ವಿಶ್ವದ ಅತಿದೊಡ್ಡ ಮೊಬೈಲ್ ಫ್ಯಾಕ್ಟರಿ ಉದ್ಘಾಟನೆ ಇಂದು
Team Udayavani, Jul 9, 2018, 10:24 AM IST
ಹೊಸದಿಲ್ಲಿ: ನೋಯ್ಡಾದಲ್ಲಿ ಸ್ಥಾಪಿಸಲಾಗಿರುವ ವಿಶ್ವದ ಅತಿದೊಡ್ಡ ಮೊಬೈಲ್ ಫ್ಯಾಕ್ಟರಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ ಇನ್ ಸೋಮವಾರ ಉದ್ಘಾಟಿಸಲಿದ್ದಾರೆ. ರವಿವಾರವೇ ಮೂನ್ ಜೇ ಅವರು ಭಾರತಕ್ಕೆ ಆಗಮಿಸಿದ್ದಾರೆ.
ಸ್ಯಾಮ್ಸಂಗ್ನ ಈ ಫ್ಯಾಕ್ಟರಿ 35 ಎಕರೆ ವ್ಯಾಪ್ತಿಯಲ್ಲಿದ್ದು, 12 ಕೋಟಿ ಯೂನಿಟ್ಗಳನ್ನು ಒಂದು ವರ್ಷದಲ್ಲಿ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 2005ರಲ್ಲಿ ಈ ಘಟಕ ಸ್ಥಾಪನೆಯಾಗಿತ್ತಾದರೂ 4,915 ಕೋಟಿ ರೂ. ವೆಚ್ಚದಲ್ಲಿ ಘಟಕವನ್ನು ವಿಸ್ತರಿಸಲಾಗಿದೆ.
ಸದ್ಯ ಈ ಘಟಕದಲ್ಲಿ 6.7 ಕೋಟಿ ಯೂನಿಟ್ಗಳನ್ನು ಉತ್ಪಾದಿಸಲಾಗುತ್ತಿದೆ. ನೂತನ ಘಟಕ ಚಾಲನೆಗೊಂಡ ಅನಂತರದಲ್ಲಿ ಉತ್ಪಾದನೆ ಸಾಮರ್ಥ್ಯ ದುಪ್ಪಟ್ಟಾಗಲಿದೆ. ಮೊಬೈಲ್ ಮಾತ್ರವಲ್ಲ, ಸ್ಯಾಮ್ಸಂಗ್ನ ಇತರ ಉತ್ಪನ್ನಗಳಾದ ರೆಫ್ರಿಜರೇಟರ್ಗಳು, ಟಿವಿ ಪ್ಯಾನೆಲ್ಗಳ ಉತ್ಪಾದನೆಯೂ ಹೆಚ್ಚಲಿದೆ. ಇದರಿಂದಾಗಿ ಸ್ಯಾಮ್ಸಂಗ್ ಉತ್ಪನ್ನಗಳನ್ನು ವಿದೇಶದಲ್ಲಿ ಪರಿಚಯಿಸಿದ ವೇಗದಲ್ಲೇ ಭಾರತದಲ್ಲಿ ಪರಿಚಯಿಸಲು ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.