ಮನೆಗೆ ಬೆಂಕಿ: ಮಹಿಳೆ ಸಾವು,ಮೂವರಿಗೆ ಗಂಭೀರ ಗಾಯ
Team Udayavani, Jul 5, 2018, 10:43 AM IST
ಕಲಬುರಗಿ: ಮನೆಯೊಂದಕ್ಕೆ ಬೆಂಕಿ ಬಿದ್ದ ಪರಿಣಾಮ ಗೃಹಿಣಿಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಎಕ್ಬಾಲ್ ಕಾಲೋನಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಘಟನೆಗೆ ನನ್ನ ಭಾವನೇ ಕಾರಣ ಎಂದು ಗಾಯಗೊಂಡಿರುವ ಸೈಯ್ಯದ್ ಅಂಕರ್ ಶಂಕೆ ವ್ಯಕ್ತಪಡಿಸಿದ್ದಾರೆ. ಈತನ ಪತ್ನಿ ಸೈನಾಜ್ ಬೇಗಂ (35) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರ ಪುತ್ರ ಸೈಯ್ಯದ್ ಯಾಸೀನ್, ಪುತ್ರಿ ಸಾನಿಯಾ ಬೇಗಂ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೈಯ್ಯದ್ ಅಕºರ್ ಸ್ಥಿತಿ ಚಿಂತಾಜನಕವಾಗಿದೆ. ಘಟನೆ ಕುರಿತು ಪೊಲೀಸರು ಸೈಯ್ಯದ್ ಅಕºರ್‌ನನ್ನು ವಿಚಾರಿಸಿದಾಗ, ನನ್ನ ತಂಗಿಯ ಪತಿ ನಮ್ಮ ಮೇಲಿನ ದ್ವೇಷದಿಂದ ಮನೆಯೊಳಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಸಾಮೂಹಿಕ ಹತ್ಯೆ ಮಾಡುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ್ದಾನೆ.
ಮನೆಯಲ್ಲಿ ಬೆಂಕಿ ಕಾಣಿಸಿಕೊಂಡದ್ದನ್ನು ಕಂಡು ಅಕ್ಕಪಕ್ಕದವರು ಗಾಯಾಳುಗಳನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ವೈದ್ಯರ ಸಲಹೆಯಂತೆ ಅವರನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ರವಾನಿಸಲಾಗಿದೆ. ಎಸ್‌ಪಿ ಎನ್.ಶಶಿಕುಮಾರ ಹಾಗೂ ಎ ಉಪವಿಭಾಗದ ಎಎಸ್‌ಪಿ ಲೋಕೇಶ, ರಾಘವೇಂದ್ರ ನಗರ ಠಾಣೆ ಪಿಎಸ್‌ಐ ಅಕ್ಕಮಹಾದೇವಿ ಹಾಗೂ ಸಿಬ್ಬಂದಿ ಆಸ್ಪತ್ರೆಗೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.