ಸಮನ್ವಯತೆಯಿಂದ ಲಸಿಕಾ ಅಭಿಯಾನ ಯಶಸ್ವಿಗೊಳಿಸಿ
Team Udayavani, Jul 5, 2018, 4:30 PM IST
ದಾವಣಗೆರೆ: ರಾಷ್ಟ್ರೀಯ ಜಂತುಹುಳು ಹಾಗೂ ನಗರ ಇಂದ್ರಧನುಷ್ ಲಸಿಕಾ ಅಭಿಯಾನವನ್ನು ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪದ್ಮಾಬಸವಂತಪ್ಪ ಸೂಚಿಸಿದ್ದಾರೆ.
ಬುಧವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜು. 16 ರಂದು ಮೊದಲ ಸುತ್ತಿನ ನಗರ ಇಂದ್ರಧನುಷ್ ಲಸಿಕಾ ಅಭಿಯಾನ ಹಾಗೂ ಆ. 10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ತಮ್ಮ ಜವಾಬ್ದಾರಿಯನ್ನು ಎಲ್ಲಾ ಇಲಾಖೆಗಳು ಸಮರ್ಪಕವಾಗಿ ನಿಭಾಯಿಸಬೇಕು ಎಂದರು.
ಆರ್‌ಸಿಎಚ್ ಅಧಿಕಾರಿ ಡಾ|ಶಿವಕುಮಾರ್, ಗ್ರಾಮ ಸ್ವರಾಜ್ ಅಭಿಯಾನದಡಿ ಜಿಲ್ಲೆಯ 43 ಗ್ರಾಮಗಳಲ್ಲಿ ಲಸಿಕಾ ಕಾರ್ಯ ಪ್ರಗತಿಯಲ್ಲಿದೆ. ದಾವಣಗೆರೆ ನಗರದ 41 ವಾರ್ಡುಗಳಲ್ಲಿ ಜು. 16 ರಿಂದ 20 ರವರೆಗೆ ಅಭಿಯಾನ ನಡೆಯುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಕುರಿತು ತರಬೇತಿ ನೀಡಲಾಗಿದೆ. ಅವರು ಕೈಗೊಳ್ಳುವ ಸರ್ವೇಯಲ್ಲಿ ಪತ್ತೆಯಾಗುವ ಮಕ್ಕಳಿಗೆ ಲಸಿಕೆ ನೀಡಲು ಆರೋಗ್ಯ ಇಲಾಖೆ
ತಯಾರಿ ನಡೆಸಿದೆ ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆರೋಗ್ಯ ವಿಭಾಗದ ಡಾ| ಚಂದ್ರಶೇಖರ್ ಸುಂಕರ್ ಮಾತನಾಡಿ, ನಗರಪಾಲಿಕೆ ವತಿಯಿಂದ ಲಸಿಕಾ ಅಭಿಯಾನದ ಕುರಿತು ವ್ಯಾಪಕ ಪ್ರಚಾರ ನೀಡಲಾಗುವುದು ಹಾಗೂ ಅಗತ್ಯ ಸಿಬ್ಬಂದಿ ಒದಗಿಸಲಾಗುವುದು ಎಂದು ತಿಳಿಸಿದರು.
ಆ.10 ರ ಶುಕ್ರವಾರ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಶಾಶ್ವತ ಅನುದಾನರಹಿತ ಶಾಲೆಯ ಎಲ್ಲ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಮೂಲಕ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಂದು ವೇಳೆ ಆ. 10 ರಂದು ಜಂತುಹುಳು ನಿವಾರಣಾ ಮಾತ್ರೆ ಸೇವಿಸಲು ಸಾಧ್ಯವಾಗದ ಮಕ್ಕಳಿಗೆ ಆ. 17 ರಂದು ಮಾತ್ರೆ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಜಿಲ್ಲೆಯ 1,443 ಸರ್ಕಾರಿ, 437 ಅನುದಾನಿತ, 499 ಅನುದಾನರಹಿತ ಶಾಲೆ, 36 ವಸತಿ ಶಾಲೆ, 2,415 ಅಂಗನವಾಡಿಗಳು ಮತ್ತು ಪಿಯು ಕಾಲೇಜುಗಳಲ್ಲಿ 1 ರಿಂದ 19 ವಯಸ್ಸಿನ 5,43,742 ಮಕ್ಕಳಿಗೆ ಜಂತುಹುಳು ಮಾತ್ರೆಗಳನ್ನು(ಅಲ್ಬಂಡಜಾಲ್) ನೀಡುವ ಗುರಿ ಹೊಂದಲಾಗಿದೆ. ವಿಟಮಿನ್ ಎ ದ್ರಾವಣ ನೀಡಲಾಗುವುದು. ವಾರದ ಕಬ್ಬಿಣಾಂಶ ಮತ್ತು ಆಮ್ಲದ ಮಾತ್ರೆಗಳ ಪೂರಕ ಕಾರ್ಯಕ್ರಮದ ಜೊತೆಗೆ ವರ್ಷದಲ್ಲಿ ಎರಡು ಬಾರಿ ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುತ್ತದೆ ಎಂದು
ಮಾಹಿತಿ ನೀಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಗಂಗಾಧರ್, ಡಾ. ಸರೋಜಾಬಾಯಿ, ಡಾ| ಮೀನಾಕ್ಷಿ, ಡಾ. ನಂದಾ, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.