ಅಪಘಾತದಲ್ಲಿ ಪಾದಚಾರಿ ಸಾವು
Team Udayavani, Jul 9, 2018, 12:12 PM IST
ಬೆಂಗಳೂರು: ಮಹೇಂದ್ರ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಸರ್ಜಾಪುರ ರಸ್ತೆಯ ದೊಡ್ಡಕನ್ನಹಳ್ಳಿ ಬಳಿ ಶನಿವಾರ ತಡರಾತ್ರಿ ನಡೆದಿದೆ. ಸರ್ಜಾಪುರ ನಿವಾಸಿ ಕೋಟೇಶ್ವರರಾವ್ (60) ಮೃತರು.
ಅಪಘಾತವೆಸಗಿದ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಕೋಟೇಶ್ವರರಾವ್ ಎರಡು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದು, ಕುಟುಂಬ ಸಮೇತ ಸರ್ಜಾಪುರದಲ್ಲಿ ವಾಸವಾಗಿದ್ದಾರೆ.
ಕೋಟೇಶ್ವರರಾವ್ ಕೂಲಿ ಕೆಲಸ ಮಾಡುತ್ತಿದ್ದು ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಸರ್ಜಾಪುರ ರಸ್ತೆಯ ದೊಡ್ಡಕನ್ನಹಳ್ಳಿ ಬಳಿ ರಸ್ತೆ ದಾಟುವಾಗ ವೇಗವಾಗಿ ಬಂದ ಮಹೇಂದ್ರ ಬೊಲೆರೋ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಕೋಟೇಶ್ವರರಾವ್ರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪ್ರಕರಣ ಎಚ್ಎಸ್ಆರ್ ಲೇಔಟ್ ಸಂಚಾರ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.