ಪತ್ತನಾಜೆ ತುಳು ಸಿನೆಮಾ- ಮುಂಬಯಿಯಲ್ಲಿ  50ನೇ ಪ್ರದರ್ಶನ

Team Udayavani, Jul 8, 2018, 5:14 PM IST

0707mum02.jpg

ಮುಂಬಯಿ: ಪತ್ತನಾಜೆ ತುಳು ಚಲನಚಿತ್ರವು ಎಲ್ಲಾ ವರ್ಗದ ಪ್ರೇಕ್ಷಕರ ಮನಗೆದ್ದು ಅದ್ಭುತ ಯಶಸ್ಸಿನೊಂದಿಗೆ ಭಿವಂಡಿಯಲ್ಲಿ ಮುಂಬಯಿಯ 50 ನೇ ಪ್ರಯೋಗದ ದಾಖಲೆ ಪ್ರದರ್ಶನವನ್ನು ನೀಡಿ ಹೌಸ್‌ಫುಲ್‌ ಶೋ ಮೂಲಕ ಚಿತ್ರದ ಜನಪ್ರಿಯತೆಯನ್ನು ಸಾರಿ ಹೇಳಿದೆ. ಈ ಚಿತ್ರದ ನಿರ್ದೇಶಕ, ನಿರ್ಮಾಪಕ ತೋನ್ಸೆ ವಿಜಯ ಕುಮಾರ್‌ ಶೆಟ್ಟಿ ಅವರು ಲಿಮ್ಕಾ ಬುಕ್‌ ದಾಖಲೆಯ ಮೂಲಕ ವಿಶ್ವ ಖ್ಯಾತಿಯನ್ನು ಪಡೆದ ಈ ದೇಶದ ಮಹಾನ್‌ ಕಲಾವಿದ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದ ಮುಂಬಯಿಯ ಪ್ರತಿಭಾ ಸಂಪನ್ನರು.  ಇದೀಗ ಕಲಾಜೀವನದ ಹೊಸ ಹೆಜ್ಜೆಯಂತೆ ಚಿತ್ರ ನಿರ್ಮಾಣದಂತಹ ಕ್ಲಿಷ್ಟ ಕಾರ್ಯಕ್ಕೆ ಮನಸ್ಸು ಮಾಡಿ ಇಲ್ಲಿಯೂ ಅದ್ಭುತ ಯಶಸ್ಸನ್ನು ಕಂಡಿದ್ದಾರೆ. ಅವರಿಂದ ಇನ್ನಷ್ಟು ಉತ್ತಮ ಚಿತ್ರಗಳು ನಿರ್ಮಾಣಗೊಳ್ಳಲಿ ಎಂದು ಭಿವಂಡಿಯ ನಗರ ಸೇವಕ ಸಂತೋಷ್‌ ಎಂ. ಶೆಟ್ಟಿ  ನುಡಿದರು.
ಜು. 1 ರಂದು ಭಿವಂಡಿಯ ಆಶೀಷ್‌ ಚಿತ್ರ ಮಂದಿರದಲ್ಲಿ ಕಲಾ ಜಗತ್ತು ಮುಂಬಯಿ ಕ್ರಿಯೇಶನ್ಸ್‌ ನಿರ್ಮಾಣದ ಪತ್ತನಾಜೆ ತುಳು ಸಿನೆಮಾದ 50ನೇ ಪ್ರದರ್ಶನದ ಮಧ್ಯೆ ನಡೆದ ಸಮ್ಮಾನ ಸಮಾರಂಭದಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿ, ವಿಜಯ ಕುಮಾರ್‌ ಶೆಟ್ಟಿ ಅವರ ಸಿದ್ಧಿ-ಸಾಧನೆಗಳನ್ನು ಶ್ಲಾಘಿಸಿ, ಶುಭಹಾರೈಸಿದರು.

ಇದೇ ಸಂದರ್ಭದಲ್ಲಿ ಪತ್ತನಾಜೆ ಸಿನೇಮಾದ ಮುಂಬಯಿಯ ಈ 50ನೇ ಪ್ರದರ್ಶನವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು. ಭಿವಂಡಿಯ ಹಾಗೂ ಆಸುಪಾಸಿನ ಗಣ್ಯರು, ಕಲಾಜಗತ್ತು ಮತ್ತು ವಿಜಯಕುಮಾರ್‌ ಶೆಟ್ಟಿ ಅವರ ಅಭಿಮಾನಿಗಳಿಂದ 800 ಆಸನಗಳು ತುಂಬಿ ತುಳುಕುತ್ತಿದ್ದವು. 

ಪ್ರಾರಂಭದಲ್ಲಿ ಚಿತ್ರಪ್ರೇಮಿಗಳು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ವಿನೂತನ ರೀತಿಯಲ್ಲಿ ಚಾಲನೆ ನೀಡಿದರು.

ಸಮಾರಂಭದಲ್ಲಿ ಭಿವಂಡಿ ನಗರ ಸೇವಕ ಸಂತೋಷ್‌ ಶೆಟ್ಟಿ ಹಾಗೂ ಭಿವಂಡಿಯ ಸಮಾಜ ಸೇವಕ, ಉದ್ಯಮಿ ಭಾಸ್ಕರ ಶೆಟ್ಟಿ ಅವರಿಗೆ ಕಲಾಜಗತ್ತು ವತಿಯಿಂದ ತೌಳವ ಸಿರಿ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಲಾಯಿತು. ಶಶಿಲತಾ ಸಂತೋಷ್‌ ಶೆಟ್ಟಿ ಮತ್ತು ಜಯಂತಿ ಭಾಸ್ಕರ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ಬಂಟರ ಸಂಘ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಕಾರ್ಯಾಧ್ಯಕ್ಷ  ಸುಮಿತ್‌ ಶೆಟ್ಟಿ, ಕಲಾವಿದೆ ಐಶ್ವರ್ಯಾ ಶಂಕರ ಪೂಜಾರಿ, ಯುವ ನಾಯಕ ಪ್ರಶಾಂತ್‌ ಪೂಜಾರಿ, ಮುಂಬಯಿಯ ನೃತ್ಯ ನಿರ್ದೇಶಕಿ ದೀಕ್ಷಾ ದೇವಾಡಿಗ ಅವರನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಸಮ್ಮಾನಿಸಲಾಯಿತು.

ಅತಿಥಿಗಳಾಗಿ ಬಂಟರ ಸಂಘ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸತೀಶ್‌ ಎನ್‌. ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ಭಿವಂಡಿ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಮೋಹನ್‌ದಾಸ್‌ ಪೂಜಾರಿ, ಜಯರಾಮ ಪೂಜಾರಿ, ಧರ್ಮದರ್ಶಿ ವಿಶ್ವನಾಥ ಶೆಟ್ಟಿ, ಉದ್ಯಮಿಗಳಾದ ಜಗದೀಶ್‌ ಕೌಡೂರು, ರವೀಂದ್ರ ಶೆಟ್ಟಿ, ವಾಸು ಶೆಟ್ಟಿ, ರಾಮಕೃಷ್ಣ ಶೆಟ್ಟಿ, ಭಾಸ್ಕರ ಶೆಟ್ಟಿ, ಹರೀಶ್‌ ಶೆಟ್ಟಿ, ರಾಜು ಮೆಂಡನ್‌, ನವೀನ್‌ ಶೆಟ್ಟಿ, ರತ್ನಾಕರ ಪೂಜಾರಿ, ಪ್ರಶಾಂತ್‌ ಪೂಜಾರಿ, ಯೋಗೀಶ್‌ ಶೆಟ್ಟಿ, ಆನಂದ, ಶಶಿಕಲಾ ಪೂಜಾರಿ, ಪವಿತ್ರಾ ಶೆಟ್ಟಿ, ಶೈಲಜಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ವಿನೋದಾ ಶಂಕರ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಕಲಾಜಗತ್ತಿನ ಬಿ. ಎಸ್‌. ಪೈ ಅವರು ವಂದಿಸಿದರು.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.