ನಗರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಮನವಿ
Team Udayavani, Jul 5, 2018, 5:24 PM IST
ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದ ಒಳಚರಂಡಿ ಹಾಗೂ ವಸತಿ ಸಮಸ್ಯೆ ಸೇರಿದಂತೆ ಹತ್ತು ಹಲವಾರು ಸಮಸ್ಯೆ ಬಗೆಹರಿಸಲು ಹೆಚ್ಚಿನ ಅನುದಾನ ನೀಡಬೇಕು ಎಂದು ಶಾಸಕ ಅಭಯ ಪಾಟೀಲ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ. ಖಾದರ ಅವರಿಗೆ ಮನವಿ ಮಾಡಿದರು. ಬುಧವಾರ ವಿಧಾನ ಸಭೆಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕರು, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಒಳಚರಂಡಿ ಸಮಸ್ಯೆಯಿದೆ. ಇದಕ್ಕೆ ಕೂಡಲೇ ಪರಿಹಾರ ನೀಡಬೇಕು. ಜೊತೆಗೆ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಎಲ್ಲರಿಗೂ ಸರಿಸಮನಾಗಿ ನೀರು ಹಂಚಿಕೆ ಮಾಡಲು ಕ್ರಮ ಜರುಗಿಸಬೇಕು ಎಂದು ಹೇಳಿದರು.
ನಗರದಲ್ಲಿ ಈಗ ಕೇವಲ 10 ವಾರ್ಡ್ಗಳಲ್ಲಿ ನಿರಂತರ ನೀರು ಪೂರೈಕೆ ವ್ಯವಸ್ಥೆ ಇದೆ. ಈ ಯೋಜನೆಯನ್ನು ಎಲ್ಲ 58 ವಾರ್ಡ್ ಗಳಲ್ಲಿ ವಿಸ್ತರಿಸಲು ಮರು ಟೆಂಡರ್ ಕರೆದು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು. ದಕ್ಷಿಣ ಮತಕ್ಷೇತ್ರದಲ್ಲಿ ನೇಕಾರ ಕುಟುಂಬಗಳಿಗೆ ವಿಶೇಷವಾದ ವಸತಿ ಸಮುಚ್ಚಯ ನಿರ್ಮಿಸಿ, ದಕ್ಷಿಣ ಮತಕ್ಷೇತ್ರದ ಬಡ ಕುಟುಂಬಗಳಿಗೆ ಹೆಚ್ಚುವರಿ ಆಶ್ರಯ ಮನೆಗಳನ್ನು ಮಂಜೂರು ಮಾಡಬೇಕು. ನಗರದಲ್ಲಿ ಸ್ವಚ್ಛತಾ ಕಾಮಗಾರಿಗಳು ಸರಿಯಾಗಿ ನಡೆಯುತ್ತಿಲ್ಲ ಸ್ಮಾರ್ಟ್‌ಸಿಟಿ ಪಟ್ಟಿಗೆ ಸೇರಿರುವ ಬೆಳಗಾವಿ ನಗರದಲ್ಲಿ ಸ್ವಚ್ಛತೆ ಕಾಣುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಯು. ಟಿ. ಖಾದರ ಮುಂದಿನ ವಾರ ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿ, ನಗರದ ಸ್ವಚ್ಛತಾ ಕಾಮಗಾರಿ ಸೇರಿದಂತೆ ಪಾಲಿಕೆಯ ಪ್ರಗತಿ ಪರಶೀಲನೆ ಮಾಡುವ ಮೂಲಕ ಅಲ್ಲಿನ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಶಾಸಕ ಅಭಯ ಪಾಟೀಲ ಪ್ರಕಟಣೆ ಮೂಲಕ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.