ಜೀಗುಪ್ಸೆಗೊಂಡು ಇಬ್ಬರು ಆತ್ಮಹತ್ಯೆ
Team Udayavani, Jul 9, 2018, 12:12 PM IST
ಬೆಂಗಳೂರು: ಕಾಡುಗೊಂಡನಹಳ್ಳಿ ಹಾಗೂ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಟೈಲರ್ ಹಾಗೂ ಪೇಂಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜೀವನದಲ್ಲಿ ಜೀಗುಪ್ಸೆಗೊಂಡು ಬಿಹಾರ ಮೂಲದ ಟೈಲರ್ ವೇದಪ್ರಕಾಶ್ ಎಂಬಾತ ನೇಣಿಗೆ ಶರಣಾದ ಘಟನೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ವೇದಪ್ರಕಾಶ್ ಸ್ನೇಹಿತರ ಜತೆ ಬೊಮ್ಮನಹಳ್ಳಿಯ ಕೋಡಿಚಿಕ್ಕನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.
ಗಾರ್ಮೆಂಟ್ಸ್‌ವೊಂದರಲ್ಲಿ ಟೈಲರಿಂಗ್ ಕೆಲಸ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಸ್ವಂತ ಊರಿಗೆ ಹೋಗಿ ಬಂದಾಗಿನಿಂದಲೂ ಬೇಸರದಿಂದ ಇದ್ದರು. ಶನಿವಾರ ಸಂಜೆ ಸ್ನೇಹಿತರು ಹೊರ ಹೋದಾಗ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಮತ್ತೂಂದು ಪ್ರಕರಣದಲ್ಲಿ ಕಾಡುಗೊಂಡನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಪೇಂಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಳೇ ಬಾಗಲೂರು ಲೇಔಟ್ ನಿವಾಸಿ ಭಾಸ್ಕರ್ (32) ಆತ್ಮಹತ್ಯೆ ಮಾಡಿಕೊಂಡವರು.
8 ವರ್ಷಗಳ ಹಿಂದೆ ಭಾಸ್ಕರ್‌ಗೆ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಪತ್ನಿ ತವರು ಮನೆಗೆ ಹೋಗಿದ್ದರು. ಶನಿವಾರ ಸಂಜೆ ಕೆಲಸದಿಂದ ಮನೆಗೆ ಬಂದ ಭಾಸ್ಕರ್, ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ರಾತ್ರಿ 9 ಗಂಟೆಗೆ ತಾಯಿ ಊಟಕ್ಕೆ ಕರೆಯಲು ಕೊಠಡಿಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.