ಈಗ ಪಾಲಿಕೆ ಆವರಣದ ಕಟ್ಟಡದಲ್ಲೇ ಕಸದ ರಾಶಿ!


Team Udayavani, Jul 7, 2018, 11:24 AM IST

7-july-3.jpg

ಮಹಾನಗರ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸ್ವಚ್ಛತಾ ಸರ್ವೇಕ್ಷಣಾ ಪಟ್ಟಿಯಲ್ಲಿ ದೇಶದಲ್ಲಿಯೇ ಘನತಾಜ್ಯ ನಿರ್ವಹಣೆಗೆ ಮೊದಲ ಸ್ಥಾನ ಪಡೆದ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯ ಸಮೀಪದಲ್ಲೇ ಇರುವ ಪಾಲಿಕೆಗೆ ಸೇರಿದ ಕಟ್ಟದಲ್ಲಿಯೇ ಕಸದ ರಾಶಿ ಬಿದ್ದಿದ್ದು, ಗಬ್ಬು ನಾರುತ್ತಿದೆ. ಇನ್ನೊಂದೆಡೆ, ಸ್ಥಳೀಯ ನಿವಾಸಿಗಳು ಇಲ್ಲಿ ಪ್ರತಿನಿತ್ಯದ ಕಸ ರಾಶಿ ನೋಡಿ ರೋಸಿ ಹೋಗಿದ್ದು, ರೋಗದ ಭೀತಿಯಿಂದ ಬದುಕುತ್ತಿದ್ದಾರೆ.

ನಗರದ ಲಾಲ್‌ಬಾಗ್‌ನ ಮಹಾನಗರ ಪಾಲಿಕೆ ಕಟ್ಟಡದ ಸಮೀಪದಲ್ಲೇ ಇರುವ ಪಾಲಿಕೆ ಅಧೀನ ಕಟ್ಟಡದ ಹಿಂಭಾಗದಲ್ಲಿ ಕಸ ಸೇರಿದಂತೆ ಕಟ್ಟಡದ ತ್ಯಾಜ್ಯಗಳನ್ನು ರಾಶಿ ಹಾಕಲಾಗಿದ್ದು, ಈ ಬಗ್ಗೆ ಮೇಯರ್‌ ಸಹಿತ ಅಧಿಕಾರಿಗಳ ಗಮನಕ್ಕೆ ಸ್ಥಳೀಯರು ತಂದಿದ್ದರೂ ಯಾರೂ ಗಮನ ಹರಿಸುತ್ತಿಲ್ಲ ಎನ್ನಲಾಗಿದೆ.

ಕಸದ ರಾಶಿಯಿಂದ ರೋಗ ಭೀತಿ
ಪಾಲಿಕೆ ಕಟ್ಟಡದ ಸಮೀಪ ಬಸ್‌ ನಿಲ್ದಾಣದ ಹಿಂಭಾಗದಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಕಸ ಹಾಗೂ ತ್ಯಾಜ್ಯಗಳನ್ನು ರಾಶಿ ಹಾಕಿದ್ದರಿಂದ ಮಳೆ ನೀರಿಗೆ ಸೊಳ್ಳೆಗಳು ಉತ್ಪತ್ತಿಯಾಗಿ ರೋಗ ಹರಡುವ ಭೀತಿ ಮೂಡಿದೆ. ಈ ಕಟ್ಟಡದ ಹಿಂಭಾಗದಲ್ಲೇ ಕೆಲವು ಮನೆಗಳಿವೆ, ಇಲ್ಲಿ ದಿನನಿತ್ಯ ನೂರಾರು ಮಂದಿ ಓಡಾಡುತ್ತಿದ್ದು, ಪಾಲಿಕೆ ನಿರ್ಲಕ್ಷ್ಯವನ್ನು
ಸಾರ್ವಜನಿಕರು ದೂಷಿಸುವಂತಾಗಿದೆ.

ಬಸ್‌ ನಿಲ್ದಾಣಗಳಲ್ಲಿನ ಕಸದ ಬುಟ್ಟಿ ಮಾಯ
ಸ್ಮಾರ್ಟ್‌ ಸಿಟಿ ನಗರಗಳ ಪಟ್ಟಿಯಲ್ಲಿ ಹೆಸರು ಪಡೆದ ಮಂಗಳೂರು ಕೆಲವು ಚಿಕ್ಕ ಸಮಸ್ಯೆಗಳನ್ನು ಕಡೆಗಣಿಸಿ ನಗೆಪಾಟಲಿಗೀಡಾಗುತ್ತಿದೆ. ನಗರದ ಪ್ರಮುಖ ಬಸ್‌ ನಿಲ್ದಾಣಗಳನ್ನು ಮೇಲ್ದರ್ಜೆ ಗೇರಿಸಲಾಗಿದೆಯಾದರೂ ಬಸ್‌ ನಿಲ್ದಾಣಗಳಲ್ಲಿ ಕಸದ ಬುಟ್ಟಿಯನ್ನು ಇಡದ ಪರಿಣಾಮ ಜನರು ಎಲ್ಲೆಂದರಲ್ಲಿ ಕಸಗಳನ್ನು ಬೀಸಾಡುತ್ತಿದ್ದಾರೆ. ಹಾಗಾಗಿ ಪ್ರಮುಖ ಬಸ್‌ ನಿಲ್ದಾಣಗಳಲ್ಲಿ ಕಸದ ಬುಟ್ಟಿಗಳನ್ನು ಇಡುವುದು ಉತ್ತಮ ಎಂಬುದು ಸಾರ್ವಜನಿಕರ ಅಭಿಪ್ರಾಯ.

ತ್ಯಾಜ್ಯ ನಿರ್ವಹಣೆಯಲ್ಲಿ  ದೇಶದಲ್ಲೇ ನಂಬರ್‌ ಒನ್‌ ಪಾಲಿಕೆ!
ಸ್ವಚ್ಛ ಸರ್ವೇಕ್ಷಣ- 2016ರಲ್ಲಿ 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯುಳ್ಳ ನಗರಗಳನ್ನು ಆಯ್ಕೆ ಮಾಡಲಾಗಿತ್ತು. 2017ರಲ್ಲಿ 1 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯುಳ್ಳ ನಗರಗಳನ್ನು ಆಯ್ಕೆ ಮಾಡಲಾಗಿತ್ತು. ಈ ಬಾರಿ ಭಾರತ ದೇಶದ ಎಲ್ಲ ನಗರಗಳನ್ನು ಆಯ್ಕೆಯಲ್ಲಿ ಪರಿಗಣಿಸಲಾಗಿದೆ. ಆ ಪ್ರಕಾರ ಘನತ್ಯಾಜ್ಯ ನಿರ್ವಹಣೆಯಲ್ಲಿ ಮಂಗಳೂರು ನಗರವು ದೇಶದಲ್ಲಿಯೇ ಮೊದಲ ಸ್ಥಾನ ಪಡೆದುಕೊಂಡಿತ್ತು.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ‘ಸ್ವಚ್ಛ ಭಾರತ ಮಿಷನ್‌’ ಅಡಿಯಲ್ಲಿ ಸ್ವಚ್ಛತೆಗಾಗಿ ನಗರಗಳಿಗೆ ನೀಡುವ ರೇಟಿಂಗ್‌ ಸಂಬಂಧಿಸಿದಂತೆ, ನಗರದಲ್ಲಿ ಸ್ವಚ್ಛತೆಗಾಗಿ ಕೈಗೊಂಡ ಅಂಶಗಳನ್ನು ಪರಿಶೀಲಿಸಲು ಕೇಂದ್ರದ ಉನ್ನತ ಮಟ್ಟದ ಅಧಿಕಾರಿಗಳ ತಂಡ ಜನವರಿಯಲ್ಲಿ ನಗರಕ್ಕೆ ಆಗಮಿಸಿ ಪರಿಶೀಲನೆ ನಡೆಸಿತ್ತು. ಪಾಲಿಕೆಯು ಈ ಹಿಂದೆ ಸ್ವತ್ಛತೆ ಬಗ್ಗೆ ಕೇಂದ್ರಕ್ಕೆ ಕಳುಹಿಸಿದ ಮಾಹಿತಿಯ ನೈಜತೆಯ ಬಗ್ಗೆ ಕೇಂದ್ರದ ತಂಡ ಪರಿಶೀಲಿಸಿ, ಜತೆಗೆ ನಗರದ ಜನರಿಂದ ಪ್ರಶ್ನೆಗಳಿಗೆ ಉತ್ತರ ಆಹ್ವಾನಿಸಿ, ಅಂಕಗಳ ಹಂಚಿಕೆ ನಡೆಸಿ, ಬಳಿಕ ಫಲಿತಾಂಶ ಪ್ರಕಟಗೊಂಡಿತ್ತು. ಕೆಲವು ದಿನಗಳ ಹಿಂದೆ ಮೇಯರ್‌, ಪಾಲಿಕೆ ಆಯುಕ್ತರು, ಅಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿ ಬಂದಿದ್ದರು.

ಅಧಿಕಾರಿಗಳಿಗೆ ಮನವಿ
ಸಾರ್ವಜನಿಕ ಸ್ಥಳದಲ್ಲಿ ಹೀಗೆ ಹಾಕುವುದರಿಂದ ಆಗಬಹುದಾದ ತೊಂದರೆ ಬಗ್ಗೆ ನಾನು ಪಾಲಿಕೆ ಪರಿಸರ ಅಭಿಯಂತರ, ಮೇಯರ್‌ ಕಚೇರಿಗೆ ತಿಳಿಸಿದ್ದೆ. ಆದರೆ ಯಾರೂ ಇತ್ತ ಗಮನ ನೀಡಿಲ್ಲ.
– ಜೋಸೆಫ್‌ ಡಿ’ಸೋಜಾ,
ಹಿರಿಯ ನಾಗರಿಕರು

ವಿಶೇಷ ವರದಿ

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.