ಹೂಳಿನ ಜಾತ್ರೆಗೆ 50 ಶ್ರೀಗಳ ಸಾಥ್‌


Team Udayavani, Jul 6, 2018, 4:10 PM IST

6-july-20.jpg

ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ತುಂಬಿದ ಹೂಳು ತೆಗೆಯುವ ಸಾಂಕೇತಿಕ ಹೂಳಿನ ಜಾತ್ರೆ ಗುರುವಾರ ನಡೆಯಿತು. ಗುಂಡಾ ಅರಣ್ಯ ಪಕ್ಕದ ಗಾಳೆಮ್ಮನ ಗುಡಿ ಗ್ರಾಮದ ಹಿಂದೆ ಹೂಳೆತ್ತುವ ಜಾತ್ರೆಗೆ ಚಾಲನೆ ನೀಡಲಾಯಿತು. ವಿವಿಧ ಮಠಾಧೀಶರು, ನೂರಾರು ರೈತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಐದು ಜೆಸಿಬಿ ಬಳಸಿ ಹೂಳನ್ನು ತೆಗೆಯಲಾಯಿತು. ನಂತರ ಸುಮಾರು 50 ಟ್ರ್ಯಾಕ್ಟರ್‌ಗಳಲ್ಲಿ ಹೂಳನ್ನು ರೈತರ ಜಮೀನುಗಳಿಗೆ ಸಾಗಿಸಲಾಯಿತು.

ಹೂಳೆತ್ತುವ ಜಾತ್ರೆಗೆ ಚಾಲನೆ ನೀಡಿದ ಲಿಂಗನಾಯಕನ ಹಳ್ಳಿಯ ಮಠದ ಚನ್ನವೀರ ಸ್ವಾಮೀಜಿ ಮಾತನಾಡಿ, ರಾಜಕಾರಣಿಗಳು ಕಾವೇರಿ ನೀರಿನ ಸಮಸ್ಯೆ ಬಗೆಹರಿಸಲು ಮುತುವರ್ಜಿ ವಹಿಸುತ್ತಾರೆ. ಆದರೆ ತುಂಗಭದ್ರಾ ಜಲಾಶಯದ ಕುರಿತು ಎಲ್ಲೂ ಮಾತನಾಡುವುದಿಲ್ಲ ಎಂದರು.

ಚಾನೆಕೋಟೆ ಮಠದ ಡಾ| ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸರಕಾರದ ಗಮನ ಸೆಳೆಯಲು ಈ ಕಾರ್ಯವನ್ನು ಮಾಡಲಾಗುತ್ತಿದೆ. ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಜೀವನಾಡಿಯಾಗಿದೆ. ಹೀಗಾಗಿ ಬಜೆಟ್‌ನಲ್ಲಿ ಹೂಳು ತೆಗೆಯಲು ಅನುದಾನ ಮೀಸಲಿಟ್ಟು ವೈಜ್ಞಾನಿಕ ಪದ್ಧತಿಯಿಂದ ಹೂಳನ್ನು ತೆಗೆಯಲು ಮುಂದಾಗಬೇಕೆಂದು ಆಗ್ರಹಿಸಿದರು. ಸರಕಾರ ಸರಿಯಾದ ಯೋಜನೆಯನ್ನು ಹಾಕಿಕೊಂಡರೆ ವರ್ಷಕ್ಕೆ ಒಂದು ಟಿಎಂಸಿ ಮಣ್ಣು ತೆರವು ಮಾಡಬಹುದು. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು. ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ಮಾತನಾಡಿ, ಜಲಾಶಯಕ್ಕೆ 65 ವರ್ಷ ಇತಿಹಾಸವಿದೆ. ನೀರಿನ ಮೂಲಕ ಹರಿದು ಮಣ್ಣು ಜಲಾಶಯದಲ್ಲಿ ಸಂಗ್ರಹವಾಗಿದೆ. ಹೀಗಾಗಿ 33 ಟಿಎಂಸಿ ನೀರಿನ ಮಟ್ಟ ಕುಸಿದು ಹೋಗಿದೆ ಎಂದು ತಿಳಿಸಿದರು.

ಜಲಾಶಯಕ್ಕೆ ತುಂಗಾದಿಂದ ನೀರು ಹರಿದು ಬರುತ್ತಿದೆ. ಆದರೆ, ಭದ್ರಾದಿಂದ ನೀರು ಹರಿದು ಬರುತ್ತಿಲ್ಲ. ಅಲ್ಲದೇ, ಜಲಾಶಯದ ನೀರು ಚಿತ್ರದುರ್ಗ ಜಿಲ್ಲೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಹೀಗಾಗಿ ನದಿ ಜೋಡಣೆ ಮಾಡುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಸ್ವಾಮೀಜಿ, ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಮಹೇಶ್ವರ ಸ್ವಾಮೀಜಿ, ಶಂಕರ ಸ್ವಾಮೀಜಿ, ವೀರಾಂಜನೇಯ ದೇವರು, ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿವಪ್ಪ ತಾತಾನವರು, ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ರೈತ ಮುಖಂಡರು ಇದ್ದರು.  

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.