ಸದ್ಯಕ್ಕೆ ಪ್ರಯಾಣ ದರ ಏರಿಕೆ ಇಲ್ಲ
Team Udayavani, Jul 6, 2018, 11:57 AM IST
ಬೆಂಗಳೂರು: ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡಿದ್ದರೂ ಸದ್ಯಕ್ಕೆ ಪ್ರಯಾಣ ದರ ಏರಿಕೆ ಇಲ್ಲ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ. ಡೀಸೆಲ್ ಮೇಲಿನ ಸೆಸ್ ಹೆಚ್ಚಿಸಿದ್ದರಿಂದ ಸಾರಿಗೆ ನಿಗಮಗಳ ಮೇಲೆ ಹೊರೆ ಆಗುತ್ತದೆ. ಆದರೆ, ಈ ಕಾರಣಕ್ಕಾಗಿ ಸದ್ಯಕ್ಕೆ ದರ ಏರಿಕೆ ಮಾಡುವುದಿಲ್ಲ. ಈ ಹೊರೆಯನ್ನು ನಿಗಮಗಳು ಸಮರ್ಪಕವಾಗಿ ನಿಭಾಯಿಸಲಿವೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಲ್ಕು ನಿಗಮಗಳಿಂದ ಸುಮಾರು ನಾಲ್ಕುವರೆ ಸಾವಿರ ಬಸ್‌ಗಳ ಖರೀದಿಗೆ ಬಜೆಟ್‌ನಲ್ಲಿ ಅನುಮೋದನೆ ಸಿಕ್ಕಿದೆ. ಇದರ ಜತೆಗೆ ಬಿಎಂಟಿಸಿಗೆ 100 ಕೋಟಿ ರೂ. ಸಹಾಯಧನ ನೀಡಿದ್ದಾರೆ. ಬಜೆಟ್ ಪೂರ್ವ ಸಭೆಯಲ್ಲಿ ಒಂದು ಸಾವಿರ ಕೋಟಿ ರು. ಅನುದಾನಕ್ಕೆ ಬೇಡಿಕೆ ಇರಿಸಿದ್ದೆವು.
ಆದರೆ, ನಮಗೆ ಸಮಪರ್ಕವಾಗಿ ಇಲಾಖೆಗೆ ಅನುದಾನ ಸಿಕ್ಕಿಲ್ಲ ಎಂದು ಇದೇ ವೇಳೆ ಬೇಸರ ವ್ಯಕ್ತಪಡಿಸಿದರು. ಬಜೆಟ್‌ನಲ್ಲಿ ಖಾಸಗಿ ಬಸ್ ಸೇವೆಗಳ ತೆರಿಗೆ ಹೆಚ್ಚಳ ಮಾಡಿದ್ದು, ಇದರಿಂದ ಇಲಾಖೆಗೆ ವಾರ್ಷಿಕ 56 ಕೋಟಿ ರೂ. ಆದಾಯ ಬರಲಿದೆ. ಬೆಂಗಳೂರು ನಗರದಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸುವ ಉದ್ದೇಶದಿಂದ ಎಲೆಕ್ಟ್ರಿಕ್ ಬಸ್ ಖರೀದಿಗೆ ಮುಂದಾಗಿದ್ದೇವೆ.
ನಗರದ ವಾರ್ಡ್ ಮಟ್ಟದಲ್ಲಿ ಸಭೆ ನಡೆಸಿ ಸಾರ್ವಜನಿಕ ಸಾರಿಗೆ ಬಳಸುವಂತೆ ಮನವಿ ಮಾಡಲಾಗುವುದು. ಸಾರಿಗೆ ಇಲಾಖೆ ಸುಧಾರಣೆಗಾಗಿ ಕೆಲ ಯೋಜನೆಗಳನ್ನು ರೂಪಿಸುವ ಸಂಬಂಧ ಶೀಘ್ರ ಸಭೆ ಕರೆದು ಚರ್ಚಿಸುವುದಾಗಿ ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.