ಅತಿಥಿ ಉಪನ್ಯಾಸಕರನೇಮಕಕ್ಕೆ ಮನವಿ
Team Udayavani, Jul 5, 2018, 1:03 PM IST
ಬೆಂಗಳೂರು: ಸೇವಾ ಹಿರಿತನ ಹಾಗೂ ವಯೋಮಾನದ ಆಧಾರದಲ್ಲಿ 2018-19ನೇ ಸಾಲಿಗೆ ಪದವಿ ಕಾಲೇಜಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸರ ಸಂಘ ಆಗ್ರಹಿಸಿದೆ.
ಸಂಘದ ಪದಾಧಿಕಾರಿಗಳು ಬುಧವಾರ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರನ್ನು ಭೇಟಿ ಮಾಡಿ, ಅತಿಥಿ ಉಪನ್ಯಾಸಕರ ನೇಮಕಕ್ಕೆ ಎಂಫಿಲ್ ಪದವಿ ಪೂರೈಸಿದ ಅಭ್ಯರ್ಥಿಗಳನ್ನು ಪರಿಗಣಿಸ ಬೇಕು. ಹತ್ತಾರು ವರ್ಷದಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿಕೊಂಡು ಬರುತ್ತಿರುವವರನ್ನೇ ಮುಂದುವರಿಸಬೇಕು. ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಲು ಇರುವ ಕಾನೂನು ತೊಡಕು ನಿವಾರಿಸಲು ತಜ್ಞರ ಸಮಿತಿ ರಚಿಸಬೇಕು ಎಂದು ಬೇಡಿಕೆ ಸಲ್ಲಿಸಿದರು.
ಅತಿಥಿ ಉಪನ್ಯಾಸಕರ ನೇಮಕಾತಿ ಸಂಬಂಧ ಸ್ನಾತಕೋತ್ತರ ಪದವಿಯ ಶೇ.50 ಅಂಕ, ಪ್ರತಿ ವರ್ಷದ ಸೇವಾನುಭವಕ್ಕೆ 3 ಅಂಕದಂತೆ ಗರಿಷ್ಠ ಅವಧಿಯವರೆಗೆ ಅಂಕ ನೀಡಬೇಕು. ಹೆಚ್ಚುವರಿ ಅರ್ಹತೆಗಾಗಿ ಪಿಎಚ್.ಡಿ, ನೆಟ್, ಸ್ಲೆಟ್, ಎಂಫಿಲ್ ಪದವಿ ಪಡೆದವರನ್ನು ಪರಿಗಣಿಸಿ ಅಂಕ ನೀಡಬೇಕು. ಕೇರಳ, ಆಂಧ್ರ ಮತ್ತು ತೆಲಂಗಾಣದ ಮಾದರಿ ಮಾಸಿಕ 25 ಸಾವಿರ ರೂ. ವೇತನ ನೀಡಬೇಕು ಎಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.