ಫ.ಗು. ಹಳಕಟ್ಟಿ ವ್ಯಕ್ತಿಯಲ್ಲ, ಅದ್ಭುತ ಶಕ್ತಿ
Team Udayavani, Jul 6, 2018, 4:58 PM IST
ಬಾದಾಮಿ: ಒಂದು ವಿಶ್ವವಿದ್ಯಾಲಯ ಮಾಡಬೇಕಾಗಿರುವ ಕೆಲಸವನ್ನು ಡಾ| ಫ.ಗು. ಹಳಕಟ್ಟಿ ಅವರು ಏಕಾಂಗಿಯಾಗಿ
ಸಾಧಿಸಿದರು. ಅವರೊಬ್ಬ ವ್ಯಕ್ತಿಯಲ್ಲ, ಅದೊಂದು ಅದ್ಭುತ ಶಕ್ತಿ ಎಂದು ಸಾಹಿತಿ ಚಂದ್ರಕಾಂತ ತಾಳಿಕೋಟಿ ಹೇಳಿದರು. ನಗರದ ಅಕ್ಕ ಮಹಾದೇವಿ ಅನುಭಾವ ಮಂಟಪದಲ್ಲಿ ಪ್ರವಚನ ಸಮಿತಿ ಹಾಗೂ ಅಕ್ಕನ ಬಳಗ ಮತ್ತು ಶರಣ ಸಾಹಿತ್ಯ ಪರಿಷತ್ತ ಸಹಯೋಗದಲ್ಲಿ ಹಮ್ಮಿಕೊಂಡ ಡಾ| ಫ.ಗು.ಹಳಕಟ್ಟಿ ಜನ್ಮ ದಿನಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಚನ ಸಾಹಿತ್ಯಕ್ಕೆ ಪುನಶ್ಚೇತನ ನೀಡಿದ ಶ್ರೇಯಸ್ಸು ವಚನ ಪಿತಾಮಹ ಎಂದು ಕರೆಸಿಕೊಂಡಿರುವ ಡಾ|ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಅವರು ಇಡೀ ಇಂಗ್ಲೆಂಡ್ ದೇಶದ ಇತಿಹಾಸ ಸಂಗ್ರಹಿಸಿ ಗ್ರಂಥ ರೂಪದಲ್ಲಿ ಪ್ರಕಟಿಸಿದ್ದಾರೆ. ಈಗಿನ ಕಾಲದ ಪಂಚಾಯತ್ ರಾಜ್ಯ ವ್ಯವಸ್ಥೆಯನ್ನು ಆಗಿನ ಕಾಲದಲ್ಲಿ ಜಾರಿಗೆ ತಂದ ಕೀರ್ತಿ ಗುರುಬಸಪ್ಪನವರಿಗೆ ಸಲ್ಲುತ್ತದೆ. ವಚನ ಸಾಹಿತ್ಯಕ್ಕೆ ಸಂಶೋಧನೆಗಾಗಿ ಹಳಕಟ್ಟಿ ಪಟ್ಟಕಷ್ಟ ಅಸಾಮಾನ್ಯ. ಆದ್ದರಿಂದ ಅವರನ್ನು ವಚನ ಗುಮ್ಮಟ ಎಂಬುದಾಗಿ ಪ್ರಸಿದ್ಧಿ ಹೊಂದಿದ್ದಾರೆ ಎಂದರು.
ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಜಯಶ್ರೀ ಭಂಡಾರಿ ಮಾತನಾಡಿ, ಬಸವತತ್ವದ ಅನುಷ್ಠಾನಕ್ಕಾಗಿ ನಾಡಿನಾದ್ಯಂತ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ಇಳಕಲ್ ವಿಜಯ ಮಹಾಂತೇಶ ಶ್ರೀಗಳು ಇತ್ತೀಚೆಗೆ ನಿಧನರಾಗಿದ್ದಾರೆ. ನಮ್ಮ ಜೊತೆ ಭೌತಿಕವಾಗಿ ಇರದಿದ್ದರೂ ಅವರು ಮಾಡಿರುವ ಸಾಧನೆಗಳು ಸದಾ ನಮ್ಮೊಂದಿಗೆ ಇರುತ್ತವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಲಿಂಗೈಕ್ಯರಾದ ಇಳಕಲ್ ವಿಜಯ ಮಹಾಂತೇಶ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷೆ ಶಾರದಾ ಮೇಟಿ ಮಾತನಾಡಿದರು. ಕಸ್ತೂರೆವ್ವ ಮಮದಾಪುರ, ಅಕ್ಕನ ಬಳಗದ ಅಧ್ಯಕ್ಷೆ ರತ್ನಕ್ಕ ಪಟ್ಟಣದ, ಅನ್ನದಾನಿ ಹಿರೇಮಠ, ಮುಖ್ಯಶಿಕ್ಷಕ ಎಸ್.ಎಸ್. ಕಿತ್ತಲಿ, ಶಶಿಧರ ಮೂಲಿಮನಿ, ಸುಮಾ ಮಾಳಗಿ, ಬೂದಿಹಾಳ, ಪೂಜಾರ, ಶ್ರೀನಿವಾಸ ಕಲಾಲ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.