ತೋಕೂರು: ರಸ್ತೆಯಲ್ಲಿಯೇ ಹರಿಯುತ್ತಿದೆ ಚರಂಡಿ ನೀರು
Team Udayavani, Jul 8, 2018, 11:31 AM IST
ತೋಕೂರು : ಇಲ್ಲಿನ ಪಡುಪಣಂಬೂರು ಗಾ.ಪಂ. ನ ತೋಕೂರು ದೇವಸ್ಥಾನದ ರಸ್ತೆಯಿಂದ ಎಸ್.ಕೋಡಿ ರಸ್ತೆಯಲ್ಲಿನ ಚರಂಡಿಯಲ್ಲಿ ಹೂಳು ತುಂಬಿಕೊಂಡಿದ್ದು, ಈ ಪ್ರದೇಶದಲ್ಲಿ ಮಳೆ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತಿದೆ. ಎಸ್. ಕೋಡಿ ಜಂಕ್ಷನ್‌ನಿಂದ ತೋಕೂರು ರಸ್ತೆಯಲ್ಲಿ ವಾಹನಗಳ ಸಂಚಾರವೂ ಸಹ ಹೆಚ್ಚಾಗಿದೆ. ಬೆಳ್ಳಾಯರು ಮುಡಾ ಕಾಲೋನಿಯ ರಸ್ತೆಯ ತಿರುವಿನಲ್ಲಿಯೂ ಈ ಸಮಸ್ಯೆ ಇದೆ. ಚರಂಡಿಗಳಲ್ಲಿ ಗಿಡಗಳು ಬೆಳೆದು ನೀರು ಚರಂಡಿ ಸೇರಲು ಅಡ್ಡಿಯಾಗಿದೆ.
ಸಂಚಾರಿಗಳು ವಾಹನಗಳ ಮೂಲಕ ಸಂಚರಿಸುವಾಗ ನೀರು ಹಾರಿ ಪಾದಚಾರಿಗಳಿಗೂ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿಕೊಂಡಿದ್ದಾರೆ. ಲೋಕೋಪಯೋಗಿ ಇಲಾಖೆಗೆ ಸೇರಿರುವ ಈ ರಸ್ತೆಯಲ್ಲಿನ ನಿರ್ವಹಣೆಯು ಸ್ಥಳೀಯ ಗ್ರಾಮ ಪಂಚಾಯತ್ ನಿರ್ವಹಿಸುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ನಾಗರಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.