ಜಾರ್ಜ್ ಪರ ಸಿಎಂ ಬ್ಯಾಟಿಂಗ್
Team Udayavani, Jul 10, 2018, 7:00 AM IST
ವಿಧಾನಸಭೆ: ಐಎಎಸ್ ಅಧಿಕಾರಿ ಡಿ.ಕೆ.ರವಿ ಹಾಗೂ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ “ಬ್ಯಾಟಿಂಗ್’ ಮಾಡಿದ್ದಾರೆ.
ರವಿ ಆಕಸ್ಮಿಕ ಸಾವು ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ವರದಿ ಬಂದಿದ್ದು, ಅದರಲ್ಲಿ ಜಾರ್ಜ್ ಅವರ ಪಾತ್ರ ಇಲ್ಲ ಎಂಬುದು ಸಾಬೀತಾಗಿದೆ. ಅದೇ ರೀತಿ ಗಣಪತಿ ಪ್ರಕರಣವನ್ನೂ ತನಿಖೆಗೆ ನೀಡಲಾಗಿದ್ದು, ಆ ಪ್ರಕರಣದಲ್ಲೂ ಜಾರ್ಜ್ ಪಾತ್ರ ಇಲ್ಲ ಎಂಬ ಮಾಹಿತಿ ಇದೆ. ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಗೌರವವಿಟ್ಟು ನಾವು ನಡೆದುಕೊಳ್ಳಬೇಕಾಗುತ್ತದೆ ಎಂದರು.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಸಂದರ್ಭದಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಅವರು ಡಿ.ಕೆ.ರವಿ ಹಾಗೂ ಗಣಪತಿ ಪ್ರಕರಣ ಉಲ್ಲೇಖೀಸಿದ್ದನ್ನು ಪ್ರಸ್ತಾಪಿಸಿದ ಕುಮಾರಸ್ವಾಮಿ, ನನ್ನ ಧ್ವನಿ ಹಾಗೂ ನಡೆಯಲ್ಲಿ ಗಡಸು ಕಡಿಮೆಯಾಗಿಲ್ಲ. ಎರಡೂ ಪ್ರಕರಣಗಳಲ್ಲಿ ನ್ಯಾಯಾಲಯ ಹಾಗೂ ತನಿಖಾ ವರದಿ ಏನಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ನನ್ನ ಸಂಪುಟದಲ್ಲಿ ಕೈಗಾರಿಕೆ ಸಚಿವರಾಗಿರುವ ಅವರು ಹಿಂದೆ ನಮ್ಮ ಒತ್ತಾಯಕ್ಕೆ ಮಣಿದು ರಾಜೀನಾಮೆ ಸಹ ನೀಡಿದ್ದರು.
ಡಿ.ಕೆ.ರವಿ ಹಾಗೂ ಡಿವೈಎಸ್ಪಿ ಗಣಪತಿ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸುವಂತೆ ಒತ್ತಡ ಹೇರಿದ್ದು ನಾನೇ. ಪ್ರತಿಪಕ್ಷದಲ್ಲಿದ್ದು, ಆ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕರ್ತವ್ಯ ಅದು. ಆದರೆ, ನ್ಯಾಯಾಲಯದ ಆದೇಶಕ್ಕೆ ಎಲ್ಲರೂ ತಲೆಬಾಗಬೇಕಲ್ಲವೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.