ಸಿಲಿಂಡರ್ ಸ್ಫೋಟ: ಯುವಕನಿಗೆ ಗಾಯ
Team Udayavani, Jul 9, 2018, 12:12 PM IST
ಬೆಂಗಳೂರು: ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡು ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ವಿಜಯನಗರದ ಪಟ್ಟೇಗಾರ ಪಾಳ್ಯದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಫೈರೋಜ್ (20) ಗಾಯಗೊಂಡವ.
ಭಾನುವಾರ ಮಧ್ಯಾಹ್ನ 15 ಕೆ.ಜಿ ಸಿಲಿಂಡರ್ ನಿಂದ, ಆಟೋಗೆ ಬಳಸುವ 5 ಕೆ.ಜಿ ಸಿಲಿಂಡರ್‌ಗೆ ಗ್ಯಾಸ್ ರೀಫಿಲ್ ಮಾಡುವಾಗ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿದ್ದು, ಫೈರೋಜ್‌ನ ಮುಖ, ಕೈ ಹಾಗೂ ಕಾಲಿಗೆ ಗಂಭೀರವಾದ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ವಿಜಯನಗರದ ಪಟ್ಟೇಗಾರ್ ಪಾಳ್ಯದಲ್ಲಿ ನಿವಾಸಿಯಾಗಿರುವ ಉಮಾಶಂಕರ್ ತಮ್ಮ ಮನೆಯ ನೆಲಮಹಡಿಯಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಏಜೆನ್ಸಿ ನಡೆಸುತ್ತಿದ್ದಾರೆ. ಈ ಏಜೆನ್ಸಿಯಲ್ಲಿ ಫೈರೋಜ್ ಕೆಲಸ ಮಾಡಿಕೊಂಡಿದ್ದ. ಘಟನೆ ಸಂಬಂಧ ಉಮಾಶಂಕರ್ ವಿರುದ್ಧ ನಿರ್ಲಕ್ಷ್ಯ ಹಾಗೂ ಅಕ್ರಮವಾಗಿ ಸಿಲಿಂಡರ್ ದಾಸ್ತಾನು ಮಾಡಿದ ಆರೋಪದ ಮೇಲೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.