ಕಟ್ಟಡ ಪುನರ್‌ನಿರ್ಮಾಣಕ್ಕೆ ಪ್ರಸ್ತಾವನೆ
Team Udayavani, Jul 6, 2018, 12:47 PM IST
ಕಡಬ : ಶಿಥಿಲಗೊಂಡು ಕುಸಿದು ಬೀಳುವ ಭೀತಿ ಎದುರಿಸುತ್ತಿರುವ ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ
ಪ್ರೌಢಶಾಲಾ ವಿಭಾಗದ ಹಳೆಯ ತರಗತಿ ಕೊಠಡಿಯ ಕಟ್ಟಡವನ್ನು ತೆರವುಗೊಳಿಸಿ ಪುನರ್ನಿರ್ಮಿಸುವ ನಿಟ್ಟಿನಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಕ್ಕಾಗಿ ಗುರುವಾರ ಕಟ್ಟಡಗಳ ಪರಿಶೀಲನೆ ನಡೆಸಲಾಯಿತು.
ತರಗತಿ ಕೊಠಡಿಗಳಿರುವ ಹಳೆಯ ಕಟ್ಟಡ ಶಿಥಿಲಗೊಂಡು ಗೋಡೆಗಳು ಬಿರುಕುಬಿಟ್ಟು ಕುಸಿದುಬೀಳುವ ಅಪಾಯ ಇರುವುದರ ಬಗ್ಗೆ ಕೆಲ ದಿನಗಳ ಹಿಂದೆ ಉದಯವಾಣಿ ಸುದಿನ ಸಚಿತ್ರ ವರದಿ ಪ್ರಕಟಿಸಿ ಸಂಬಂಧಪಟ್ಟವರ ಗಮನ ಸೆಳೆದಿತ್ತು. ಜಿಲ್ಲಾ ಪಂಚಾಯತ್ ಕಿರಿಯ ಇಂಜಿನಿಯರ್ ಭರತ್ ಅವರು ಶಿಥಿಲಗೊಂಡಿರುವ ತಲಾ 5 ತರಗತಿ ಕೊಠಡಿಗಳಿರುವ 2 ಕಟ್ಟಡಗಳನ್ನು ತೆರವುಗೊಳಿಸಿ ಪುನರ್ನಿರ್ಮಾಣ ಮಾಡುವ ಕುರಿತು ಪ್ರಸ್ತಾವನೆ ಸಲ್ಲಿಸಲು ಅಂದಾಜುಪಟ್ಟಿ ತಯಾರಿಸುವ ಸಲುವಾಗಿ ಮಾಹಿತಿ ಪಡೆದುಕೊಂಡರು.
ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ.ವರ್ಗೀಸ್ ಅವರು ಹಳೆಯ ಶಿಥಿಲಗೊಂಡಿರುವ ಕಟ್ಟಡವನ್ನು ತೆರವುಗೊಳಿಸಲು ಕ್ರಮಕೈಗೊಳ್ಳು ವುದರೊಂದಿಗೆ ಈಗಾಗಲೇ ಹೊಸ ಕಟ್ಟಡ ನಿರ್ಮಾಣಕ್ಕೆ ಸಲ್ಲಿಸಲಾಗಿರುವ ಪ್ರಸ್ತಾವನೆಯನ್ನು ಗಮನಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಸಚಿವರಿಗೆ ಒತ್ತಡ ಹೇರುವುದಾಗಿ ತಿಳಿಸಿದರು. ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕ ಅಬ್ದುಲ್ ಖಾದರ್ ಅವರು ಪೂರಕ ಮಾಹಿತಿ ನೀಡಿದರು. ಕಡಬ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಬು ಮುಗೇರ, ಸದಸ್ಯ ಎ.ಎಸ್. ಶರೀಫ್ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.