ಸಮಾಜ ಒಡೆಯುವ ಪ್ರಯತ್ನ ಸಲ್ಲ
Team Udayavani, Jul 9, 2018, 1:25 PM IST
ಸಿಂಧನೂರು: ರಾಜ್ಯದ ಅತೀ ದೊಡ್ಡ ಹಾಗೂ ಇತರ ಸಮಾಜಗಳಿಗೆ ಮಾದರಿಯಾಗಿದ್ದ ವೀರಶೈವ ಸಮಾಜ ಒಡೆಯುವ ಪ್ರಯತ್ನಗಳು ನಡೆದಿರುವುದು ಸರಿಯಲ್ಲ ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ ಅಭಿಪ್ರಾಯಪಟ್ಟರು.
ತಾಲೂಕು ವೀರಶೈವ ಸಮಾಜ ಹಾಗೂ ಅಖೀಲ ಭಾರತ ವೀರಶೈವ ಮಹಾಸಭಾದಿಂದ ನಗರದ ಕೋಟೆ ವೀರಣ್ಣ ಕಲ್ಯಾಣ ಮಂಟಪದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ವೀರಶೈವ ಹಾಗೂ ಲಿಂಗಾಯತ ಎರಡೂ ಒಂದೇ. ಆದರೆ ಪ್ರಸ್ತುತ ದಿನಗಳಲ್ಲಿ ಸಮಾಜ ಯಾವ ದಿಕ್ಕಿನತ್ತ ಸಾಗುತ್ತಿದೆ ಎನ್ನುವುದನ್ನು ನೋಡಿದರೆ ವಿಷಾದವೆನಿಸುತ್ತದೆ. ಬಡವರಿಗೆ, ತುಳಿತಕ್ಕೊಳಗಾದ ಸಮಾಜ ಆಸರೆಯಾಗಬೇಕಾಗಿದೆ ಎಂದರು.
ಸಮಾಜದ ಸಂಘಟನೆ ಇನ್ನೊಂದು ಸಮಾಜದ ವಿರುದ್ಧವಲ್ಲ. ಸೌಲಭ್ಯಗಳನ್ನು ಪಡೆಯಲು ಸಂಘಟನೆ ಅನಿವಾರ್ಯವಾಗಿದೆ. ಸಮಾಜದಲ್ಲಿ ಕೊಡುವ ಕೈಗಳಿಗೆ ಕೊರತೆಯಿಲ್ಲ. ಪ್ರಾಮಾಣಿಕತೆಯಿಂದ ಮಾಡುವ ಮನಸ್ಸು ಬೇಕಾಗಿದೆ. ಸಿಂಧನೂರು ತಾಲೂಕಿನಲ್ಲಿ ಅತೀ ದೊಡ್ಡ ವೀರಶೈವ ಸಮಾಜಕ್ಕೆ ಕಲ್ಯಾಣ ಮಂಟಪ ಇಲ್ಲ ಎನ್ನುವುದು ತಲೆ ತಗ್ಗಿಸಬೇಕಾದ ವಿಷಯವಾಗಿದೆ. ಸಣ್ಣ ಸಣ್ಣ ಸಮಾಜಗಳು ಸಂಘಟನೆಗೊಂಡು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿವೆ. ಸಮಾಜದ ಕೆಲಸ ಮಾಡಲು ತಾವು ಸದಾಸಿದ್ದ. ವೀರಶೈವ ಸಮಾಜದ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.
ಹೂಗಾರ ಪ್ರಶಸ್ತಿ ಪಡೆದ ವೀರಶೈವ ಸಮಾಜದ ಪತ್ರಕರ್ತ ಅಶೋಕ ಬೆನ್ನೂರ ಅವರನ್ನು ಸನ್ಮಾನಿಸಲಾಯಿತು. ಕಲ್ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕರಿಬಸವ ನಗರದ ಶ್ರೀ ಸೋಮನಾಥ ಶಿವಾಚಾರ್ಯರು, ಯದ್ದಲದೊಡ್ಡಿಯ ಶ್ರೀ ಮಹಾಲಿಂಗ ಸ್ವಾಮೀಜಿ, ವೆಂಕಟಗಿರಿ ಕ್ಯಾಂಪಿನ ಸಿದ್ದರಾಮ ಶರಣರು ಸಾನಿಧ್ಯ ವಹಿಸಿದ್ದರು. ವೀರಶೈವ ಸಮಾಜ ಅಧ್ಯಕ್ಷ ಅಶೋಕಗೌಡ ಗದ್ರಟಗಿ, ಮಹಾಸಭಾ ಅಧ್ಯಕ್ಷ ಎನ್.ಶಿವನಾಗಪ್ಪ ಇತರರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.