ಸ್ವಚ್ಛತೆ ಕಾಪಾಡುವಲ್ಲಿ ನಾಗರಿಕರ ಸಹಕಾರ ಅತ್ಯಗತ್ಯ 


Team Udayavani, Jul 8, 2018, 5:15 PM IST

8-july-26.jpg

ಯಲಬುರ್ಗಾ: ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು, ರೋಗ ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಬಹು ಮುಖ್ಯವಾಗಿದೆ. ಸ್ವಚ್ಚತೆ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಪಪಂ ಮುಖ್ಯಾಧಿಕಾರಿ ನಾಗೇಶ ಹೇಳಿದರು. ಪಟ್ಟಣದ ಸಿದ್ದರಾಮೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಕೆ ಕೊಪ್ಪಳ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಾರ್ಯಾಲಯದ ವತಿಯಿಂದ ಹಮ್ಮಿಕೊಂಡ ತಾಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪಪಂ ಪೌರಕಾರ್ಮಿಕರು ಪಟ್ಟಣವನ್ನು ಸ್ವಚ್ಛತೆಯಿಂದ ಇಟ್ಟಿದ್ದಾರೆ. ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ವಾತವರಣ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.

ಹಿರಿಯ ಆರೋಗ್ಯ ಸಹಾಯಕ ಪಿ.ವೈ. ಮ್ಯಾಗೇರಿ ಪ್ರಾಸ್ತಾವಿಕ ಮಾತನಾಡಿ, ಮನುಕುಲದ ಇತಿಹಾಸದಲ್ಲೇ ಮಲೇರಿಯಾ ಒಂದು ಹಳೆಯ ಪಿಡುಗು. ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲುವಂತೆ ಮಾಡಿ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿ ಪ್ಲಾಸ್ಮೋಡಿಯಂ ರೋಗಾಣುವಿನಿಂದ ಉಂಟಾಗುತ್ತಿರುವ ಮಾನವ ನಿರ್ಮಿತ ಮಾರಕ ರೋಗವಾಗಿದೆ ಎಂದರು.

ವಿ.ಬಿ.ಡಿ ತಾಂತ್ರಿಕ ಮೇಲ್ವಿಚಾರಕ ಇಮ್ತಿಯಾಜ್‌ ಅಹ್ಮದ್‌ ನೇವಾರ್‌ ಮಾತನಾಡಿ, ಮಲೇರಿಯಾ ರೋಗವು ಸೋಂಕಿತ ಅನಾಫಿಲಿಸ್‌ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ. ಚಳಿಯ ಹಂತ, ಜ್ವರದ ಹಂತ, ಬೇವರಿನ ಹಂತ ಹೀಗೆ ಮೂರು ಹಂತದಲ್ಲಿ ಮಲೇರಿಯಾ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಈ ಲಕ್ಷಣಗಳು ಕಂಡು ಬಂದ ತಕ್ಷಣ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮನೆಯ ಸುತ್ತಮುತ್ತ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ನೀರು ನಿಲ್ಲದಂತೆ ಎಚ್ಚರ ವಹಿಸಿ ತ್ಯಾಜ ವಸ್ತುಗಳನ್ನು ಸೂಕ್ತವಾಗಿ ವಿಲೇವಾರಿ ಮಾಡುವುದು ಹಾಗೂ ಹಗಲಿನಲ್ಲಿಯೂ ಸಹ ಸೊಳ್ಳೆ ಪರದೆ ಉಪಯೋಗಿಸಬೇಕು ಹಾಗೂ ಸಂಜೆ, ಬೆಳಗ್ಗೆ ಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಸಂಜೆ ಮೈ ತುಂಬಾ ಬಟ್ಟೆ ಧರಿಸಿಕೊಂಡು ಸೊಳ್ಳೆ ಕಡಿಯದಂತೆ ರಕ್ಷಣಾ ವಿಧಾನಗಳನ್ನು ಅನುಸರಿಸಬೇಕೆಂದು ಸಲಹೆ ನೀಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಡಿ. ಬೆನ್ನೂರ ಸೊಳ್ಳೆ ಕಡಿತದಿಂದ ಬರುವ ರೋಗಗಳ ಕುರಿತು ತಿಳಿಸಿದರು.

ಮುಖ್ಯಶಿಕ್ಷಕ ಎಸ್‌.ಡಿ. ಅಪ್ಪಾಜಿ ಅಧ್ಯಕ್ಷತೆ ವಹಿಸಿದ್ದರು. ಡಾ| ಶೇಖರ ಭಜಂತ್ರಿ, ಜಿಲ್ಲಾ ಮಲೇರಿಯಾ ಕಾರ್ಯಾಲಯದ ಎಲ್‌.ವಿ. ಸಜ್ಜನ್‌ ಮತ್ತು ಆರೋಗ್ಯ ಇಲಾಖೆಯ ಪ್ರಭಾರಿ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಮಂಜುಳಾ ರಾಟಿ, ಕಿರಿಯ ಆರೋಗ್ಯ ಸಹಾಯಕಿಯರಾದ ಎನ್‌.ಆರ್‌. ತೋಟದ, ಅಶೋಕ ಆಲೂರು ಹಾಗೂ ಪ್ರೌಢಶಾಲೆಯ ಹಾಗೂ ಕಾಲೇಜಿನ ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು. ಕುಮಾರಿ ರೇಣುಕಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಆರೋಗ್ಯ ಮಿತ್ರ ಪ್ರಕಾಶ ಭಿಕ್ಷಾವರ್ತಿಮಠ ಸ್ವಾಗತಿಸಿದರು. ಅರುಣಕುಮಾರ ಹಿರೇಮಠ ನಿರೂಪಿಸಿದರು. ಬೆಳಗ್ಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ಜರುಗಿತು.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ShreeKanth

Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್‌ ಬಿದ್ದು ಗಾಯಗೊಂಡಿದ್ದ ಎಎಸ್‌ಐ ಸಾವು

Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್‌ ಬಿದ್ದು ಗಾಯಗೊಂಡಿದ್ದ ಎಎಸ್‌ಐ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.