ಕೌಡಿಚ್ಚಾರ್: ಕಿಂಡಿ ಅಣೆಕಟ್ಟು ಸ್ವಚ್ಛತೆ
Team Udayavani, Jul 5, 2018, 2:55 AM IST
ಕಾವು: ಕೇಂದ್ರ ಸರಕಾರದ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್ಶಿಪ್ ಅಭಿಯಾನದಡಿ ಮಂಗಳೂರು ನೆಹರೂ ಯುವ ಕೇಂದ್ರದ ಸಹಯೋಗದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದ ವತಿಯಿಂದ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ ನಡೆಯಿತು. ಕೌಡಿಚ್ಚಾರ್ ಸೇತುವೆ ಬಳಿ ಇರುವ ಕಿಂಡಿ ಅಣೆಕಟ್ಟು, ಹೊಳೆಯ ಇಕ್ಕೆಲಗಳಲ್ಲಿ ಕಿಂಡಿ ಅಣೆಕಟ್ಟಿನ ಪಿಲ್ಲರ್ ನ ಮಧ್ಯದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮರದ ತುಂಡು, ಕಸ ಕಡ್ಡಿ, ಪ್ಲಾಸ್ಟಿಕ್, ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು. ಹೊಳೆಯ ನೀರು ಕಿಂಡಿ ಅಣೆಕಟ್ಟಿನ ಮೂಲಕ ಸರಾಗವಾಗಿ ಹರಿಯುವಂತೆ ಮಾಡಿ ಮಣ್ಣಿನ ಸವಕಳಿ ಆಗದಂತೆ ತಡೆಯಲಾಯಿತು.
ಸ್ವಚ್ಛತಾ ಕಾರ್ಯದಲ್ಲಿ ಯುವಕ ಮಂಡಲದ ಅಧ್ಯಕ್ಷ ಗಂಗಾಧರ ನಾಯ್ಕ, ಪ್ರಧಾನ ಕಾರ್ಯದರ್ಶಿ ನವೀನ ನನ್ಯಪಟ್ಟಾಜೆ, ಉಪಾಧ್ಯಕ್ಷ ಜಗದೀಶ ಆಚಾರಿಮೂಲೆ, ಜತೆಕಾರ್ಯದರ್ಶಿ ಶ್ರೀಕಾಂತ್ ಗೌಡ, ಸಾಂಸ್ಕೃತಿಕ ಕಾರ್ಯದರ್ಶಿ ಸಂದೇಶ್ ಚಾಕೋಟೆ, ಕೋಶಾಧಿಕಾರಿ ಸತೀಶ ಮದ್ಲ, ಕ್ರೀಡಾ ಕಾರ್ಯದರ್ಶಿ ರಾಘವ ಬಿ., ಸ್ವಚ್ಛತಾ ಸಮಿತಿ ಉಸ್ತುವಾರಿಗಳಾದ ಧನಂಜಯ ನಾಯ್ಕ ಕುಂಞಿಕುಮೇರು, ಸಂಕಪ್ಪ ಪೂಜಾರಿ ಚಾಕೋಟೆ, ಶ್ರೀಕುಮಾರ್ ಬಲ್ಯಾಯ, ಸದಸ್ಯರಾದ ಕಾರ್ತಿಕ್ ನನ್ಯಪಟ್ಟಾಜೆ, ಭವಿತ್ ರೈ, ಹರ್ಷ ಎ.ಆರ್., ದಿನೇಶ್ ಮದ್ಲ, ಪುರುಷೋತ್ತಮ ಆಚಾರ್ಯ ನನ್ಯ, ಸುರೇಶ ಮದ್ಲ, ತಿರುಮಲೇಶ್, ರಾಘವ ಪಿ.ಎಸ್., ಯತೀಶ್ ಮದ್ಲ, ಲಿಂಗಪ್ಪ ನಾಯ್ಕ ನನ್ಯ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.