ದಿಲ್ಲಿ ಸರಕಾರಕ್ಕೆ ಹೊಸ ಅಧಿಕಾರವಿಲ್ಲ:ಸುಪ್ರೀಂ ತೀರ್ಪು ಬಗ್ಗೆ ಜೇತ್ಲಿ
Team Udayavani, Jul 5, 2018, 3:31 PM IST
ಹೊಸದಿಲ್ಲಿ : ‘ದಿಲ್ಲಿ ಸರಕಾರದ ಮೇಲಿನ ನಿಯಂತ್ರಣ ಕುರಿತಾದ ಸುಪ್ರೀಂ ಕೋರ್ಟ್ ತೀರ್ಪನ್ನು ಆಮ್ ಆದ್ಮಿ ಪಕ್ಷ ಸಂಭ್ರಮಿಸುವುದಕ್ಕೆ ಯಾವುದೇ ಕಾರಣಗಳಿಲ್ಲ; ಆಪ್ ಸರಕಾರಕ್ಕೆ ಈಗಲೂ ಐಎಎಸ್ ಅಧಿಕಾರಿಗಳ ವರ್ಗಾವಣೆಯನ್ನು ನಿಯಂತ್ರಿಸುವ ಅಥವಾ ತನಿಖಾ ಆಯೋಗವನ್ನು ಸ್ಥಾಪಿಸುವ ಕಾನೂನು ಸಮ್ಮತ ಅಧಿಕಾರಗಳು ಸುಪ್ರೀಂ ಕೋರ್ಟಿನ ತೀರ್ಪಿನಿಂದ ಪ್ರಾಪ್ತವಾಗಿಲ್ಲ’ ಎಂದು ಕೇಂದ್ರ ಸಚಿವ ಅರುಣ್ ಜೇತ್ಲಿ ಹೇಳಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ತೀರ್ಪು ನಿನ್ನೆ ಪ್ರಕಟವಾದೊಡನೆಯೇ ಆಮ್ ಆದ್ಮಿ ಪಕ್ಷ ತನಗಿನ್ನು ತನ್ನ ಇಷ್ಟಾನುಸಾರ ಸರಕಾರಿ ಅಧಿಕಾರಿಗಳನ್ನು ನೇಮಿಸುವ ಮತ್ತು ವರ್ಗಾಯಿಸುವ ಅಧಿಕಾರ ತನಗೆ ಪ್ರಾಪ್ತವಾಗಿದೆ ಎಂದು ಸಂಭ್ರಮಿಸಿತ್ತು.
ಅರುಣ್ ಜೇತ್ಲಿ ಅವರು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಮೂರು ಮುಖ್ಯ ಅಂಶಗಳನ್ನು ಗುರುತಿಸಿದ್ದಾರೆ: ಅವೆಂದರೆ 1. ದಿಲ್ಲಿ ಒಂದು ಕೇಂದ್ರಾಡಳಿತ ಪ್ರದೇಶ; 2. ಕೇಂದ್ರ ಸರಕಾರಕ್ಕೆ ಇಲ್ಲಿನ ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿಯ ಮೇಲೆ ಏಕಮೇವ ಅಧಿಕಾರ ಇರುತ್ತದೆ; 3. ದಿಲ್ಲಿ ಸರಕಾರಕ್ಕೆ ಅಧಿಕಾರಿಗಳನ್ನು ನೇಮಿಸುವ ಮತ್ತು ವರ್ಗಾಯಿಸುವ ಅಧಿಕಾರ ಇರುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
MUST WATCH
ಹೊಸ ಸೇರ್ಪಡೆ
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.