು ಸಚಿತ್ರ ವರದಿಗಳನ್ನು ಪ್ರಕಟಿಸಿ ಸಂಬಂಧಪಟ್ಟ ಇಲಾಖೆಯನ್ನು ಎಚ್ಚರಿಸಿತ್ತು.
ಪ್ರಸ್ತಾವನೆಗೆ ಸೂಚನೆ
ಸುದಿನ ವರದಿಗಳು ಹಾಗೂ ಪಂಚಾಯತ್ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಸಹಾಯಕ ಆಯುಕ್ತರು ಕಡಬ ವಿಶೇಷ ತಹಶೀಲ್ದಾರರಿಗೆ ಪತ್ರ ಬರೆದು ಅಕ್ರಮ ತಿದ್ದುಪಡಿಯ ಬಗ್ಗೆ ಪರಿಶೀಲನೆ ನಡೆಸಿ ವಿವರವಾದ ವರದಿಯೊಂದಿಗೆ ಪಹಣಿ ತಿದ್ದುಪಡಿ ಬಗ್ಗೆ ಆರ್.ಆರ್.ಟಿ. ಶಾಖೆಯಿಂದ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದಾರೆ.
ನಮ್ಮ ದೂರಿಗೆ ಸ್ಪಂದನೆ
ಹಳೆಯ ಕೈಬರಹದ ಪಹಣಿಪತ್ರ ಅಕ್ರಮವಾಗಿ ತಿದ್ದಿ ಸರಕಾರಿ ಜಮೀನು ಎಂದು ತಿದ್ದುಪಡಿಗೊಳಿಸಿರುವುದು ನಮ್ಮ ಗಮನಕ್ಕೆ ಬಂದ ಕೂಡಲೇ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿ ಹಾಗೂ ಕಡಬ ತಹಶೀಲ್ದಾರರಿಗೆ ಪತ್ರ ಬರೆದು ತಪ್ಪನ್ನು ಸರಿಪಡಿಸುವಂತೆ ಒತ್ತಾಯಿಸಿದ್ದೆವು. ಗ್ರಾಮದ ವ್ಯಾಪ್ತಿಯ ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸಿ ಅಂತರ್ಜಲಮಟ್ಟ ಏರಿಕೆಯಾಗಲು ಪ್ರಯತ್ನಿಸಬೇಕೆನ್ನುವ ಸೂಚನೆ ಸರಕಾರದಿಂದ ಇದೆ. ನಮ್ಮ ದೂರಿಗೆ ಸ್ಪಂದಿಸಿರುವ ಕಂದಾಯ ಇಲಾಖೆ ಇದೀಗ ತಪ್ಪನ್ನು ಸರಿಪಡಿಸಲು ಕ್ರಮ ಕೈಗೊಂಡಿದೆ.
-ವಿ ಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್, ಕುಟ್ರಾಪ್ಪಾಡಿ ಪಿಡಿಒ
— ನಾಗರಾಜ್ ಎನ್.ಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.